Homeಮುಖಪುಟ‘ಲಖಿಂಪುರ್ ಖೇರಿ ಬಗ್ಗೆ ನೀವ್ಯಾಕೆ ಮೌನವಾಗಿದ್ದೀರಿ?’: ಮೋದಿಗೆ ಕಪಿಲ್ ಸಿಬಲ್ ಪ್ರಶ್ನೆ

‘ಲಖಿಂಪುರ್ ಖೇರಿ ಬಗ್ಗೆ ನೀವ್ಯಾಕೆ ಮೌನವಾಗಿದ್ದೀರಿ?’: ಮೋದಿಗೆ ಕಪಿಲ್ ಸಿಬಲ್ ಪ್ರಶ್ನೆ

- Advertisement -
- Advertisement -

ಲಖಿಂಪುರ್ ಹತ್ಯಾಕಾಂಡದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಕಪಿಲ್ ಸಿಬಲ್ ಶುಕ್ರವಾರ ಪ್ರಶ್ನಿಸಿದ್ದು, ಅವರಿಂದ ಕನಿಷ್ಠ ಅನುಕಂಪದ ಮಾತಾದರೂ ಬರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಗೆ, ಕಳೆದ ಭಾನುವಾರ ಕಾರ್ಯಕ್ರಮವೊಂದಕ್ಕೆ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಆಗಮಿಸಿದ್ದರು. ಈ ವೇಳೆ ರೈತರು ಅವರ ವಿರುದ್ದ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಮುಗಿಸಿ ವಾಪಾಸು ಹೋಗುತ್ತಿದ್ದಾಗ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಲಾಗಿತ್ತು. ಘಟನೆಯ ವಿಡಿಯೊ ಕೂಡಾ ವೈರಲ್ ಆಗಿದ್ದು, ಘಟನೆಯಲ್ಲಿ ನಾಲ್ಕು ರೈತರು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ಇಂದು ಬೆಳಿಗ್ಗೆ ಟ್ವೀಟ್‌‌‌ ಮಾಡಿದ ಕಪಿಲ್ ಸಿಬಲ್, “ಭಯಾನಕ ಲಖಿಂಪುರ್ ಖೇರಿ. ಮೋದಿ ಅವರೇ, ನೀವು ಯಾಕೆ ಮೌನವಾಗಿದ್ದೀರಿ? ನಿಮ್ಮಿಂದ ನಮಗೆ ಕನಿಷ್ಠ ಒಂದು ಅನುಕಂಪದ ಮಾತಾದರೂ ಬೇಕು. ಇದೇನು ಕಷ್ಟದ ವಿಷಯವಲ್ಲ. ಒಂದು ವೇಳೆ ವಿರೋಧ ಪಕ್ಷದಲ್ಲಿದ್ದರೆ ನೀವು ಹೇಗೆ ಪ್ರತಿಕ್ರಿಯಿಸುತ್ತೀರಿ? ದಯವಿಟ್ಟು ನಮಗೆ ತಿಳಿಸಿ” ಎಂದು ಹೇಳಿದ್ದಾರೆ.

 

ಇದನ್ನೂ ಓದಿ: ಲಖಿಂಪುರ್‌ ಖೇರಿಗೆ ಪಾದಯಾತ್ರೆ: ಆರೋಪಿಗಳನ್ನು ಬಂಧಿಸದಿದ್ದರೇ ಉಪವಾಸ ಸತ್ಯಾಗ್ರಹ-ನವಜೋತ್ ಸಿಂಗ್ ಸಿಧು

ಘಟನೆ ನಡೆದು ಎರಡು ದಿನಕಳೆದ ನಂತರ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದಕ್ಕೆ ಆಗಮಿಸಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಕೂಡಾ ಅವರು ಘಟನೆಯ ಬಗ್ಗೆ ಯಾವುದೆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿರಲಿಲ್ಲ.

ಹತ್ಯಾಕಾಂಡದ ಬಗ್ಗೆ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಕಪಿಲ್ ಸಿಬಲ್ ಈ ಹಿಂದೆ ಒತ್ತಾಯಿಸಿದ್ದರು.

ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡ ನಂತರ ಕಪಿಲ್ ಸಿಬಲ್‌ ಮುಖ್ಯ ನ್ಯಾಯಮೂರ್ತಿಗೆ ಧನ್ಯವಾದ ಅರ್ಪಿಸಿದ್ದರು. ಅಲ್ಲದೆ, ಭಾರತದಲ್ಲಿ ನ್ಯಾಯಾಲಯಗಳು ಧ್ವನಿ ಇಲ್ಲದವರ ನಂಬಿಕೆಯನ್ನು ಪುನಃಸ್ಥಾಪಿಸುವ ನ್ಯಾಯದ ದೇವಾಲಯಗಳು ಎಂದು ಹೇಳಿದ್ದರು.

ಹತ್ಯಾಕಾಂಡ ಪ್ರಕರಣದಲ್ಲಿ ಯುಪಿ ಪೊಲೀಸರು ಗುರುವಾರ ಇಬ್ಬರನ್ನು ಬಂಧಿಸಿದ್ದಾರೆ. ಆದರೆ, ಪ್ರಕರಣದ ಪ್ರಮುಖ ಆರೋಪಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಬಂಧನ ಇನ್ನೂ ಆಗಿಲ್ಲ.

 

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: 100 ಗಂಟೆಯಾದರೂ ಆರೋಪಿಗಳ ಬಂಧನವಿಲ್ಲ – ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...