Homeಮುಖಪುಟ'ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಬಿಜೆಪಿ ಮೌನವಾಗಿದೆ ಯಾಕೆ..'; ಪ್ರಧಾನಿಯನ್ನು ಪ್ರಶ್ನಿಸಿದ ಸಿಎಂ

‘ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಬಿಜೆಪಿ ಮೌನವಾಗಿದೆ ಯಾಕೆ..’; ಪ್ರಧಾನಿಯನ್ನು ಪ್ರಶ್ನಿಸಿದ ಸಿಎಂ

- Advertisement -
- Advertisement -

ದೇಶದಾದ್ಯಂತ ಬಹುಚರ್ಚಿತ ವಿಷಯವಾಗಿರುವ ‘ಚುನಾವಣಾ ಬಾಂಡ್’ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ‘ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ’ ಎಂದು ಆಗ್ರಹಿಸಿದ್ದಾರೆ.

ಇಂದು ರಾಜ್ಯದ ಕಲಬುರಗಿ ಜಿಲ್ಲೆಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಪ್ರಶ್ನಿಸಿರುವ ಸಿಎಂ ಸಿದ್ದರಾಮಯ್ಯ, ‘ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ; ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಾರ್ಟಿ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ’ ಎಂದು ಪ್ರಶ್ನಿಸಿರುವ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಉತ್ತರಿಸಿ ಎಂದಿದ್ದಾರೆ.

ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್ ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಪ್ರಧಾನಿಯವರೇ ಉತ್ತರಿಸಿ ಎಂಸು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪೆನಿಗಳು. ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಧಿಗಳು ಎಷ್ಟು ಸುರಕ್ಷಿತ? ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿಗಳೆ ಎಂದು ಅವರು ಪ್ರಶ್ನಿಸಿದ್ದಾರೆ.

ಸುಪ್ರೀಂಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ. ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದು ತಮ್ಮ ಹೇಳಿಕೆಯ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಏಳನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...