Homeಮುಖಪುಟಆರಗ ಜ್ಞಾನೇಂದ್ರ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿಲ್ಲವೇಕೆ? - ಕಿಮ್ಮನೆ ರತ್ನಾಕರ್ ಪ್ರಶ್ನೆ

ಆರಗ ಜ್ಞಾನೇಂದ್ರ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿಲ್ಲವೇಕೆ? – ಕಿಮ್ಮನೆ ರತ್ನಾಕರ್ ಪ್ರಶ್ನೆ

- Advertisement -
- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ ಖಂಡ್ರೆ ಅವರ ಬಣ್ಣದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಯಾವ ಬಿಜೆಪಿ ನಾಯಕರೂ ಖಂಡಿಸಿಲ್ಲವೇಕೆ? ಏಕೆಂದರೆ ಬಿಜೆಪಿಗರ ಮೌನ ಜ್ಞಾನೇಂದ್ರರವರ ಹೇಳಿಕೆಯನ್ನು ಸಮರ್ಥಿಸುವಂತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, “ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ. ಅವರ ಮಾತುಗಳು ಜಾತಿ, ಧರ್ಮ, ಸಮುದಾಯಗಳನ್ನು ದ್ವೇಷಿಸುವ ಬಿಜೆಪಿಯ ಸಿದ್ಧಾಂತಗಳನ್ನು ಪ್ರತಿಪಾದಿಸುತ್ತವೆ” ಎಂದು ಕಿಡಿಕಾರಿದ್ದಾರೆ.

ಆರಗ ಜ್ಞಾನೇಂದ್ರ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಬಾಯ್ತಪ್ಪಿನಿಂದ ಖರ್ಗೆ ಅವರ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ ಎಂದರೆ ನಂಬಲಾಗದು. ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿರುವ ಅವರ ಶಾಸಕ ಸ್ಥಾನವನ್ನು ವಜಾಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಯಾವ ಬಿಜೆಪಿ ನಾಯಕರೂ ಖಂಡಿಸಿಲ್ಲ. ಬಿಜೆಪಿಗರ ಮೌನ, ಜಾನೇಂದ್ರ ಅವರ ಹೇಳಿಕೆಯನ್ನು ಸಮರ್ಥಿಸುವಂತಿದೆ. ಈ ಹಿಂದೆ ಸಂಸದ ಅನಂತ ಕುಮಾರ್ ಹೆಗೆಡೆ ಅವರು ಸಂವಿಧಾನದ ವಿರುದ್ಧ ಮಾತನಾಡಿದಾಗಲೂ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ಓಟುಗಳೇ ಬೇಡವೆಂದು ದ್ವೇಷದ ಹೇಳಿಕೆ ನೀಡಿದಾಗಲೂ ಬಿಜೆಪಿಗರು ಮೌನವಾಗಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಸ್ತೂರಿ ರಂಗನ್‌ ವರದಿಯನ್ನು ಬಿಜೆಪಿಗರು ಒಪ್ಪಿಕೊಂಡಿದ್ದಾರೆ. ಆದರೆ, ಮತದಾರರನ್ನು ಮಂಗ ಮಾಡಲು ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಕಾಂಗ್ರೆಸ್ ವಿರೋಧಿಸಿತ್ತು. ಆದರೆ, ಆ ವರದಿಯನ್ನು ಮೋದಿ ಸರ್ಕಾರ ಒಪ್ಪಿಕೊಂಡಿದೆ. ಪ್ರತಿಭಟನೆ ಮಾಡುವುದಿದ್ದರೆ ಮೋದಿ ವಿರುದ್ದ ಮಾಡಲಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮನುಸ್ಮೃತಿ ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ಏಳಿಗೆ ಬಗ್ಗೆ ಅಸಹನೆ ಇದೆ: ಪ್ರಿಯಾಂಕ್ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...