Homeಮುಖಪುಟಬ್ಯಾಂಕುಗಳಿಗೆ 4.5 ಲಕ್ಷ ಕೋಟಿ ರೂ ಸಾಲ ತೀರಿಸುತ್ತಿಲ್ಲವೇಕೆ? ಅದಾನಿ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಕಿಡಿ

ಬ್ಯಾಂಕುಗಳಿಗೆ 4.5 ಲಕ್ಷ ಕೋಟಿ ರೂ ಸಾಲ ತೀರಿಸುತ್ತಿಲ್ಲವೇಕೆ? ಅದಾನಿ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಕಿಡಿ

- Advertisement -
- Advertisement -

ಬಿಜೆಪಿ ಮುಖಂಡ, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಕಿಡಿಕಾರಿದ್ದಾರೆ. ಪ್ರತಿ ಎರಡು ವರ್ಷಕ್ಕೊಮ್ಮೆ ಆತನ ಸಂಪತ್ತು ಡಬಲ್ ಆಗುತ್ತಿದ್ದರೂ ಆತ ಬ್ಯಾಂಕುಗಳಿಂದ ಪಡೆದ ಹಲವು ಲಕ್ಷ ಕೋಟಿ ರೂ ಸಾಲವನ್ನು ಏಕೆ ಮರುಪಾವತಿ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇಂದು ಟ್ವೀಟ್‌ ಮಾಡಿರುವ ಸುಬ್ರಮಣಿಯನ್ ಸ್ವಾಮಿ “ಟ್ರೆಪೆಜ್ ಕಲಾವಿದ ಅದಾನಿ ಈಗ ಬ್ಯಾಂಕ್‌ಗಳಿಗೆ ಎನ್‌ಪಿಎ ಆಗಿ (ವಸೂಲಿಯಾಗದ ಸಾಲ) 4.5 ಲಕ್ಷ ಕೋಟಿ ರೂ ಉಳಿಸಿಕೊಂಡಿದ್ದಾರೆ. ನನ್ನ ಲೆಕ್ಕ ತಪ್ಪಾಗಿದ್ದರೆ ನನ್ನನ್ನು ಸರಿಪಡಿಸಿ. ಆದರೂ ಅವರ ಸಂಪತ್ತು 2016 ರಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ದ್ವಿಗುಣಗೊಳ್ಳುತ್ತಿದೆ. ಆದರೆ ಬ್ಯಾಂಕುಗಳಿಗೆ ಸಾಲ ಮರುಪಾವತಿ ಮಾಡಲು ಸಾಧ್ಯವಿಲ್ಲವೇಕೆ? ಅವರು ಖರೀದಿಸಿದ ಆರು ವಿಮಾನ ನಿಲ್ದಾಣಗಳಂತೆಯೇ, ಅವರು ಶೀಘ್ರದಲ್ಲೇ ತಾನು ಪಾವತಿಸಬೇಕಾದ ಎಲ್ಲಾ ಬ್ಯಾಂಕುಗಳನ್ನು ಖರೀದಿಸಬಹುದು” ಎಂದು ವ್ಯಂಗ್ಯವಾಡಿದ್ದಾರೆ.

2020ರಲ್ಲಿ ಭಾರತದ ಆರು ಪ್ರಮುಖ ವಿಮಾನ ನಿಲ್ದಾಣಗಳ ಉಸ್ತುವಾರಿ ಗುತ್ತಿಗೆಯನ್ನು ಗೌತಮ್ ಅದಾನಿ ನೇತೃತ್ವದ ಕಂಪನಿ ವಹಿಸಿಕೊಂಡಿದೆ. ಅಲ್ಲದೇ ಈ ವರ್ಷವೂ ಸಹ ದೇಶದ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣವಾದ ಮುಂಬೈ ವಿಮಾನ ನಿಲ್ದಾಣದ ಗುತ್ತಿಗೆಯು ಅದಾನಿ ಪಾಲಾಗಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅದಾನಿ ವಿರುದ್ಧ ಗುರುತರ ಆಪಾದನೆ ಮಾಡಿದ್ದಾರೆ.

ಅದಾನಿ ದೇಶದ ಹಲವು ಬ್ಯಾಂಕುಗಳಿಗೆ 4.5 ಲಕ್ಷ ಕೋಟಿ ರೂ ಸಾಲ ತೀರಿಸಬೇಕಾಗಿದೆ. ಆದರೆ ಆದಾನಿಯೇನು ನಷ್ಟದಲ್ಲಿಲ್ಲ. ಬದಲಿಗೆ ಪ್ರತಿ ಎರಡು ವರ್ಷಕ್ಕೊಮ್ಮೆ ಅವರ ಆದಾಯ ಡಬಲ್ ಆಗುತ್ತಿದೆ. ಆದರೂ ಅವರು ಸಾಲ ತೀರಿಸುತ್ತಿಲ್ಲವೇಕೆ ಎಂದು ಪ್ರಶ್ನಿಸಿರುವ ಅವರು, ಮುದೊಂದು ದಿನ ಆ ಬ್ಯಾಂಕುಗಳನ್ನೇ ಅವರು ಕೊಂಡುಕೊಳ್ಳಬಹುದು ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳು ಸಹ ಅದಾನಿ, ಅಂಬಾನಿ ಪರವಾಗಿವೆ ಎಂದು ಹೋರಾಟನಿರತ ರೈತರು ಆರೋಪಿಸಿದ್ದಾರೆ. ಹಾಗಾಗಿ ಅಂಬಾನಿ, ಅದಾನಿ ಉತ್ಪನ್ನಗಳನ್ನು ತಿರಸ್ಕರಿಸುವಂತೆ ಕರೆ ನೀಡಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...