Homeಮುಖಪುಟಶಿಕ್ಷಣ ಸಂಸ್ಥೆಗಳ ಹೆಸರಿನಿಂದ ಜಾತಿ ಸೂಚಕವನ್ನು ಏಕೆ ತೆಗೆದುಹಾಕಬಾರದು? : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್...

ಶಿಕ್ಷಣ ಸಂಸ್ಥೆಗಳ ಹೆಸರಿನಿಂದ ಜಾತಿ ಸೂಚಕವನ್ನು ಏಕೆ ತೆಗೆದುಹಾಕಬಾರದು? : ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ರಸ್ತೆ ಹೆಸರುಗಳಿಂದ ಜಾತಿ ಸೂಚಕಗಳನ್ನು ತೆಗೆದು ಹಾಕಿದಂತೆಯೇ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಹೆಸರುಗಳನ್ನು ತೆಗೆದು ಹಾಕಬಹುದೇ? ಎಂದು ಮದ್ರಾಸ್ ಹೈಕೋರ್ಟ್ ಗುರುವಾರ (ಫೆ.20) ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಕ್ಷಿಣ ‘ಭಾರತ ಸೆಂಗುಂತ ಮಹಾಜನ ಸಂಘ’ದ ಚುನಾವಣೆಗೆ ಸಂಬಂಧಿಸಿದ ಅರ್ಜಿ ಸೇರಿದಂತೆ ಅರ್ಜಿಗಳ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ಅವರು ಅಡ್ವೊಕೇಟ್ ಜನರಲ್ (ಎಜಿ) ಪಿ.ಎಸ್ ರಾಮನ್ ಅವರಿಗೆ ಈ ಪ್ರಶ್ನೆಯನ್ನು ಕೇಳಿದ್ದಾರೆ.

“ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ನಡುವೆ ನಡೆಯುವ ಜಾತಿ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಏಕಸದಸ್ಯ ಆಯೋಗವನ್ನು ರಚಿಸಿ ವರದಿ ತರಿಸಿಕೊಂಡಿದೆ. ಈಗ ಶಾಲೆಗಳಂತಹ ಶಿಕ್ಷಣ ಸಂಸ್ಥೆಗಳ ಹೆಸರುಗಳಲ್ಲಿನ ಜಾತಿ ಸೂಚಕಗಳ ಬಗ್ಗೆ ಏನು ಹೇಳುತ್ತೀರಿ?” ಎಂದು ಎಜಿಗೆ ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಎಜಿ “ಶಿಕ್ಷಣ ಸಂಸ್ಥೆಗಳಲ್ಲಿ ದಾನಿಗಳ ಹೆಸರು ಇರುತ್ತದೆ. ಅದು ಅವರ ಜಾತಿಯೊಂದಿಗೆ ಹೊಂದಿಕೊಂಡಿರುತ್ತದೆ. ಸಂಪೂರ್ಣ ಹೆಸರು ಬರೆಯವಾಗ ಜಾತಿ ಕೂಡ ಬರುತ್ತದೆ” ಎಂದು ತಿಳಿಸಿದ್ದಾರೆ.

ನ್ಯಾಯಮೂರ್ತಿ ಪ್ರತಿಕ್ರಿಯಿಸಿ “ರಸ್ತೆ ಹೆಸರುಗಳಲ್ಲಿನ ಜಾತಿ ಸೂಚಕವನ್ನು ತೆಗೆದು ಬರೀ ಹೆಸರು ಹಾಕುತ್ತಿದ್ದೀರಲ್ಲವೇ? ಈಗ ರಸ್ತೆಗಳಲ್ಲಿ ಪ್ರಮುಖ ವ್ಯಕ್ತಿಗಳ ಮೊದಲ ಹೆಸರು ಮಾತ್ರ ಇದೆಯಲ್ಲವೇ? ಎಂದಿದ್ದಾರೆ.

ಪರಿಸ್ಥಿತಿ ಬದಲಾಗಿದ್ದರೂ, ಕೆಲವು ರೀತಿಯ ಕಲ್ಯಾಣ ಶಾಲೆಗಳು ಇನ್ನೂ ನಿರ್ದಿಷ್ಟ ಜಾತಿಗಳ ಹೆಸರನ್ನು ಹೊಂದಿವೆ ಎಂದ ನ್ಯಾಯಮೂರ್ತಿ, ಶಿಕ್ಷಣ ಸಂಸ್ಥೆಗಳ ಹೆಸರುಗಳಿಂದ ಜಾತಿ ಸೂಚಕವನ್ನು ತೆಗೆದುಹಾಕಬಹುದೇ ಎಂದು ಕೇಳಿದ್ದಾರೆ.

ನ್ಯಾಯಾಲಯಕ್ಕೆ ಸಲ್ಲಿಸುವ ಅಫಿಡವಿಟ್‌ನಲ್ಲಿ ನಿರ್ದಿಷ್ಟ ಜಾತಿಯ ಹೆಸರನ್ನು ಹೊಂದಿರುವ ಮತ್ತು ಆ ಸಮುದಾಯದ ಸದಸ್ಯರು ಮಾತ್ರ ಸೇರಲು ಅವಕಾಶ ನೀಡುವ ಬೈಲಾಗಳನ್ನು ಹೊಂದಿರುವ ಸಮಾಜಗಳ ಕುರಿತು ಸರ್ಕಾರದ ನಿಲುವನ್ನು ತಿಳಿಸುವಂತೆ ನ್ಯಾಯಮೂರ್ತಿ ಎಜಿಗೆ ಸೂಚಿಸಿದ್ದಾರೆ.

ಜಾತಿರಹಿತ ಸಮಾಜವನ್ನು ಸೃಷ್ಟಿಸಲು, ದೀನದಲಿತರನ್ನು ಮೇಲೆತ್ತಲು, ತಾರತಮ್ಯವನ್ನು ತೊಡೆದು ಹಾಕಲು ಮತ್ತು ಮೀಸಲಾತಿ ಒದಗಿಸುವ ಸಾಂವಿಧಾನಿಕ ಗುರಿಯನ್ನು ಸಾಧಿಸಲು ಮಾತ್ರ ಜಾತಿ ಹೆಸರುಗಳನ್ನು ಬಳಸಬೇಕು ಎಂದು ನ್ಯಾಯಮೂರ್ತಿ ಭರತ ಚಕ್ರವರ್ತಿ ಹೇಳಿದ್ದಾರೆ.

‘ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ’ : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...