Homeಕರ್ನಾಟಕತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

ತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

- Advertisement -
- Advertisement -

ರಮೇಶ್ ಜಾರಕಿಹೊಳಿ ಲೈಂಗಿಕ ಪ್ರಕರಣದ ವಿಡಿಯೊ ಬಿಡುಗಡೆಯಾದ ಬೆನ್ನಿಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಅತ್ತ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರೆ ಇತ್ತ ಡಾ.ಕೆ. ಸುಧಾಕರ್, ಬಿ.ಸಿ. ಪಾಟಿಲ್, ಭೈರತಿ ಬಸವರಾಜ್‌, ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್‌, ನಾರಾಯಣ ಗೌಡ ಸೇರಿದಂತೆ ಒಟ್ಟು 6 ಸಚಿವರು ಮಾಧ್ಯಮಗಳಲ್ಲಿ ತಮ್ಮ ವಿರುದ್ದ ಯಾವುದೇ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ. ಸುಧಾಕರ್‌, “ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ” ಎಂದು ಹೇಳಿದ್ದಾರೆ.

“ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ. ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ” ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ

“ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ” ಎಂದು ಸುಧಾಕರ್‌ ಹೇಳಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಪ್ರಸ್ತುತ ತಮ್ಮ ವಿರುದ್ದ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದ ಮೊರೆ ಹೋಗಿರುವ ಆರು ಸಚಿವರು ಕೂಡಾ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಮಯದಲ್ಲಿ ರಾಜೀನಾಮೆ ನೀಡಿ ಸರ್ಕಾರ ಉರುಳಲು ಕಾರಣವಾಗಿದ್ದರು. ನಂತೆರ ಅವರೆಲ್ಲ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯಾಗುತ್ತಿದ್ದಂತೆ ಇವರು ಕೋರ್ಟ್ ಮೊರೆ ಹೋಗಿರುವುದು ಭಾರಿ ಚರ್ಚೆಗೀಡಾಗಿದೆ.

ಆಪರೇಷನ್ ಕಮಲದ ಸಮಯದಲ್ಲಿ ಈ ಎಲ್ಲಾ ಸಚಿವರು ಮುಂಬೈಯಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಇವರ ವಿರುದ್ದವು ಸಿಡಿಗಳು ತಯಾರಾಗಿದೆ, ಹಾಗಾಗಿ ತಮ್ಮ ವಿರುದ್ದ ಸುದ್ದಿಗಳು ಪ್ರಕಟಿಸಬಾರದು ಎಂದು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. “ಕುಂಬಳಕಾಯಿ ಕಳ್ಳ” ಎಂದರೆ, ಈ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ?

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...