Homeಮುಖಪುಟಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

- Advertisement -
- Advertisement -

“ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು. ಇ.ಡಿ. ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ. ಪಲಾಯವಾದವೇ ಇವರ ಬಂಡವಾಳ!” ಎಂಬ ಪ್ರತಿಪಾದನೆಯೊಂದಿಗೆ ಬಿಜೆಪಿ ಕರ್ನಾಟಕ ವಿಡಿಯೊವೊಂದನ್ನು ಟ್ವೀಟ್ ಮಾಡಿದೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವ ವಿಡಿಯೊವನ್ನು ಟ್ರೋಲ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಅಣಕಿಸುತ್ತಿದ್ದಾರೆ. ಆದರೆ ಬಿ.ವಿ.ಶ್ರೀನಿವಾಸ್ ಈ ವಿಡಿಯೊ ಹಿಂದಿನ ಅಸಲಿ ಕಥೆಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌, “ಪೊಲೀಸರ ಉದ್ದೇಶ ಸರಿ ಇದ್ದರೆ ಖಂಡಿತವಾಗಿಯೂ ನಾನು ಅವರ ಜೊತೆಯಲ್ಲಿ ಹೋಗಲು ತಯಾರಿದ್ದೆ. ಅವರ ಉದ್ದೇಶ ಬೇರೆಯಾಗಿತ್ತು. ಪ್ರತಿಭಟನೆಗೂ ಮುಂಚಿತವಾಗಿಯೇ ಅರೆಸ್ಟ್‌ ಮಾಡಲು ಯೋಜಿಸಿದ್ದರು. ಬಿಜೆಪಿಯವರಿಗೆ ಕಾಮನ್‌ ಸೆನ್ಸ್‌ ಇಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೆಳಿಗ್ಗೆ ಏಳು ಗಂಟೆಯ ಸಮಯದಲ್ಲಿ ಪೊಲೀಸರು ನನ್ನನ್ನು ಅರೆಸ್ಟ್ ಮಾಡಲು ಪ್ರಯತ್ನಪಟ್ಟರು. ರಾತ್ರಿ ಎರಡು ಸಲ ಪ್ರಯತ್ನಪಟ್ಟರು. ಬೆಳಿಗ್ಗೆ ಎಂಟು ಗಂಟೆಗೆ ಮತ್ತೊಮ್ಮೆ ಪೊಲೀಸರು ಯತ್ನಿಸಿದಾಗ ನಾನು ಗೆರಿಲ್ಲಾ ಮಾದರಿಯಲ್ಲಿ ಎಸ್ಕೇಪ್‌ ಆದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಹುಲ್‌ ಗಾಂಧಿಯವರಿಗೆ ಇ.ಡಿ. ಸಮನ್ಸ್ ನೀಡಿದ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಇ.ಡಿ. ಕಚೇರಿ ಬಳಿಗೆ ತೆರಳಿ ಕಾರ್ಯಕರ್ತರೊಂದಿಗೆ ನಾನು ಸೇರಿಕೊಳ್ಳಬೇಕಿತ್ತು. ಹೀಗಾಗಿ ತಪ್ಪಿಸಿಕೊಂಡು ಓಡಿದೆ. ನಂತರದ ಪ್ರತಿಭಟನೆಯಲ್ಲಿ ನನ್ನ ಹಾಜರಿ ಮಾಧ್ಯಮಗಳಲ್ಲಿ ವರದಿಯಾಗಿದೆ. ನ್ಯಾಷನಲ್‌ ಟಿ.ವಿ. ಚಾನೆಲ್‌ಗಳಲ್ಲೂ ಇದು ಲೈವ್ ಆಗಿದೆ. ಈ ಬಿಜೆಪಿವರು ಸುಳ್ಳಿನ ಫ್ಯಾಕ್ಟರಿ ಗಿರಾಕಿಗಳು. ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಏನು ಎಂಬುದು ನ್ಯೂಯಾರ್ಕ್ ಟೈಮ್ಸ್‌ನವರು ಬರೆದಿದ್ದಾರೆ. ಸಂವಿಧಾನದ ಉಳಿವಿವಾಗಿ ಹೋರಾಡಿ 130 ಕೇಸು ಹಾಕಿಸ್ಕೊಂಡಿದ್ದೇನೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

“ಸಿ.ಟಿ.ರವಿ ನನ್ನ ಬಗ್ಗೆ ಮಾತನಾಡಿದ್ದಾರಂತೆ. ನಾನು ಓ.ಟಿ. ಹಾಕಿಕೊಂಡು ಕಾರು ಅಪಘಾತ ಮಾಡಿ ಓಡಿ ಹೋಗಿಲ್ಲ. ಓಡಿ ಹೋಗುವವರು ಬಿಜೆಪಿ ನಾಯಕರು ಮಾತ್ರ” ಎಂದು ಕುಟುಕಿದರು.

“ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದ ಸ್ಥಳಕ್ಕೆ ಐದಾರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದೇ ರೀತಿಯಲ್ಲಿ ದೊಡ್ಡ ಮಟ್ಟದ ಪೊಲೀಸರನ್ನು ಅರುಣಾಚಲಪ್ರದೇಶಕ್ಕೆ ನಿಯೋಜಿಸಿದ್ದರೆ ಚೈನಾದವರು ನಮ್ಮ ದೇಶದ ಒಳಗೆ ಕಾಲಿಡಲು ಸಾಧ್ಯವಾಗುತ್ತಿರಲಿಲ್ಲ. ಹಿಂದೂಗಳು ಎನ್ನುತ್ತಾರೆ. ಆದರೆ ಜಮ್ಮು ಕಾಶ್ಮೀರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೊಲೀಸರನ್ನು ನಿಯೋಜಿಸಿದ್ದರೆ ಹಿಂದೂಗಳು ಸಾಯುತ್ತಿರಲಿಲ್ಲ. ಸರ್ಕಾರ ಇವರದ್ದೇ ಅಲ್ಲವೇ?” ಎಂದು ಪ್ರಶ್ನಿಸಿದರು.

“ನನ್ನ ಹಿನ್ನಲೆ ಏನೆಂಬುದು ದೇಶಕ್ಕೆ ಗೊತ್ತಿದೆ. ಈ ಸಿ.ಟಿ.ರವಿಯಂಥವರಿಂದ ಪಾಠ ಕಲಿಯುವ ಅವಶ್ಯಕತೆ  ನನಗಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಜ ಹೇಳಿದ್ದಾರೆ ಶ್ರೀನಿವಾಸ್ ರವರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು,, ಅವರು ಹೇಳಿದ ಹಾಗೆ ಬಿಜೆಪಿ ಯವರು ಸುಳ್ಳು ಸೃಷ್ಟಿಸುವ ಕಾರ್ಖಾನೆಗಳಾಗಿವೆ,, ಕೆಲವೊಂದು ಬಾಲ್ ಗಳು ಆದೆ ಸತ್ಯ ಅಂತ ಬೊಬ್ಬೆ ಹೊಡೀತಾವೆ ಅವಿವೇಕಿಗಳು 😂😂😂

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...