Homeಕರ್ನಾಟಕಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

ಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

- Advertisement -
- Advertisement -

ಜಿಂಬಾಬ್ವೆಯಂತಹ ಇತರ ದೇಶಗಳಿಂದ ಆಮದು ಮಾಡಿಕೊಳ್ಳುವ ಗೋಡಂಬಿ ಬೀಜಗಳ ಕಳಪೆ ಗುಣಮಟ್ಟದ ಕಾರಣದಿಂದಾಗಿ ಕರ್ನಾಟಕ ರಾಜ್ಯವು ತನ್ನ ಗೋಡಂಬಿ ರಫ್ತಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ ಎಂದು ‘ದಿ ಹಿಂದೂಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ದೇಶದ ಐದನೇ ಅತಿದೊಡ್ಡ ಗೋಡಂಬಿ ರಫ್ತುದಾರನಾಗಿರುವ ಕರ್ನಾಟಕ 2020-21 ರಲ್ಲಿ ಗೋಡಂಬಿ ರಫ್ತು ಮಾಡುವ ಮೂಲಕ ಕೇವಲ 90.29 ಮಿಲಿಯನ್ ಡಾಲರ್ ಗಳಿಸಿತು. ಆದರೆ 2017-18ರಲ್ಲಿ 188.42 ಮಿಲಿಯನ್ ಡಾಲರ್‌ಗಳನ್ನು ಗಳಿಸಿತ್ತು ಎಂದು ಸರ್ಕಾರಿ ಅಂಕಿಅಂಶಗಳು ಹೇಳುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಡಿಮೆ ಪ್ರಮಾಣದ ಗೋಡಂಬಿ ಫಸಲು ನೀಡುವ ಕಳಪೆ ಗುಣಮಟ್ಟದ ಬೀಜಗಳನ್ನು ಬಳಸುವುದರಿಂದ ರಫ್ತು ಕುಸಿತವಾಗಿದೆ. ರೈತರು ಗೋಡಂಬಿಯನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಿದರು? ಅವುಗಳ ಗಾತ್ರವೇನು? ಗುಣಮಟ್ಟವೇನು? ಮುಂತಾದ ಅನೇಕ ಅಂಶಗಳನ್ನು ಖರೀದಿದಾರರು ಗಮನಿಸುತ್ತಿದ್ದು, ಬೇಡಿಕೆಯ ಕುಸಿತ ಕಂಡಿದೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ವಿಧಿಸಲಾಯಿತು. ಆಮದು ಮತ್ತು ರಫ್ತಿನಲ್ಲಿ ಮತ್ತಷ್ಟು ಇಳಿಕೆಯಾಯಿತು. ನೆದರ್ಲ್ಯಾಂಡ್ಸ್, ಯುಎಸ್ ಮತ್ತು ಕೆಲವೊಮ್ಮೆ ವಿಯೆಟ್ನಾಂ, ನಾರ್ವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮಲೇಷ್ಯಾಗಳಿಗೂ ಭಾರತದಿಂದ ಗೋಡಂಬಿಯನ್ನು ರಫ್ತು ಮಾಡಲಾಗುತ್ತಿತ್ತು.

ರಫ್ತು ಕುಸಿತದಿಂದಾಗಿ ಕರ್ನಾಟಕದ ಗೋಡಂಬಿ ರೈತರು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗೋಡಂಬಿಯ ಗುಲಾಬಿ ಪದರವನ್ನು ಔಷಧಗಳ ತಯಾರಿಕೆಯಲ್ಲಿ ಬಳಸುವುದರಿಂದ ಅದನ್ನು ಫಾರ್ಮಾ ಕಂಪನಿಗಳಿಗೆ ಮಾರಾಟ ಮಾಡುತ್ತಾರೆ. ವರದಿಯೊಂದರ ಪ್ರಕಾರ, 2018-19ರ ಅವಧಿಯಲ್ಲಿ ಕಚ್ಚಾ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳದಿಂದಾಗಿ ಅನೇಕ ಗೋಡಂಬಿ ಉದ್ಯಮಗಳು ಭಾರಿ ನಷ್ಟವನ್ನು ಅನುಭವಿಸಿವೆ.

ಕರ್ನಾಟಕ ರಾಜ್ಯದಲ್ಲಿ ಶೇಕಡ 70ರಷ್ಟು ಗೋಡಂಬಿ ಬೆಳೆ ಕರಾವಳಿಯಲ್ಲಿ ಭಾಗದಲ್ಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಡಂಬಿ ಕೃಷಿಗೆ ಹೆಚ್ಚಿನ ಕೃಷಿ ಭೂಮಿ ಇದ್ದರೆ, ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಗೋಡಂಬಿ ಸಂಸ್ಕರಣಾ ಘಟಕಗಳಿವೆ. ಆದ್ದರಿಂದ ಪಶ್ಚಿಮ ಕರಾವಳಿಯ ಗ್ರಾಮೀಣ ಘಟಕಗಳು ಸುಮಾರು 1,00,000 ಮೆಟ್ರಿಕ್ ಟನ್ ಗೋಡಂಬಿಯನ್ನು ಉತ್ಪಾದಿಸುತ್ತವೆ.

ಸ್ವಲ್ಪ ಪರಿಹಾರದ ರೂಪದಲ್ಲಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸುಮಾರು 20 ಹೊಸ ಬಗೆಯ ಗೋಡಂಬಿಗಳನ್ನು ಸ್ಥಳೀಯವಾಗಿ ಬೆಳೆಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಗೋಡಂಬಿಯ ಆಮದು ಮತ್ತು ರಫ್ತಿನಲ್ಲಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕವಾಗಿ ಉಳಿಯಬೇಕೆಂದು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಶ್ರಮಿಸುತ್ತಿದೆ.

ಇದನ್ನೂ ಓದಿರಿ: ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ದೇಶವು ಪ್ರಪಂಚದ 60 ದೇಶಗಳಿಗೆ ಬೆಳೆಯನ್ನು ರಫ್ತು ಮಾಡುತ್ತಿತ್ತು ಮತ್ತು ಈಗ ಸುಮಾರು 45 ದೇಶಗಳಿಗೆ ರಫ್ತು ಮಾಡುತ್ತಿದೆ. ಒಟ್ಟು 3940 ಗೋಡಂಬಿ ಸಂಸ್ಕರಣಾ ಸೌಲಭ್ಯಗಳಿವೆ. ಏಳು ವರ್ಷಗಳ ಹಿಂದೆ ದೇಶದ ಒಟ್ಟು ಗೋಡಂಬಿ ರಫ್ತು ಸುಮಾರು 1,40,000 ಟನ್‌ಗಳಷ್ಟಿತ್ತು ಎಂದು ವರದಿಯೊಂದು ಹೇಳಿದೆ. ಭಾರತವು ವಿಯೆಟ್ನಾಂ ಮತ್ತು ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್‌ನಂತಹ ದೇಶಗಳಿಗಿಂತ ಹಿಂದೆ ಉಳಿದಿದೆ. ವ್ಯಾಪಾರದಲ್ಲಿನ ವೆಚ್ಚವು ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿರುವುದೇ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.

ಪೂರ್ವ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳು ಈಗ 60,000 ಟನ್‌ಗಳಷ್ಟು ಗೋಡಂಬಿಯನ್ನು ರಫ್ತು ಮಾಡುತ್ತಿವೆ. ಇದರ ನಡುವೆ ಭಾರತದಲ್ಲಿ ಸ್ಥಳೀಯ ಬಳಕೆ ಕೂಡ ಹೆ‌ಚ್ಚಾಗುತ್ತಿದೆ. ಪ್ರಾದೇಶಿಕವಾಗಿ ಗೋಡಂಬಿ ಬಳಕೆ ಹೆಚ್ಚಾಗುತ್ತಿರುತ್ತಿರುವುದರಿಂದ ರಫ್ತಿನಲ್ಲಿಯೂ ಕಸಿತ ಕಂಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...