Homeಮುಖಪುಟವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

ವಡ್ಗಾಮ್‌ ಫಲಿತಾಂಶ ಘೋಷಣೆಗೂ ಮುನ್ನವೇ ಜಿಗ್ನೇಶ್ ಸೋತಿದ್ದಾರೆಂದು ಮಾಧ್ಯಮಗಳು ವರದಿ ಪ್ರಕಟಿಸಿದ್ದೇಕೆ?

- Advertisement -
- Advertisement -

ದಲಿತ ಯುವ ನಾಯಕ, ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಫಲಿತಾಂಶ ಪ್ರಕಟಣೆಗೂ ಮುನ್ನವೇ ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋತಿದ್ದರೂ ಜಿಗ್ನೇಶ್‌ ಮೇವಾನಿ ಗೆಲುವಿನ ನಗೆ ಬೀರಿದ್ದಾರೆ. 2017ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಮೇವಾನಿ, ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಆರಂಭಿಕ ಹಿನ್ನಡೆಯನ್ನು ಅನುಭವಿಸಿದರೂ ಸವಾಲುಗಳ ನಡುವೆ ಗೆಲುವಿನ ನಗೆಬೀರಿದ್ದಾರೆ. ಕೊನೆಯ ಹಂತದ ಮತ ಎಣಿಕೆಯವರೆಗೂ ಸೋಲು ಗೆಲುವಿನ ಹಾವು ಏಣಿ ನಡೆದಿತ್ತು.

ವಡ್ಗಾಮ್ ಪರಿಶಿಷ್ಟ ಜಾತಿಗಳಿಗೆ ಮೀಸಲಾದ ಕ್ಷೇತ್ರವಾಗಿದ್ದು, ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಮುಸ್ಲಿಂ ಮತದಾರರು ಸುಮಾರು 90,000 ಇದ್ದಾರೆಂದು ಅಂದಾಜಿಸಲಾಗಿದೆ. ವಡ್ಗಾಮ್‌ನ 2.94 ಲಕ್ಷ ಮತದಾರರಲ್ಲಿ ಮೂರನೇ ಒಂದು ಭಾಗದಷ್ಟು ಮುಸ್ಲಿಮರಿದ್ದಾರೆ. ಸುಮಾರು 44,000 ದಲಿತ ಮತದಾರರು ಮತ್ತು 15,000 ರಜಪೂತರು ಇದ್ದಾರೆ. ಉಳಿದಂತೆ ಒಬಿಸಿ ಸಮುದಾಯವಿದೆ.

ಶೇ.48 ಮತ ಹಂಚಿಕೆಯೊಂದಿಗೆ ಒಟ್ಟು 94,765 ಮತಗಳನ್ನು ಗಳಿಸುವಲ್ಲಿ ಜಿಗ್ನೇಶ್‌ ಯಶಸ್ವಿಯಾಗಿದ್ದಾರೆ. 89,837 ಮತಗಳನ್ನು ಗಳಿಸಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮಣಿಭಾಯ್ ಜೇತಾಭಾಯಿ ವಘೇಲಾ ಅವರನ್ನು ಸೋಲಿಸಿ 4,922 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಎಎಪಿ ಅಭ್ಯರ್ಥಿ ದಲ್ಪತ್ ಭಾಟಿಯಾ ಕೂಡ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.

ವಡ್ಗಾಮ್ ಕ್ಷೇತ್ರದ ಫಲಿತಾಂಶದ ವಿಚಾರದಲ್ಲಿ ಕೆಲವು ಮಾಧ್ಯಮಗಳು ಮಾಡಿದ ಸುಳ್ಳು ಸುದ್ದಿಗಳು ಗಮನ ಸೆಳೆದಿವೆ. ಜಿಗ್ನೇಶ್ ಮೇವಾನಿ ಸೋತಿದ್ದಾರೆಂದು ಅಂತಿಮ ಫಲಿತಾಂಶ ಹೊರಬೀಳುವ ಮೊದಲೇ ಸುಳ್ಳು ಸುದ್ದಿಗಳನ್ನು ಪ್ರಕಟಿಸಿರುವುದು ಅನುಮಾನಗಳಿಗೆ ಆಸ್ಪದ ನೀಡಿದೆ. ಕೆಲವು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿದ ಬಳಿಕ ಸುದ್ದಿಯನ್ನು ತಿದ್ದಿವೆ ಅಥವಾ ಡಿಲೀಟ್ ಮಾಡಿವೆ. ಆ ಮೂಲಕ ಅಪಹಾಸ್ಯಕ್ಕೆ ಈಡಾಗಿವೆ. ಕನ್ನಡದ ಜನಪ್ರಿಯ ಮಾಧ್ಯಮವಾದ ‘ವಿಜಯಕರ್ನಾಟಕ’, ಇಂಗ್ಲಿಷ್‌ನ ‘ಹಿಂದೂಸ್ತಾನ್ ಟೈಮ್ಸ್‌’, ‘ದಿ ವೀಕ್‌’ ಸಂಸ್ಥೆಯ ಜಾಲತಾಣಗಳಲ್ಲಿ ಜಿಗ್ನೇಶ್ ಸೋತಿರುವುದಾಗಿ ವರದಿ ಪ್ರಕಟಿಸಲಾಗಿತ್ತು.

May be an image of 1 person and text that says "23C ndia World HT Hindustan Times Cities Entertainment Cricket Congress's. Jignesh Mevani loses Vadgam; BJP's Vaghela wins seat Lifestyle Astrology Gujarat Assembly Election Updated on Dec 08, 2022 02:13 PM IST The 42-year-old Dalit leader Jigneshkumar Natvarlal Mevani ost to Congress turncoat and Bharatiya Janata Party candidate Manibhai Vaghela bya marginof 1,525 votes."
ಹಿಂದೂಸ್ತಾನ್ ಟೈಮ್ಸ್‌ ವರದಿ
‘ವಿಜಯ ಕರ್ನಾಟಕ’ ಪತ್ರಿಕೆ ಮಾಡಿದ್ದ ಟ್ವೀಟ್
‘ದಿ ವೀಕ್‌’ ಪ್ರಕಟಿಸಿದ್ದ ಸುದ್ದಿ ಲಿಂಕ್‌

ಸುಳ್ಳು ಸುದ್ದಿ ವರದಿ ಮಾಡಿದ ಬಳಿಕ ಮಾಧ್ಯಮಗಳು ಮಾಹಿತಿಯನ್ನು ತಿದ್ದಿವೆ. ಆದರೆ ವರದಿಗಳನ್ನು ಸರಿಪಡಿಸುವ ಮೊದಲೇ ಓದುಗರು ಹಂಚಿಕೊಂಡಿರುವ ಸುದ್ದಿಯ ಸ್ಕ್ರೀನ್‌ ಶಾಟ್‌ಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಂಬಿಕಾರ್ಹ ಸುದ್ದಿ ಜಾಲತಾಣಗಳೇ ಸುಳ್ಳು ಸುದ್ದಿಪ್ರಕಟಿಸಿರುವುದು ಏತಕ್ಕೆಂಬ ಪ್ರಶ್ನೆ ಉಳಿದಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಯುವ ಹೋರಾಟಗಾರ ಸರೋವರ್‌ ಬೆಂಕಿಕೆರೆ, “ಕೆಲವು ಮಾಧ್ಯಮಗಳಲ್ಲಿ ಬಂದ ವರದಿಯನ್ನು ನಿಜವೆಂದೇ ಭಾವಿಸಿದ್ದೆವು. ಜಿಗ್ನೇಶ್ ಸೋತಿದ್ದಾರೆಂದು ನಿರಾಶೆಯಾಗಿತ್ತು. ಊನಾ ಚಳವಳಿಯ ಮೂಲಕ ಮುಂಚೂಣಿಗೆ ಬಂದ ಮೇವಾನಿ ಅವರನ್ನು ಸೋಲಿಸಲು ಬಿಜೆಪಿ ಶತಪ್ರಯತ್ನ ಮಾಡಿರುವುದನ್ನು ಗಮನಿಸಿದ್ದೆವು. ಆದರೆ ಮಾಧ್ಯಮಗಳಿಗೂ ಈ ಧಾವಂತವಿದೆ ಎಂಬ ಭಾವನೆಯನ್ನು ಅವುಗಳು ಪ್ರಕಟಿಸಿದ ಸುದ್ದಿಗಳು ಧ್ವನಿಸಿದವು. ಅಂತಿಮವಾಗಿ ಜಿಗ್ನೇಶ್ ಗೆಲುವು ಸಾಧಿಸಿದ್ದಾರೆಂದು ವರದಿಗಳು ಬಂದಾಗ, ಗೊಂದಲ ಉಂಟಾಯಿತು. ಜಿಗ್ನೇಶ್ ಸೋತಿದ್ದಾರೋ, ಗೆದ್ದಿದ್ದಾರೋ ಎಂದು ಮತ್ತೆ ಮತ್ತೆ ಹಲವು ಸುದ್ದಿವಾಹಿನಿಗಳ ವರದಿಗಳನ್ನು ಪರಿಶೀಲಿಸಬೇಕಾಯಿತು. ಮಾಧ್ಯಮಗಳು ಪಕ್ಷಪಾತಿಯಾಗಿ ವರದಿಯನ್ನು ಪ್ರಕಟಿಸಿವೆಯೇ ಎಂಬ ಅನುಮಾನ ಕಾಡಿತು. ವರದಿ ಬರೆಯುವ ಮುನ್ನ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಮುಗ್ದ ಓದುಗರನ್ನು ದಿಕ್ಕುತಪ್ಪಿಸಬಾರದು” ಎಂದು ಆಶಿಸಿದರು.

“ಜಿಗ್ನೇಶ್ ಮೇವಾನಿಯವರನ್ನು ಹೇಗಾದರೂ ಸರಿ (ಕಳ್ಳ ದಾರಿಯಿಂದ) ಸೋಲಿಸಿಯೇ ಸೋಲಿಸುತ್ತೇವೆ ಎಂಬ ಮಾಹಿತಿಯನ್ನು ಬಿಜೆಪಿಯವರು ಮಾಧ್ಯಮಗಳಿಗೆ ಮೊದಲೇ ತಿಳಿಸಿರುವ ಸಾಧ್ಯತೆಯೂ ಇರಬಹುದು, ಅದಕ್ಕಾಗಿಯೇ ಮಾಧ್ಯಮಗಳು ಹೀಗೆ ಸುದ್ದಿ ಮಾಡಿರಲು ಸಾಧ್ಯವಿದೆ” ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...