Homeಮುಖಪುಟಜನರು ಸಂಕಟದಲ್ಲಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿ ನಗುತ್ತಿದ್ದಾರೆ: ಪ್ರಿಯಾಂಕ ಗಾಂಧಿ

ಜನರು ಸಂಕಟದಲ್ಲಿರುವಾಗ ಬಿಜೆಪಿ ನಾಯಕರು ವೇದಿಕೆಯಲ್ಲಿ ನಗುತ್ತಿದ್ದಾರೆ: ಪ್ರಿಯಾಂಕ ಗಾಂಧಿ

- Advertisement -
- Advertisement -

ಕೋವಿಡ್ ಎರಡನೆ ಅಲೆಯಿಂದಾಗಿ ದೇಶಾದ್ಯಂತ ಜನರು ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೆ, ಆಕ್ಸಿಜನ್ ಮತ್ತು ಔಷಧಿ ಕೊರತೆಯಿಂದಾಗಿ ನೋವಿನಲ್ಲಿ ನರಳುತ್ತಿದ್ದಾರೆ. ಕೆಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದು ದುಃಖದ ಮಡುವಿನಲ್ಲಿದ್ದಾರೆ. ಆದರೆ ಬಿಜೆಪಿ ನಾಯಕರು ಮಾತ್ರ ಬೃಹತ್ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಾ ವೇದಿಕೆಯಲ್ಲಿ ಜೋಕ್ ಮಾಡಿಕೊಂಡು ನಗುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಏಪ್ರಿಲ್ 23 ರಂದು ಮುರ್ಷಿದಾಬಾದ್, ದಕ್ಷಿಣ ಕೋಲ್ಕತಾ, ಸಿಯುರಿ ಮತ್ತು ಮಾಲ್ಡಾದಲ್ಲಿ ಚುನಾವಣಾ ರ್ಯಾಲಿಗಳನ್ನು ನಡೆಸಲಿದ್ದಾರೆ. ಇದರ ಬದಲಿಗೆ ಮೋದಿ ಜನರೊಂದಿಗೆ ಕುಳಿತು ಪ್ರಸ್ತುತ ಬಿಕ್ಕಟ್ಟಿನ ಪರಿಹಾರದ ಬಗ್ಗೆ ಚರ್ಚಿಸಬೇಕಾಗಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಿರೋ ಸರ್ವೆಯ ಪ್ರಕಾರ ಸುಮಾರು 5 ಕೋಟಿ ಜನರಿಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಹೀಗದ್ದರೂ ಯೋಗಿ ಸರ್ಕಾರ ಅತ್ಯಂತ ಕಡಿಮೆ ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಅದರಲ್ಲಿ ಶೇ. 70 ರಷ್ಟು ಆಟಿಂಜನ್ ಟೆಸ್ಟ್ ನಡೆಸಿ, ಶೇ.30 ರಷ್ಟು ಮಾತ್ರ ಆರ್‌ಟಿಪಿಸಿಆರ್ ಟೆಸ್ಟ್ ನಡೆಸುತ್ತಿದೆ. ಖಾಸಗಿ ಲ್ಯಾಬ್‌ಗಳು ಪರೀಕ್ಷೆ ನಡೆಸದಂತೆ ಆದೇಶ ಹೊರಡಿಸಲಾಗಿದೆ. ಈ ಸರ್ಕಾರಕ್ಕೆ ಜನರ ಜೀವಕ್ಕಿಂತ ತಮ್ಮ ಸರ್ಕಾರದ ಪ್ರತಿಷ್ಠೆಯೇ ಮುಖ್ಯವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಂದು ದಿನಕ್ಕೆ 29,754 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕೆ ತಲುಪಿದೆ. 162 ಸಾವುಗಳೊಂದಿಗೆ ಸಾವಿನ ಸಂಖ್ಯೆ 10 ಸಾವಿರ ದಾಟಿದೆ ಎಂದು ಆರೋಗ್ಯ ಇಲಾಖೆ ವರದಿಗಳು ತಿಳಿಸಿವೆ.

ಆಕ್ಸಿಜನ್ ರಫ್ತು ಮಾಡಿದ್ದು ಏಕೆ?

ಭಾರತವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಆಮ್ಲಜನಕ ಉತ್ಪಾದಿಸುವ ರಾಷ್ಟ್ರವಾಗಿದೆ. ಆದರೂ ನಮ್ಮ ದೇಶದ ಪ್ರಜೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಸಿಗುತ್ತಿಲ್ಲ ಏಕೆ ಎಂದು ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ. ಈ ಕುರಿಟು ಟ್ವೀಟ್ ಮಾಡಿರುವ ಅವರು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

ಭಾರತದ ಆಮ್ಲಜನಕ ರಫ್ತು

2019-20: 4502 ಮೆ.ಟನ್
2020-21: 9300 ಮೆ.ಟನ್

ನಮ್ಮಲ್ಲಿ ಆಮ್ಲಜನಕದ ಕೊರತೆ ಇರಲಿಲ್ಲ. ನಾವು ಆಮ್ಲಜನಕದ ಅತಿದೊಡ್ಡ ಉತ್ಪಾದಕರು. ಆದರೆ ಕೊರೊನಾದ ಬೆದರಿಕೆಯ ಹೊರತಾಗಿಯೂ, ಸರ್ಕಾರವು 2019-20ಕ್ಕೆ ಹೋಲಿಸಿದೆರೆ ಕಳೆದ ವರ್ಷ ಎರಡು ಪಟ್ಟು ಹೆಚ್ಚು ಆಮ್ಲಜನಕವನ್ನು ರಫ್ತುಮಾಡಿದೆ. ಈಗ ಹೇಳಿ ಆಮ್ಲಜನಕದ ಕೊರತೆಯಿಂದಾಗುತ್ತಿರುವ ಸಾವುಗಳಿಗೆ ಯಾರು ಕಾರಣ? ಎಂದು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

0
ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮುಸ್ಲಿಮರ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮೋದಿಯ...