Homeಮುಖಪುಟಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

- Advertisement -
- Advertisement -

ತಮ್ಮ ಪಕ್ಷದ ಮತ್ತು ಪ್ರತಿಪಕ್ಷದ ನಾಯಕರಿಗೆ ಶುಭಾಶಯಗಳ ಟ್ವೀಟ್‍ ಮಾಡುವುದನ್ನು ಎಂದೂ ಮರೆಯದ ಪ್ರಧಾನಿ ನರೇಂದ್ರ ಮೋದಿಯವರು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಶುಭಾಶಯದ ಟ್ವೀಟ್‍ ಮಾಡದಿರುವುದು ಆಶ್ಚರ್ಯಕ್ಕೆ, ಗೊಂದಲಗಳಿಗೆ ಕಾರಣವಾಗಿದೆ.

ಉತ್ತರಪ್ರದೇಶ ಸರ್ಕಾರದ ವಿರುದ್ಧ ಮೂಡಿರುವ ಜನಾಕ್ರೋಶವೇ ಇದಕ್ಕೆ ಕಾರಣ ಇರಬಹುದೇ? ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಪ್ರಧಾನಿ ಮೋದಿಯವರಿಗೂ ಅಸಮಾಧಾನವಾಗಿದ್ದು ಆ ಕಾರಣಕ್ಕೇ ಅವರು ಟ್ವೀಟ್‍ ಮಾಡಿ ಶುಭಾಶಯ ಹೇಳಿಲ್ಲ ಎಂಬ ವದಂತಿಗಳು ಹರಡಿವೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು  ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಆದರೆ, ಪ್ರಧಾನಿ ಮೋದಿ ಅವರು ಶನಿವಾರ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಪ್ರಧಾನಿ ಯಾರ ಜನ್ಮದಿನಕ್ಕೂ ಟ್ವೀಟ್ ಮಾಡಿಲ್ಲ ಎಂದಿರುವ ಪಿಎಂಒ ಮೂಲಗಳು, ಪ್ರತಿಪಕ್ಷದವರು ಸೇರಿದಂತೆ ಉನ್ನತ ನಾಯಕರ ಪಟ್ಟಿಯನ್ನು ಸಹ ನೀಡಿದ್ದು, ಇವರ್ಯಾರಿಗೂ ಮೋದಿ ಶುಭಾಶಯ ತಿಳಿಸಿಲ್ಲ ಎಂದು ಹೇಳಿವೆ. ಕಳೆದ ಕೆಲವು ವಾರಗಳಿಂದ ಅವರು ಟ್ವಿಟರ್ ಶುಭಾಶಯಗಳನ್ನು ಕೈ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಂಒ ನೀಡಿದ ಪಟ್ಟಿಯಲ್ಲಿ ಕೇರಳ, ರಾಜಸ್ಥಾನ, ಹರಿಯಾಣ ಮತ್ತು ಗೋವಾ ಮುಖ್ಯಮಂತ್ರಿಗಳು ಸೇರಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರವು ಕೋವಿಡ್ ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂಬ ಟೀಕೆಗಳ ಬಗ್ಗೆ ಬಿಜೆಪಿಯ ಉನ್ನತ ನಾಯಕರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ  ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಕಳೆದ ವಾರ, ಪಕ್ಷದ  ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್,  ಕೇಂದ್ರದ ಮಾಜಿ ಸಚಿವ ರಾಧಾ ಮೋಹನ್ ಸಿಂಗ್ ಎರಡು ದಿನಗಳ ಕಾಲ ವಿಶೇಷ ಸಭೆಗಳನ್ನು ನಡೆಸಿ ಯೋಗಿ ಸೇರಿದಂತೆ ಇತರ ಸಚಿವರು ಮತ್ತು ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.

ಯೋಗಿ ಆದಿತ್ಯನಾಥ್ ಸಾಂಕ್ರಾಮಿಕ ರೋಗವನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಮಂಗಳವಾರ ಬಿ.ಎಲ್ ಸಂತೋಷ್‍ ಟ್ವೀಟ್‍ ಮಾಡಿದ್ದರು.

ಶುಕ್ರವಾರ ಬಿಜೆಪಿ ಮೂಲಗಳು ಯೋಗಿ ಆದಿತ್ಯನಾಥ್ ಅವರನ್ನು ತೆಗೆದುಹಾಕುವುದನ್ನು ತಳ್ಳಿಹಾಕಿದವು. ಆದರೆ ಕ್ಯಾಬಿನೆಟ್ ವಿಸ್ತರಣೆಯ ಸಾಧ್ಯತೆಯಿದೆ ಎಂದು ಸೂಚಿಸಿದವು. ಪ್ರಧಾನಿ ಮೋದಿಯವರ ಆಪ್ತರಲ್ಲಿ ಒಬ್ಬರು ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ಯುಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಪ್ರಮುಖ ಸ್ಥಾನ ನೀಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ತಿಂಗಳಲ್ಲೇ ವಿಸ್ತರಣೆ ನಡೆಯಬಹುದು ಮತ್ತು ಜಾತಿ, ಪ್ರಾದೇಶಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಂತ್ರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬಿ.ಎಲ್ ಸಂತೋಷ್ ಮತ್ತು ರಾಧಾ ಮೋಹನ್ ಸಿಂಗ್  ನಡೆಸಿದ ಸಮಾಲೋಚನೆಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣಗಳನ್ನು ಅವರು ಪರಿಶೀಲಿಸಿದ್ದಾರೆ. ಬಿಜೆಪಿ ತನ್ನ ಭದ್ರಕೋಟೆಗಳಲ್ಲಿ ದೊಡ್ಡ ನಷ್ಟವನ್ನು ಅನುಭವಿಸಿದೆ.

ಎರಡನೇ ಕೋವಿಡ್ ಅಲೆಯ ನಿರ್ವಹಣೆಯಲ್ಲಿ ಯುಪಿ ಸರ್ಕಾರದ ವಿಫಲತೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ ಎಂದು ಪ್ರತಿಪಕ್ಷಗಳು ಮತ್ತು ತಜ್ಞರು ಆರೋಪಿಸಿದ್ದಾರೆ.

ಗಂಗಾದಲ್ಲಿ ತೇಲುತ್ತಿರುವ ದೇಹಗಳ ಚಿತ್ರಗಳು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾದ ನಂತರ ಯೋಗಿ ಸರ್ಕಾದದ ಕಾರ್ಯಶೈಲಿಯ ಕುರಿತು ವ್ಯಾಪಕ ಟೀಕೆಗಳು ಕೇಳಿ ಬಂದಿವೆ. ನಂತರ ಯೋಗಿ ಅವರೇ ಕೋವಿಡ್‍ ನಿರ್ವಹಣೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಈಗ ಪ್ರಕರಣಗಳ ಸಂಖ್ಯೆಯಲ್ಲಿ ಸಣ್ಣ ಇಳಿಮುಖ ಕಂಡು ಬಂದಿದೆ.

ಶನಿವಾರ ಬೆಳಿಗ್ಗೆ 24 ಗಂಟೆಗಳಲ್ಲಿ 1,013 ಹೊಸ ಪ್ರಕರಣಗಳನ್ನು ರಾಜ್ಯ ವರದಿ ಮಾಡಿದೆ. ಸಕ್ರಿಯ ಪ್ರಕರಣಗಳು ಸುಮಾರು 23 ಸಾವಿರಕ್ಕೆ ಇಳಿದಿವೆ.


ಇದನ್ನೂ ಓದಿ: ಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...