Homeಮುಖಪುಟನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ?: ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಶ್ನಿಸಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

ನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ?: ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಶ್ನಿಸಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಭಾರತ -ಪಾಕಿಸ್ತಾನ ವಿಭಜನೆಯ ವೇಳೆ ನಿಮ್ಮ ಕುಟುಂಬ ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ? ಎಂದು ಶಾಲಾ ಶಿಕ್ಷಕಿ ಪ್ರಶ್ನಿಸಿರುವುದಾಗಿ ಆರೋಪಿಸಿ ನಾಲ್ವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ದೆಹಲಿಯ ಶಾಲಾ ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲಾ ಶಿಕ್ಷಕಿಯ ವಿಡಿಯೋ ವೈರಲ್ ಆಗಿರುವ  ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ಬಯಲಾಗಿದೆ. 9ನೇ ತರಗತಿ ವಿದ್ಯಾರ್ಥಿಗಳ ಕುಟುಂಬದವರು ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಗಾಂಧಿನಗರದ ಸರ್ಕಾರಿ ಸರ್ವೋದಯ ಬಾಲ ವಿದ್ಯಾಲಯದ ಶಿಕ್ಷಕಿ ಹೇಮಾ ಗುಲಾಟಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಓರ್ವ ವಿದ್ಯಾರ್ಥಿ ನೀಡಿದ ದೂರಿನ ಪ್ರಕಾರ, ಶಿಕ್ಷಕಿ ಹೇಮಾ ಗುಲಾಟಿ ಅವರು ಬುಧವಾರ  ಪವಿತ್ರ ಮೆಕ್ಕಾದಲ್ಲಿನ ಕಾಬಾ ಬಗ್ಗೆ ಮತ್ತು ಕುರಾನ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ವಿಭಜನೆಯ ಸಮಯದಲ್ಲಿ ನೀವು ಪಾಕಿಸ್ತಾನಕ್ಕೆ ಹೋಗಲಿಲ್ಲ, ನೀವು ಭಾರತದಲ್ಲಿಯೇ ಇದ್ದೀರಿ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನಿಮ್ಮ ಕೊಡುಗೆ ಇಲ್ಲ ಎಂದು ಶಿಕ್ಷಕರು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿರುವ ಬಗ್ಗೆ ಎನ್ ಡಿಟಿವಿ ವರದಿ ಮಾಡಿದೆ.

ಇಂತಹ ಹೇಳಿಕೆಗಳು ಶಾಲೆಯಲ್ಲಿ ವೈಷಮ್ಯಕ್ಕೆ ಕಾರಣವಾಗುತ್ತವೆ ಮತ್ತು ಶಿಕ್ಷಕರನ್ನು ವಜಾಗೊಳಿಸಬೇಕೆಂದು ವಿದ್ಯಾರ್ಥಿಗಳ ಕುಟುಂಬಗಳು ಒತ್ತಾಯಿಸಿವೆ.

ಶಾಲಾ ವಿದ್ಯಾರ್ಥಿಯ ಪೋಷಕರೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಶಿಕ್ಷಕಿಗೆ ಶಿಕ್ಷಿಸದೆ ಹೋದರೆ, ಇತರರು ಇದೇ ರೀತಿ ಮಾತನಾಡಲು ಧೈರ್ಯ ಮಾಡಿಕೊಳ್ಳುತ್ತಾರೆ. ಅವರು ಮಕ್ಕಳಿಗೆ  ಪಾಠ ಮಾತ್ರ ಮಾಡಬೇಕು ಹೊರತು ಅವರಿಗೆ ತಿಳಿಯದ ವಿಷಯದ ಬಗ್ಗೆ ಮಾತನಾಡಬಾರದು. ವಿದ್ಯಾರ್ಥಿಗಳಲ್ಲಿ ಭಿನ್ನಾಭಿಪ್ರಾಯ ಮೂಡಿಸುವ ಶಿಕ್ಷಕರ ಅಗತ್ಯ ಇಲ್ಲ. ಶಿಕ್ಷಕಿಯನ್ನು ಶಾಲೆಯಿಂದ ತೆಗೆದು ಹಾಕಬೇಕು, ಅವರಿಗೆ ಯಾವುದೇ ಶಾಲೆಯಲ್ಲಿ ಪಾಠ ಮಾಡಲು ಅವಕಾಶ ನೀಡಬಾರದು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಸ್ಥಳೀಯ ಶಾಸಕ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಅನಿಲ್ ಕುಮಾರ್ ಬಾಜಪೇಯಿ ಶಿಕ್ಷಕಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಸಂಪೂರ್ಣವಾಗಿ ತಪ್ಪು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರು ಯಾವುದೇ ಧಾರ್ಮಿಕ ಅಥವಾ ಪವಿತ್ರ ಸ್ಥಳದ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಬಾರದು. ಅಂತಹವರನ್ನು ಬಂಧಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಸಂಘಪರಿವಾರ ಮುಸ್ಲಿಮರು, ದಲಿತರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ: ಪಿಣರಾಯಿ ವಿಜಯನ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...