Homeಮುಖಪುಟಅಷ್ಟು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲು ನಾನೇನು ಉದ್ರೇಕಗೊಳ್ಳುವ (ಶಿಲಾಜಿತ್) ಊಟ ಮಾಡ್ತೀನಾ?: ಬಿಜೆಪಿ ಸಂಸದನ...

ಅಷ್ಟು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲು ನಾನೇನು ಉದ್ರೇಕಗೊಳ್ಳುವ (ಶಿಲಾಜಿತ್) ಊಟ ಮಾಡ್ತೀನಾ?: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸಂದರ್ಶನವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

ತಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಸಂದರ್ಶನದಲ್ಲಿ ಮಾತನಾಡಿದ ಸಿಂಗ್, ”1,000 ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ನಿಂದಿಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ, ನಾನೇನು ಉದ್ರೇಕಗೊಳ್ಳುವ ಮಾತ್ರೆಗಳಿಂದ (ಶಿಲಾಜಿತ್) ಮಾಡಿದ ಊಟ ಮಾಡಿದ್ದೇನಾ?” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಈ ಹಿಂದೆ ನಾನು 100 ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದೇನೆ ಎಂದು ಹೇಳುತ್ತಿದ್ದರು. ಈಗ 1,000 ಮಕ್ಕಳಿಗೆ ಹೀಗಾಯಿತು ಎಂದು ಹೇಳತೊಡಗಿದರು. ನಾನು ಉದ್ರೇಕಗೊಳ್ಳುವ (ಶಿಲಾಜಿತ್) ಊಟ ಮಾಡಿದ್ದೇನಾ?” ಸಿಂಗ್ ಎಬಿಪಿ ನ್ಯೂಸ್ ಚಾನೆಲ್‌ಗೆ ಕೇಳಿದ್ದಾರೆ.

”ಈ ಜನರು ಜಂತರ್ ಮಂತರ್‌ಗೆ ಹೋದರೆ, ನಾನು ರಾಜೀನಾಮೆ ನೀಡುತ್ತೇನೆ” ಎಂದು ಸಿಂಗ್ ಹೇಳಿದರು, ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿದರು.

ಏಳು ಮಹಿಳಾ ಕುಸ್ತಿಪಟುಗಳು ನೀಡಿದ ಲೈಂಗಿಕ ಕಿರುಕುಳದ ಆರೋಪದ ದೂರಿನ ಮೇರೆಗೆ ಬಿಜೆಪಿ ಸಂಸದ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಶುಕ್ರವಾರ ಪ್ರಕರಣ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿದರು. ಆ ಬಳಿಕ ಕೆಲವೇ ಗಂಟೆಗಳಲ್ಲಿ ಸಿಂಗ್ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿನ ಆರೋಪಗಳಿಗೆ ಸಂಬಂಧಿಸಿದ್ದರೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ.

ಎರಡನೆಯ ಎಫ್‌ಐಆರ್‌ನಲ್ಲಿ ವಯಸ್ಕ ಕುಸ್ತಿಪಟುಗಳು ನೀಡಿರುವ ದೂರುಗಳನ್ನು ಆಧರಿಸಿ ಭಾರತೀಯ ದಂಡ ಸಂಹಿತೆಯ ವಿವಿಧ ಪ್ರಸ್ತುತ ಸೆಕ್ಷನ್‌ಗಳಡಿಯಲ್ಲಿ ಘನತೆಗೆ ಕುಂದುಂಟು ಮಾಡಿದ ಆರೋಪವನ್ನು ದಾಖಲಿಸಿಕೊಳ್ಳಲಾಗಿದೆ.

ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಿದ ಮೇಲ್ವಿಚಾರಣಾ ಸಮಿತಿಯ ಸಂಶೋಧನೆಗಳನ್ನು ಸರ್ಕಾರವು ಸಾರ್ವಜನಿಕಗೊಳಿಸಬೇಕೆಂದು ಒತ್ತಾಯಿಸಿ ಅಂತಾರಾಷ್ಟ್ರೀಯ ಸ್ಪರ್ಧೆಗಳಿಂದ ದೇಶಕ್ಕೆ ಪ್ರಶಸ್ತಿಗಳನ್ನು ತಂದುಕೊಟ್ಟ ಹಲವಾರು ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಕುಸ್ತಿಪಟುಗಳು ಪ್ರತಿಪಾದಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...