Homeಕರ್ನಾಟಕಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ರಷ್ಯಾ-ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದೆ. ‌ಉಕ್ರೇನ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯರು ಆತಂಕದಲ್ಲಿದ್ದಾರೆ. ಇದರ ಜೊತೆಗೆ ಉಕ್ರೇನ್‌ಗೆ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯರು ಹೋಗುವುದೇಕೆ ಎಂಬ ಚರ್ಚೆ ನಡೆಯುತ್ತಿದೆ.

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಈ ಸಂಘರ್ಷದ ಸಮಯದಲ್ಲಿ ಪೂರ್ವ ಉಕ್ರೇನ್‌ನಲ್ಲಿ ಹಲವಾರು ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ, ತಮ್ಮನ್ನು ಸುರಕ್ಷಿತ ನೆರೆಯ ದೇಶಗಳಾದ ರೊಮೇನಿಯಾ ಮತ್ತು ಹಂಗೇರಿಯಂತಹ ಇತರ ದೇಶಗಳಿಗೆ ಸ್ಥಳಾಂತರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರಲ್ಲಿ ಹೆಚ್ಚಿನವರು ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಇವಾನೊ-ಫ್ರಾನ್ ಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ ಮುಂತಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ತರಬೇತಿ ಪಡೆಯುತ್ತಿದ್ದಾರೆ.

ಉಕ್ರೇನ್ ದೇಶವು ಗುಣಮಟ್ಟದ ಶಿಕ್ಷಣವನ್ನು ನೀಡುವ ಅನೇಕ ಜಾಗತಿಕ ಮಟ್ಟದ ವಿಶ್ವವಿದ್ಯಾನಿಲಯಗಳನ್ನು ಹೊಂದಿದೆ. ಅಲ್ಲಿನ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗಳು ಪಾಕೆಟ್ (ಶಿಕ್ಷಣ ವೆಚ್ಚ) ಸ್ನೇಹಿಯಾಗಿರುವುದರಿಂದ ಭಾರತದ ವಿದ್ಯಾರ್ಥಿಗಳು ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‌ಗೆ ತೆರಳುತ್ತಾರೆ.

ಕರ್ನಾಟಕ ಮೂಲದ ಹಲವಾರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದಾರೆ. ಅವರಲ್ಲಿ ಉಡುಪಿ ಮೂಲದ ಗ್ಲೆನ್ವಿಲ್ ಫೆರ್ನಾಂಡಿಸ್ ಕೂಡ ಒಬ್ಬರು. ಅವರು ಉಕ್ರೇನ್‌ನ ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ, ಉಕ್ರೇನ್‌ನಲ್ಲಿ ಸಂಘರ್ಷ ಏರ್ಪಟ್ಟಿರುವುದರಿಂದ ಉಡುಪಿಯಲ್ಲಿರುವ ಅವರ ತಂದೆ ಮೆಲ್ವಿನ್ ಫೆರ್ನಾಂಡಿಸ್ ಅವರು ಭಯಭೀತರಾಗಿದ್ದಾರೆ.

“ಕರ್ನಾಟಕ ಸರ್ಕಾರವು ದೀರ್ಘಾವಧಿಯಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಸುಧಾರಿಸಬೇಕು. ಕರ್ನಾಟಕದಲ್ಲಿ ಶ್ರೀಮಂತರು ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿದೆ. ಆದರೆ, ಮಧ್ಯಮ ವರ್ಗದ ಕುಟುಂಬಗಳು ಇಲ್ಲಿನ ಭಾರೀ ವೆಚ್ಚವನ್ನು ಭರಿಸಲಾಗದೇ, ತಮ್ಮ ಮಕ್ಕಳನ್ನು ಕಡಿಮೆ ವೆಚ್ಚವಿರುವ ವಿದೇಶಿ ವಿವಿಗಳಿಗೆ ಕಳುಹಿಸಿ ಶಿಕ್ಷಣ ಕೊಡಿಸುವಂತಾಗಿದೆ. ಇದೇ ಕಾರಣದಿಂದಾಗಿ, ನಾವು ನಮ್ಮ ಮಗನನ್ನು ಉಕ್ರೇನ್‌ಗೆ ಕಳಿಸಬೇಕಾಯಿತು” ಎಂದು ಮೆಲ್ಟಿನ್ ಫೆರ್ನಾಂಡಿಸ್ ಹೇಳಿದ್ದಾರೆ.

“ಕರ್ನಾಟಕದಲ್ಲಿ ನೀಟ್ ಮೂಲಕ ಸೀಟು ಸಿಗದಿದ್ದರೆ ವೈದ್ಯಕೀಯ ಶಿಕ್ಷಣದ ವೆಚ್ಚ ಐದೂವರೆ ವರ್ಷಗಳ ಕೋರ್ಸ್‌ಗೆ 60 ಲಕ್ಷ ರೂ. ಆಗುತ್ತದೆ. ಆದರೆ ಉಕ್ರೇನ್‌ನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗೆ 35 ಲಕ್ಷದಿಂದ 40 ಲಕ್ಷ ರೂ. ಖರ್ಚಾಗುತ್ತದೆ. ನಾನು ದುಬೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ, ನನ್ನ ಮಗನಿಗೆ ಉಕ್ರೇನ್ ಉತ್ತಮ ಆಯ್ಕೆಯಾಗುತ್ತದೆ ಎಂದು ನಾನು ನಿರ್ಧರಿಸಿ, ಅಲ್ಲಿಗೆ ಕಳುಹಿಸಿದೆ” ಎಂದು ಅವರು ಹೇಳುತ್ತಾರೆ.

ವಿದೇಶಗಳಲ್ಲಿ ಸಾಕಷ್ಟು ಸುತ್ತಾಡಿರುವ ಉಡುಪಿಯ ಶಿಕ್ಷಣ ತಜ್ಞ ವಿಜಯ್ ಪಿ.ರಾವ್ ಅವರು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದು, “ಭಾರತದ ಶಿಕ್ಷಣ ವ್ಯವಸ್ಥೆಯು ಸಾಕಷ್ಟು ಅಸ್ತವ್ಯಸ್ತವಾಗಿದೆ. ಭಾರತದಲ್ಲಿ ಸಮಂಜಸವಾದ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಸಿಗದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು USSR ಮತ್ತು ಸುತ್ತಲಿನ ದೇಶಗಳಿಗೆ ಹೋಗುವುದು ಸ್ವಲ್ಪ ಬೇಸರವನ್ನುಂಟು ಮಾಡುತ್ತದೆ. ಭಾರತದಂತಹ ಬೃಹತ್ ದೇಶವು ವೈದ್ಯಕೀಯ ಶಿಕ್ಷಣವನ್ನು ಸಮಂಜಸವಾದ ವೆಚ್ಚದಲ್ಲಿ ಒದಗಿಸಲು ಸಾಧ್ಯವಾಗದೇ ಇರುವುದು ಆಶ್ಚರ್ಯಕರವಾಗಿದೆ” ಎಂದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆದಿದ್ದು, ದಾಳಿಗೊಳಗಾಗುತ್ತಿರುವ ಪ್ರದೇಶದಲ್ಲಿರುವ ಜನರನ್ನು ಮಿಲಿಟರಿ ಬಂಕರ್‌ಗಳಿಗೆ ಸ್ಥಳಾಂತರಿಸಿ, ರಕ್ಷಿಸಲಾಗುತ್ತಿದೆ. ಇದುವರೆಗೆ ನೂರಾರು ಜನರು ಸಾವನ್ನಪ್ಪಿದ್ದಾರೆ. ಯುದ್ಧ ಪೀಡಿತ ದೇಶದಲ್ಲಿರುವ ಭಾರತೀಯರು, ಮತ್ತೆ ತವರಿಗೆ ಮರಳಲು ಯತ್ನಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.


ಇದನ್ನೂ ಓದಿರಿ: ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...