HomeUncategorizedಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

ಬಿಹಾರದಲ್ಲಿ ಬಿಜೆಪಿಗೆ ನಿತೀಶ್ ಕುಮಾರ್ ಏಕೆ ಬೇಕು?

- Advertisement -
- Advertisement -

ಪಾಟ್ನಾ: ಇನ್ನು 10 ತಿಂಗಳ ನಂತರ, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಬಿಹಾರದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು 2025ರ ಸೆಪ್ಟೆಂಬರ್‌ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಬಿಜೆಪಿಯ ಎರಡನೇ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಹಾರ ವಿಧಾನಸಭೆಯು  ನಿತೀಶ್ ನಾಯಕತ್ವದಲ್ಲಿ ಎನ್‌ಡಿಎ ಸ್ಪರ್ಧಿಸುತ್ತದೆಯೇ ಅಥವಾ ಮಹಾರಾಷ್ಟ್ರದಂತೆ ಅಲ್ಲಿ ಸ್ಪರ್ಧಿಸುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ “ನಾವು ಚರ್ಚಿಸಿ, ನಿರ್ಧರಿಸುತ್ತೇವೆ”. ಬಿಹಾರದಲ್ಲಿ 2025ರಲ್ಲಿ ನಡೆಯುವ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖವಿರುವುದಿಲ್ಲವೆಂದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಶಾ ಅವರ ಈ ಹೇಳಿಕೆಯು ಮತ್ತಷ್ಟು ವಿವಾದದ ಕಿಡಿಹೊತ್ತಿಸಿದೆ. ಆದರೆ ಜೆಡಿಯು ಬಿಹಾರದಲ್ಲಿ ಮಹಾರಾಷ್ಟ್ರದಂತೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ನಿತೀಶ್ ಅವರು ಏಕನಾಥ್ ಶಿಂಧೆಯಂತೆ ಅಲ್ಲ ಎಂದು ನಿತೀಶ್ ಅವರ ಆಪ್ತ ಸಹಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

2005ರಿಂದಲೂ ನಿತೀಶ್ ಹೆಸರಿನಲ್ಲಿ ಜನರು ಮತ ಚಲಾಯಿಸಿದ್ದಾರೆ. ಕಾನೂನುರಹಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಖಾತ್ರಿಪಡಿಸಿದ ಮತ್ತು ಬಿಹಾರವನ್ನು ಮತ್ತೆ ಅಭಿವೃದ್ಧಿ ಪಥಕ್ಕೆ ತಂದ ನಿತೀಶ್ ಅವರ  ಉತ್ತಮ ಆಡಳಿತಕ್ಕಾಗಿ ಮತದಾರರು ಅವರ ಪರವಾಗಿ ನಿಂತಿದ್ದಾರೆ ಎಂದು ಅವರ ಸಹಾಯಕ ಹೇಳಿದ್ದಾರೆ.

ಬಿಹಾರ ವಿಧಾನಸಭೆಯಲ್ಲಿ ಬಿಜೆಪಿಯು ಪ್ರಸ್ತುತ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸಹ ಅದಕ್ಕೆ ಇಲ್ಲಿಯವರೆಗೆ ಮುಖ್ಯಮಂತ್ರಿಯನ್ನು ಹೊಂದಿಲ್ಲದ ಒಂದು ರಾಜ್ಯವಾಗಿ ಬಿಹಾರ ಉಳಿದಿದೆ. 2025 ರಲ್ಲಿ ಬಿಹಾರದಲ್ಲಿ ಬಿಜೆಪಿ ತನ್ನದೇ ಆದ ಮುಖ್ಯಮಂತ್ರಿಯನ್ನು ಹೊಂದುವ ಸಮಯ ಬಂದಿದೆ ಎಂದು ಕೆಲವು ರಾಜ್ಯ ಮಟ್ಟದ ನಾಯಕರು ಸೂಚಿಸಿದ್ದಾರೆ. ಇದು ಚುನಾವಣಾ ಲೆಕ್ಕಾಚಾರಕ್ಕಿಂತ ಹೊರಗಿದೆ.

ಹೀಗಾಗಿಯೇ ಬಿಹಾರ ಚುನಾವಣೆಯನ್ನು ನಿತೀಶ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ. “ಮುಂದಿನ ವರ್ಷದ ಚುನಾವಣೆಯು ನಿತೀಶ್ ಮತ್ತು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪರ್ಧಿಸುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಡಿಸೆಂಬರ್ 22 ರಂದು ನವದೆಹಲಿಯಲ್ಲಿ ಹೇಳುವ ಮೂಲಕ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಗೆ ಇಷ್ಟವಿರಲಿ ಇಲ್ಲದಿರಲಿ, ನಿತೀಶ್ ಕುಮಾರ್ ಅವರನ್ನು ಅವಲಂಭಿಸಲು ಮೂರು ಕಾರಣಗಳಿವೆ. ಮೊದಲನೆಯದಾಗಿ, ಬಿಹಾರವನ್ನು ಸಮರ್ಥವಾಗಿ ಆಳಿದ ಮತ್ತು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಇರಿಸಿರುವ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿಯ ವ್ಯಕ್ತಿತ್ವವನ್ನು ಅವರು ಹೊಂದಿರುವುದು.

ಎರಡನೆಯದಾಗಿ, ನಿತೀಶ್ ಅವರ ಶೇಕಡಾ 15 ರಷ್ಟು ನಿಷ್ಟವಂತ ಮತದಾರರು ಅವರ ಮೈತ್ರಿಯನ್ನು ಲೆಕ್ಕಿಸದೆ ಯಾವಾಗಲೂ ಅವರ ಬೆಂಬಲಕ್ಕೆ ನಿಂತಿರುವುದು.

ಬಿಜೆಪಿಯ ಶೇ.19 , ಚಿರಾಗ್ ಪಾಸ್ವಾನ್‌ರ ಎಲ್‌ಜೆಪಿಯಿಂದ ಶೇ.5 ಮತ್ತು ಇತರರು ಶೇಕಡಾ 2.5 ಸೇರಿದರೆ ಇದು ಮೈತ್ರಿಕೂಟಕ್ಕೆ ಶೇ. 40 ಕ್ಕಿಂತ ಹೆಚ್ಚು ಮತಗಳನ್ನು ಗಳಿಸುತ್ತದೆ. ಇದು ಪ್ರಚಂಡ ವಿಜಯವನ್ನು ಖಚಿತಪಡಿಸುತ್ತದೆ. ಇದು 2010ರಲ್ಲಿ ಮತ್ತು 2015ರಲ್ಲಿ ಸಾಬೀತಾಗಿದೆ.

ಮೂರನೆಯದಾಗಿ, ಮುಖ್ಯಮಂತ್ರಿಯಾಗಬಲ್ಲ ಒಬ್ಬ ನಾಯಕನನ್ನು ಬಿಜೆಪಿ ಎಂದಿಗೂ ಬೆಳೆಸಲಿಲ್ಲ. ದಿವಂಗತ ಸುಶೀಲ್ ಮೋದಿ ಅವರನ್ನು ಹೊರತುಪಡಿಸಿ, ಬಿಜೆಪಿಯ ಯಾವುದೇ ಉಪಮುಖ್ಯಮಂತ್ರಿಗಳು ನಿತೀಶ್ ಅವರ ಸಮಗ್ರತೆ ಮತ್ತು ಆಡಳಿತ ಕೌಶಲ್ಯಕ್ಕೆ ಸರಿಸಾಟಿಯಾಗಬಲ್ಲ ನಾಯಕರಾಗಿ ಬೆಳೆಯಲಿಲ್ಲ.

ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...