Homeಮುಖಪುಟಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರು ಬ್ರಿಜ್‌ಭೂಷಣ್ ಬಗ್ಗೆ ಯಾಕೆ ಮಾತನಾಡುವುದಿಲ್ಲ?: ಮೊಯಿತ್ರಾ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೀರಿ, ಆದರೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ನಿಮ್ಮದೇ ಪಕ್ಷದ ಸಂಸದರ ಬಗ್ಗೆ ಯಾಕೆ ಮಾತನಾಡಲ್ಲ? ಎಂದು ಸ್ಮೃತಿ ಇರಾನಿ ಅವರಿಗೆ ಟಿಎಂ ಸಿ ಸಂಸೆದೆ ಮಹುವಾ ಮೊಯಿತ್ರಾ ಪ್ರಶ್ನೆ ಮಾಡಿದ್ದಾರೆ.

ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಲೋಕಸಭೆಯಲ್ಲಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ಈ ನಿರ್ಣಯವು ಸದನದಲ್ಲಿ ಯಶಸ್ವಿಯಾಗಲು ಉದ್ದೇಶಿಸಿಲ್ಲ, ಆದರೆ ಸರ್ಕಾರದ ಮೇಲೆ ಅವಿಶ್ವಾಸಕ್ಕಿಂತ ಹೆಚ್ಚಾಗಿ, ವಿಪಕ್ಷಗಳ INDIA ಮೈತ್ರಿಕೂಟದ ಮೇಲಿನ ವಿಶ್ವಾಸಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.

ಮಣಿಪುರದ ಬಗ್ಗೆ ಮಾತನಾಡಿದ ಅವರು, ಅಲ್ಲಿನ ಪರಿಸ್ಥಿತಿಯು ಇತರ ರಾಜ್ಯಗಳಿಗಿಂತ ಭಿನ್ನವಾಗಿದೆ. ಮಣಿಪುರದಲ್ಲಿ ದ್ವೇಷ ಅಪರಾಧ, ಆಂತರಿಕ ಕಲಹ ನಡೆಯುತ್ತಿದೆ. ಬಹುಪಾಲು ಅವಿಶ್ವಾಸ ನಿರ್ಣಯಗಳು ಸರ್ಕಾರವನ್ನು ಪತನ ಮಾಡಲು ಬಳಸಲಾಗುತ್ತದೆ. ಇಲ್ಲಿ ಆ ಸಾಧ್ಯತೆ ಇಲ್ಲ ಎಂದು ನಮಗೆ ತಿಳಿದಿದೆ. ನಮ್ಮ ಬಳಿ ಸಂಖ್ಯಾಬಲವಿಲ್ಲ. ಆಡಳಿತಾರೂಢ ಪಕ್ಷದಲ್ಲಿರುವ ನನ್ನ ಅನೇಕ ಸ್ನೇಹಿತರು ಮತ್ತು ವೈಎಸ್‌ಆರ್‌ನಂತಹ ಇತರ ಬಿಜೆಪಿ ಮಿತ್ರರು, ಈ ನಿರ್ಣಯವು INDIAದ ಪತನಕ್ಕಾಗಿದೆ ಎಂದು ನಮ್ಮನ್ನು ಲೇವಡಿ ಮಾಡಿದ್ದಾರೆ. ಆದರೆ ನಾವು ಯಾರನ್ನೂ ಕೆಳಗಿಳಿಸುವುದಕ್ಕಾಗಿ ಅಲ್ಲ, ಒಗ್ಗೂಡಿಸುವುದಕ್ಕಾಗಿ ಈ ನಿರ್ಣಯವನ್ನು ತಂದಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸ್ಮೃತಿ ಇರಾನಿಗೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೆರಳಿಸಲಿಲ್ಲ, ರಾಹುಲ್ ‘ಫೈಯಿಂಗ್ ಕಿಸ್’ ಕೆರಳಿಸಿದೆ: ಸ್ವಾತಿ ಮಾಲಿವಾಲ್

ಪ್ರಧಾನಿ ಮೋದಿ ಅವರು ಮಣಿಪುರದ ಪರಿಸ್ಥಿತಿಯನ್ನು ಇತರ ರಾಜ್ಯಗಳೊಂದಿಗೆ ಹೋಲಿಸುವು ‘ಸುಳ್ಳು ಹರಡುವಿಕೆ’ಯ ಭಾಗವಾಗಿದೆ ಎಂದ ಸಂಸದೆ ಕಿಡಿಕಾರಿದ್ದಾರೆ.

”ಮಣಿಪುರದಲ್ಲಿ ನಡೆಯುತ್ತಿರುವುದು ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಅಪರಾಧವಾಗಿದೆ. ಅಲ್ಲಿ ಪೊಲೀಸ್ ಸಿಬ್ಬಂದಿ ಒಂದು ಸಮುದಾಯಕ್ಕೆ ಸೇರಿದ್ದಾರೆ. ಮುಖ್ಯಮಂತ್ರಿಯವರ ಅದೇ ಸಮುದಾಯದವರಾಗಿರಬಹುದು ಎಂದೆನಿಸುತ್ತದೆ. ಪೊಲೀಸ್‌ ಸಿಬ್ಬಂದಿ ಇನ್ನೊಂದು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರವೆಸಗುವುದಕ್ಕಾಗಿ ಸಮುದಾಯದ ಜನಸಮೂಹಕ್ಕೆ ಅವರನ್ನು ಒಪ್ಪಿಸಿದರು. ನ್ಯಾಯದ ಬೇಡಿಕೆಯನ್ನು ತಡೆಯುವ ಎಲ್ಲಾ ಪ್ರಯತ್ನಗಳು ಇಲ್ಲಿ ನಡೆದವು” ಎಂದು ಮಣಿಪುರದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣವನ್ನು ನೆನಪಿಸಿದ್ದಾರೆ.

”ಕಳೆದ 3 ತಿಂಗಳಲ್ಲಿ 6,500 ಎಫ್‌ಐಆರ್‌ಗಳು ದಾಖಲಾಗಿವೆ ಯಾವ ರಾಜ್ಯದಲ್ಲಿ ಹೀಗಾಗಿದೆ? ಇದು ಡಬಲ್ ಇಂಜಿನ್ ಸರ್ಕಾರದ ದೊಡ್ಡ ವೈಫಲ್ಯ. ರಾಜಸ್ಥಾನದ ಬಗ್ಗೆ, ಛತ್ತೀಸ್‌ಗಢದ ಬಗ್ಗೆ ಏನಂತೀರಿ? ಎಂದು ಕೇಳುವ ಮೂಲಕ ಇತರ ರಾಜ್ಯಗಳನ್ನು ಅವಮಾನಿಸಬಾರದು. ಮಣಿಪುರವು ಮೌನವಾಗಿ ಅನುಮೋದಿಸಲಾದ ದ್ವೇಷದ ಅಪರಾಧವಾಗಿದೆ. ಇದು ಅಂತರ್ಯುದ್ಧ ಎಂದರೆ ತಪ್ಪಾಗಲ್ಲ” ಎಂದು ಮೋದಿ ನೇತೃತ್ವದ ಸರ್ಕಾರವನ್ನು ಮಹುವಾ ಮೊಯಿತ್ರಾ ಟೀಕಿಸಿದ್ದಾರೆ.

”ಪ್ರಧಾನಿ ಮೋದಿಯವರೇ ನೀವು ಇದನ್ನು ಕೇಳುತ್ತಿದ್ದರೆ… ನಾನು ಮಣಿಪುರದ ಜನರ ಪರವಾಗಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಆಡಳಿತವನ್ನು ಬದಲಿಸಿ, ಎಲ್ಲಾ ಪಕ್ಷಗಳು ಕದನ ವಿರಾಮಕ್ಕಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಇಲ್ಲದಿದ್ದರೆ, ನಿಮ್ಮ ಅವಧಿ ಮುಗಿದ ನಂತರವೂ, ಮಣಿಪುರದಲ್ಲಿ ಏನು ತಪ್ಪಾಗಿದೆ ಎಂದು ಭಾರತ ಒಂದೇ ಧ್ವನಿಯಲ್ಲಿ ಪ್ರತಿಧ್ವನಿಸುತ್ತದೆ” ಎಂದು ಮಹುವಾ ಮೊಯಿತ್ರಾ ಹೇಳಿದರು.

”ಭಾರತವು ನಿಮ್ಮ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಹೊಸ ಸಂಸತ್ತಿನ ಸಭಾಂಗಣದಲ್ಲಿ ಬಹುಮತದ ಧರ್ಮೀಯರಿಗೆ ತಲೆಬಾಗುವ ಮಹಾನ್ ಪ್ರಜಾಪ್ರಭುತ್ವದ ಪ್ರಧಾನಿಯ ನಡೆ ನಾಚಿಕೆಗೇಡು ಪೊಲೀಸ್ ದೌರ್ಜನ್ಯ ಮತ್ತು ಚಾಂಪಿಯನ್ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದು ನಮಗೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯ 3 ಜಿಲ್ಲೆಗಳ 50 ಪಂಚಾಯತ್‌ಗಳು- ಹರ್ಯಾಣದಲ್ಲಿ ಮುಸ್ಲಿಂ ವರ್ತಕರನ್ನು ರಾಜ್ಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿ ಪತ್ರಗಳನ್ನು ಹೊರಡಿಸಿರುವುದು ನಮಗೆ ಅವಮಾನ ತಂದಿದೆ. ದ್ವೇಷದ ಯುದ್ಧದಲ್ಲಿ ಏನೇನಾಯ್ತು ನೋಡಿ, ತರಕಾರಿಗಳು ಹಿಂದೂ ಆದವು, ಆಡು ಮುಸ್ಲಿಂ ಆಯ್ತು ನಾವು ಹಿಂಸೆಗೆ ಒಳಗಾಗುವುದಿಲ್ಲ. ಮಮತಾ ದೀದಿ ಹೆದರಿಲ್ಲ, ಸ್ಟಾಲಿನ್ ಹೆದರಿಲ್ಲ, ಅಖಿಲೇಶ್ ಜಿ ಹೆದರಿಲ್ಲ, ರಾಹುಲ್ ಗಾಂಧಿ ಹೆದರಿಲ್ಲ. ಒಬ್ಬ ಕ್ರೋನಿ ಕ್ಯಾಪಿಟಲಿಸ್ಟ್ ನಾವು ನೋಡುತ್ತಿರುವಾಗಲೇ ಭಾರತದ ನಿಯಂತ್ರಕರು ಮತ್ತು ಇಕ್ವಿಟಿ ಮಾರುಕಟ್ಟೆಗಳಿಂದ ಹಣ ಮಾಡಲು ಹೋಗುವುದಿಲ್ಲ. ಎಲ್ಲರೂ ಕೇಳುತ್ತಾರೆ ಮೋದಿಜಿ ಇಲ್ಲದಿದ್ದರೆ ಯಾರು? ಮಣಿಪುರದ ಬಗ್ಗೆ ಈ ಮೌನದ ನಂತರ ಮೋದಿ ಅಲ್ಲದೆ ಬೇರೆ ಯಾರೂ ಅಲ್ಲ ಎಂದು ಭಾರತ ಹೇಳಬಹುದು ಎಂದರು.

ರಾಹುಲ್ ಮೇಲೆ ಆರೋಪಿಸಿರುವ ‘ಫ್ಲೈಯಿಂಗ್ ಕಿಸ್’ ಪ್ರಕರಣ ಬಗ್ಗೆ ಮಾತನಾಡಿದ ಮಹುವಾ, ”ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಸಂಸದರ ಮೇಲೆ ಆರೋಪ ಬಂದಾಗ ನೀವೇನೂ ಮಾತಾಡಿಲ್ಲ ಯಾಕೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾರೆ.

ಗುರುವಾರ ನಡೆದ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಕೇಂದ್ರ ಸಚಿವ ಆಕ್ರೋಶ ವ್ಯಕ್ತಡಿಸಿದ್ದು, ಬಿಜೆಪಿ ಸಂಸದೆಯರು ಕೂಡ ಕ್ರಮಕ್ಕೆ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...