Homeಕರ್ನಾಟಕಬೆಂಗಳೂರು: 'ಚುನಾವಣಾ ಬಾಂಡ್ ಏಕೆ ಅತೀ ದೊಡ್ಡ ಹಗರಣ'? ಸಂವಾದ ಕಾರ್ಯಕ್ರಮ

ಬೆಂಗಳೂರು: ‘ಚುನಾವಣಾ ಬಾಂಡ್ ಏಕೆ ಅತೀ ದೊಡ್ಡ ಹಗರಣ’? ಸಂವಾದ ಕಾರ್ಯಕ್ರಮ

- Advertisement -
- Advertisement -

‘ಚುನಾವಣಾ ಬಾಂಡ್ ಏಕೆ ಅತೀ ದೊಡ್ಡ ಹಗರಣ?’ ಎಂಬ ವಿಷಯದ ಕುರಿತು ಇಂದು (ಏ.20) ಸಂವಾದ ಕಾರ್ಯಕ್ರಮ ನಡೆಯಲಿದೆ.

ಬಹುತ್ವ ಕರ್ನಾಟಕ, ಜನಾಧಿಕಾರ ಸಂಘರ್ಷ ಪರಿಷತ್ ಮತ್ತು ಜಾಗೃತ ಕರ್ನಾಟಕ ಸಂಘಟನೆಗಳು ಜಂಟಿಯಾಗಿ ಸಂಜೆ 4 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸಿವೆ.

ಚುನಾವಣಾ ಬಾಂಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ಕಾರ್ಯಕರ್ತರಾದ ಅಂಜಲಿ ಭಾರದ್ವಾಜ್‌ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ವಿಶ್ವದ ಅತೀ ದೊಡ್ಡ ಹಗರಣ ಎಂದು ಕರೆಯಲ್ಪಡುವ ಚುನಾವಣಾ ಬಾಂಡ್ ಕುರಿತ ಪ್ರಶ್ನೆಗಳಿಗೆ ಪ್ರಶಾಂತ್ ಭೂಷಣ್ ಉತ್ತರಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ಕಾರ್ಪೋರೇಟ್ ವ್ಯಕ್ತಿಗಳು ಮತ್ತು ಸಂಸ್ಥೆಗಳು ಬಾಂಡ್ ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುತ್ತಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಫೆ.15ರಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠ ರದ್ದುಗೊಳಿಸಿದೆ.

ಯೋಜನೆಯ ರದ್ದತಿ ವೇಳೆ ಇದು ‘ಅಸಂವಿಧಾನಿಕ ಮತ್ತು ಜನರ ಮಾಹಿತಿ ಹಕ್ಕಿಗೆ ವಿರುದ್ದವಾಗಿದೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಭಾರತೀಯ ಚುನಾವಣಾ ಆಯೋಗಕ್ಕೆ ನೀಡಿತ್ತು. ಆ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ ಮಾಹಿತಿಯನ್ನು ನೋಡಿದರೆ, ಹಲವು ಕಾರ್ಪೋರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿ ಲಾಭ ಪಡೆದುಕೊಂಡಿರುವುದು ಗೊತ್ತಾಗುತ್ತದೆ. ಹಾಗಾಗಿ, ಇದು ಅಧಿಕೃತವಾಗಿ ನಡೆಯುತ್ತಿದ್ದ ಅತಿ ದೊಡ್ಡ ಭ್ರಷ್ಟಾಚಾರ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ‘ಹೆಣಗಳ ಮೇಲೆ ಹಣದ ರಾಜ್ಯ; ಇದೇ ಇವರ ಸಂವೇದನಾ ಹೀನತೆಯ ಗ್ಯಾರಂಟಿ..’; ಬಿಜೆಪಿ ವಿರುದ್ಧ ನಟ ಕಿಶೋರ್ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರ: ಬಿಸಿಲಿನ ತಾಪಕ್ಕೆ ಪ್ರಜ್ಞೆ ತಪ್ಪಿದ ಶಾಲಾ ವಿದ್ಯಾರ್ಥಿಗಳು; ಆಸ್ಪತ್ರೆಗೆ ದಾಖಲು

0
ಪ್ರಸ್ತುತ ಉತ್ತರ ಭಾರತದಲ್ಲಿ ಉರಿಯುತ್ತಿರುವ ತೀವ್ರತರವಾದ ಶಾಖದ ಅಲೆಯಿಂದಾಗಿ ಬಿಹಾರದ ಶೇಖ್‌ಪುರದ ಹಲವಾರು ಶಾಲಾ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯವಾಗಿ ಮಂಗಳವಾರ ಗರಿಷ್ಠ ತಾಪಮಾನ 42.9 ಡಿಗ್ರಿ ಸೆಲ್ಸಿಯಸ್...