Homeಮುಖಪುಟಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

ಸರ್ಕಾರದ ನಿರ್ಧಾರಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಯಾಕೆ?: ಕೇಜ್ರಿವಾಲ್ ವಾಗ್ದಾಳಿ

- Advertisement -
- Advertisement -

ಸದನವನ್ನು ಉದ್ದೇಶಿಸಿ ಮಾತನಾಡುವಾಗ ಸರ್ಕಾರದ ನಿರ್ಧಾರಗಳು ಮತ್ತು ಕಾರ್ಯನಿರ್ವಹಣೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಅವರು ರಾಜ್ಯಪಾಲರಿಗೆ ಇರುವ ಅಧಿಕಾರಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಸರ್ಕಾರದ ಕಾರ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮತ್ತು ನಡವಳಿಕೆಯನ್ನು ‘ಬೇಗಾನಿ ಶಾದಿ ಮೆ ಅಬ್ದುಲ್ಲಾ ದೀವಾನಾ’ ಎಂದು ಕೇಜ್ರಿವಾಲ್ ಕರೆದಿದ್ದಾರೆ. ಇದರ ಅರ್ಥ- ಹೊರಗಿನವರು ಅಪರಿಚಿತರ ಮದುವೆಯಲ್ಲಿ ತುಂಬಾ ತೊಡಗಿಸಿಕೊಂಡಿದ್ದಾರೆ ಎಂಬಂತಾಗಿದೆ. ಈ ಮೂಲಕ ರಾಜ್ಯಪಾಲರು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು ನಮ್ಮ ರಾಜ್ಯದ ಅಧಿಕಾರವನ್ನು ಸರ್ಕಾರವಾಗಿ ನಾವು ನಡೆಸುತ್ತೇವೆ ಎಂದು ಹೇಳಿದಂತಿದೆ.

“ಈ ರಾಜ್ಯಪಾಲರು ಯಾರು? ಅವರು ಯಾಕೆ ನಮ್ಮನ್ನು ನಿಯಂತ್ರಿಸಬೇಕು? ಅವರಿಗೆ ಯಾವ ಅಧಿಕಾರವಿದೆ?” ಎಂದು ಕೇಜ್ರಿವಾಲ್ ದೆಹಲಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯ ಮುಖ್ಯಸ್ಥರಾಗಿರುವ ವ್ಯಕ್ತಿ ಸುಪ್ರೀಂ ಕೋರ್ಟ್ ಆದೇಶಗಳನ್ನು ಅಗೌರವಗೊಳಿಸುತ್ತಿದ್ದಾರೆ. ರಾಜ್ಯಪಾಲರು ಸ್ವಇಚ್ಛೆ ಮತ್ತು ಅಧಿಕಾರದ ಮೇಲೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ” ಎಂದರು.

ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್‌ಲ್ಯಾಂಡ್‌ಗೆ ಕಳುಹಿಸುವ ಸರ್ಕಾರದ ಯೋಜನೆಯನ್ನು ರಾಜ್ಯಪಾಲರು ನಿರ್ಬಂಧಿಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಇದನ್ನೂ ಓದಿ: ವಿಶ್ಲೇಷಣೆ: ತಮಿಳುನಾಡು ರಾಜ್ಯಪಾಲರು ತಮ್ಮ ಮಿತಿಗಳನ್ನು ಮೀರುತ್ತಿದ್ದಾರೆಯೇ?

ಮಕ್ಕಳ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ವಿಷಯದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ನಡೆಸುತ್ತಿದೆ ಎಂಬ ಆರೋಪದ ಮೇಲೆ ಎಎಪಿ ಶಾಸಕ ಅತಿಶಿ ಅವರು,  “ಅಕ್ರಮ ಹಸ್ತಕ್ಷೇಪ” ವಿಷಯದ ಮೇಲೆ ಗಮನ ಸೆಳೆಯುವ ಪ್ರಸ್ತಾಪ ಮುಂದಿಟ್ಟರು. ಆಗ ಅದನ್ನು ಬಿಜೆಪಿಯವರು ವಿರೋಧಿಸಿದರು. ಸಧನದಲ್ಲಿ ಕೋಲಾಹಲ ಉಂಟಾಯಿತು. ಹಾಗಾಗಿ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಐವರು ಬಿಜೆಪಿ ಶಾಸಕರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಆ ನಂತರ ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ ಸತತ ಎರಡು ದಿನವೂ ಹೈಡ್ರಾಮಾ ನಡೆಯಿತು.

ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರ ನಿರ್ದೇಶನದ ಮೇರೆಗೆ ಬಿಜೆಪಿ ಶಾಸಕರಾದ ಅಜಯ್ ಮಹಾವರ್, ಜಿತೇಂದ್ರ ಮಹಾಜನ್, ಓಪಿ ಶರ್ಮಾ, ಅಭಯ್ ವರ್ಮಾ ಮತ್ತು ಅನಿಲ್ ಬಾಜ್‌ಪೇಯ್ ಅವರನ್ನು ಸದನದಿಂದ ಹೊರ ಹಾಕಲಾಯಿತು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಅಹಿತಕರ ಸಂಬಂಧವು ಇತ್ತಿಚೆಗೆ ಹೆಚ್ಚು ಸುದ್ದಿಯಾಗುತ್ತಿದೆ. ವಿಶೇಷವಾಗಿ ಬಿಜೆಪಿಯೇತರ ಆಡಳಿತ ಪಕ್ಷಗಳು ನಡೆಸುವ ರಾಜ್ಯಗಳಲ್ಲಿ ಈ ರೀತಿ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೇಂದ್ರ ಸರ್ಕಾರವನ್ನು ನಡೆಸುವ ಪಕ್ಷಕ್ಕೆ, ರಾಜ್ಯಪಾಲರು ನಿಷ್ಠೆಯ ಪ್ರದರ್ಶನದಲ್ಲಿ ಸ್ಪರ್ಧೆಗಿಳಿದಂತೆ ತೋರುತ್ತದೆ. ಜಗದೀಪ್ ಧನಕರ್ ಅವರು ರಾಜ್ಯಪಾಲರಾಗಿದ್ದಾಗ ತಮಿಳುನಾಡು, ತೆಲಂಗಾಣ, ಜಾರ್ಖಂಡ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳಗಳ ಅದೇ ರೀತಿ ಇದೀಗ ದೆಹಲಿಯಲ್ಲೂ ಹೀಗೆ ಹಳಸಿದ ಸಂಬಂಧಗಳನ್ನು ಕಂಡಿವೆ. ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಉತ್ತಮ ಸಮನ್ವಯತೆ ಮುಖ್ಯವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why nowadays Governors are unnecessarily poking their nose in the rule of CMs. Let them work with in their limitations. They’re having certain Power’s. Within their preview they have to work then it will be respectful to their position. Otherwise it’s a waste and disrespectful to that perticular position. Centre should take responsibility of guiding these people. Then only there is certain value this posts otherwise it’s a laughing stock to the public.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...