Homeಮುಖಪುಟಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ಕರ್ನಾಟಕ ಎಂಪ್ಲಾಯರ್ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಅವರಿಗೆ ಪೂರ್ತಿ ಸಂಬಳ ನೀಡಿ ಎಂದು ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ ಕ್ಯಾಪ್ಟನ್‌ ಮಣಿವಣ್ಣನ್‌ರವರು ಏಪ್ರಿಲ್‌ 13ರಂದು ಹೊರಡಿಸಿದ್ದ ಆದೇಶವನ್ನು ಅಚ್ಚರಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಂಪಡೆದಿದ್ದಾರೆ.

ಏಪ್ರಿಲ್‌ 15ರಂದು ಹಿಂಪಡೆಯಲಾದ ಆದೇಶವನ್ನು ಹೊರಡಿಸಲಾಗಿದ್ದು, ಈಗಾಗಲೇ ಉಲ್ಲೇಖ(1)ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ ಮತ್ತು ಈಗಾಗಲೇ ಕೇಂದ್ರ ಸರ್ಕಾರವು ದಿ.29-03-2020ರಂದು ಆದೇಶ ಹೊರಡಿಸಿರುವುದರಿಂದ ಸದರಿ ಉಲ್ಲೇಖ (3)ರ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮಣಿವಣ್ಣನ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಹಿನ್ನೆಲೆಯಲ್ಲಿ ನೌಕರರು/ಕಾರ್ಮಿಕರನ್ನು ಕೆಲಸದಿಂದ ತೆಗೆಯಬೇಡಿ, ಪೂರ್ತಿ ಸಂಬಳ ನೀಡಿ: ಸರ್ಕಾರದ ಆದೇಶ


ಮೇಲ್ನೋಟಕ್ಕೆ ಇದು ಕೇಂದ್ರದ ಆದೇಶವಿರುವುದರಿಂದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತೋರಿದರೂ ಸಹ ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌ ಒತ್ತಡಕ್ಕೆ ಮಣಿದು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

COVID -19 ತುರ್ತು ಪರಿಸ್ಥಿತಿಯ ಸನ್ನಿವೇಶದಲ್ಲಿ ಎಲ್ಲಾ ಸಾರ್ವಜನಿಕ/ಖಾಸಗಿ ಸಂಸ್ಥೆಗಳ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು, ವಿಶೇಷವಾಗಿ casual ಕೆಲಸಗಾರರರನ್ನು ಅಥವಾ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಬಾರದೆಂದು ಮತ್ತು ಅವರ ವೇತನವನ್ನು ಕಡಿತಗೊಳಿಸಬಾರದೆಂದು ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 69ರಡಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಈ ಮೊದಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಡುವ ಯಾವುದೇ ಉಲ್ಲಂಘನೆಗಳು ವಿಪತ್ತು ನಿರ್ವಹಣೆ ಕಾಯ್ದೆ 2005 ರಡಿ ದಂಡನೆಯ ಕ್ರಮಕ್ಕೆ ಒಳಪಟ್ಟಿರುತ್ತದೆ ಎಂದು ಎಚ್ಚರಿಕೆ ಸಹ ನೀಡಲಾಗಿತ್ತು.

ಆದರೆ ಈಗ ಏಕಾಏಕಿ ಸರ್ಕಾರ ತನ್ನ ಕಾರ್ಮಿಕ ಪರವಿದ್ದ ಆದೇಶವನ್ನು ಹಿಂಪಡೆದಿದ್ದು ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದಿದೆ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸರ್ಕಾರದ ಮೊದಲ ಆದೇಶಕ್ಕೆ ನಾವು ತಕರಾರು ಸಲ್ಲಿಸಿದ್ದೇವು. ನಂತರ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ ಎಂದು ಕರ್ನಾಟಕ ಎಂಪ್ಲಾಯರ್‍ಸ್‌ ಅಸೋಷಿಯೇಷನ್‌‌ನ ಅಧ್ಯಕ್ಷರಾದ ಬಿ.ಸಿ ಪ್ರಭಾಕರ್‌ರವರು ತಮ್ಮ ಸಂಘದ ಸದ್ಯಸ್ಯರಿಗೆ ಪತ್ರ ಬರೆದಿದ್ದಾರೆ.

ಇದು ಕಾರ್ಮಿಕ ದ್ರೋಹಿ ಸರ್ಕಾರ – ಎಸ್‌. ಬಾಲನ್‌

ಈ ಕುರಿತು ನಾನುಗೌರಿ.ಕಾಂ ಹಿರಿಯ ಕಾರ್ಮಿಕ ಮುಖಂಡರಾದ ಎಸ್‌.ಬಾಲನ್‌ರವರನ್ನು ಮಾತನಾಡಿಸಿತು. ಅವರು “ಏಪ್ರಿಲ್‌ 13ರಂದು ಸರ್ಕಾರ ಹೊರಡಿಸಿದ್ದ ಆದೇಶ ಕೇವಲ ಸಂಘಟಿತ ವಲಯದಲ್ಲಿನ casual ಕೆಲಸಗಾರ ಮತ್ತು ಗುತ್ತಿಗೆ ಕಾರ್ಮಿಕರಿಗೆ ಮಾತ್ರ ಅನ್ವಯಿಸುತ್ತಿತ್ತು. ಅವರಲ್ಲದೇ ಈ ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೋಟ್ಯಾಂತರ ಕಾರ್ಮಿಕರಿದ್ದಾರೆ. ಅವರೆಲ್ಲರನ್ನು ಈ ಸರ್ಕಾರ ಮರತೇಬಿಟ್ಟಿತ್ತು. ಈಗ ಸಂಘಟಿತ ವಲಯದಲ್ಲಿರುವವರನ್ನು ಕೈಬಿಟ್ಟಿದ್ದಾರೆ. ಅಂದರೆ ಈ ಸರ್ಕಾರ ಕಾರ್ಮಿಕರಿಗೆ ದ್ರೋಹ ಮಾಡುತ್ತಿರುವುದು ಸ್ಪಷ್ಟವಾಗಿದೆ” ಎಂದರು.

ಎಸ್‌ ಬಾಲನ್‌

1979ರಲ್ಲಿ ಇಂಟರ್‌ಸ್ಟೇಟ್‌ ಕಾಂಟ್ರಾಕ್ಟ್‌ ಲೇಬರ್‌ ಆಕ್ಟ್‌ ಪ್ರಕಾರ ಕಾರ್ಮಿಕನ ಸ್ವಂತ ರಾಜ್ಯ ಮತ್ತು ಕಾರ್ಮಿಕ ಕೆಲಸ ಮಾಡುವ ರಾಜ್ಯ ಎರಡೂ ಸಹ ಆತನ ಬಗ್ಗೆ ಕಾಳಜಿ ವಹಿಸಬೇಕು. ಅದರ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಲಾಕ್‌ಡೌನ್‌ ಮಾಡುವಾಗ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಯೋಚಿಸದ ಸರ್ಕಾರಗಳು ಜನದ್ರೋಹಿಯಾಗಿವೆ. ಕಾರ್ಮಿಕರಿಗೆ ಊಟ ಹಾಕಲು ಯೋಗ್ಯತೆಯಿಲ್ಲದ ಈ ಸರ್ಕಾರ ಸೀಲ್‌ಡೌನ್‌ ಮಾಡುವ ಮಾತಾಡುತ್ತಿದೆ. ಆದೇಶ ಹಿಂಪಡೆದಿರುವುದು ಮಾನವ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕೂಡಲೇ ಎಲ್ಲಾ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಬಾಲನ್‌ ಆಗ್ರಹಿಸಿದ್ದಾರೆ.

ಇದು ಮಾಲೀಕರ ಪರ ಸರಕಾರ – ಆರ್‌ ಮಾನಸಯ್ಯ

ಆರ್‌ ಮಾನಸಯ್ಯ

ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (TUCI)ದ ರಾಜ್ಯಧ್ಯಕ್ಷರಾದ ಕಾರ್ಮಿಕ ಸಂಘಟನೆಯ ಮುಖಂಡರಾದ ಆರ್‌.ಮಾನಸಯ್ಯನವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ, “ಕರ್ನಾಟಕ ರಾಜ್ಯ ಸರಕಾರವು ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ, ಕೆಲಸ ಇರಲಿ, ಇಲ್ಲದಿರಲಿ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಪಾವತಿ ಮಾಡಬೇಕೆಂದು ದಿ 13-4-2020 ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ಉದ್ಯೋಗದಾತರ ಸಂಘದ ಒತ್ತಾಯಕ್ಕೆ ಮಣಿದು ಸದರಿ ಆದೇಶವನ್ನು ಹಿಂಪಡೆದಿದೆ. ಕೆಲಸ ಹಾಗೂ ಕೂಲಿ ಇಲ್ಲದೆ ರಾಜ್ಯದ ಖಾಸಗೀ ಕಾಖಾ೯ನೆಗಳ,ಹೋಟೆಲ್ ಅಂಗಡಿ ಮುಂಗಟ್ಟುಗಳ ,ಸರಕಾರಿ ಇಲಾಖೆಗಳ ಎಲ್ಲ ಕಾಮಿ೯ಕರ ಜೀವನಕ್ಕೆ ಗಂಡಾಂತರ ತರಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರದ ಬಣ್ಣ ಇನ್ನಷ್ಟು ಬದಲಾಗಿದೆ. ಸಂಪೂಣ೯ ಸಂಕಷ್ಟಕ್ಕೆ ತುತ್ತಾದ ಕಾಮಿ೯ಕರನ್ನು ನಡು ನೀರಲ್ಲಿ ಕೈಬಿಟ್ಟು ತಾನು ಮಾಲೀಕರ ಸರಕಾರ ಎಂದು ಸಾಬೀತು ಪಡಿಸಿದೆ. ಇದೇ ರೀತಿ ಕೇಂದ್ರ ಹಾಗೂ ರಾಜ್ಯಸರಕಾರದ ಎಲ್ಲಾ ಕೊರೊನಾ ಪರಹಾರ ಭರವಸೆಗಳು ಮೋಸದಿಂದ ಕೂಡಿವೆ. ಈ ತೀರ್ಮಾನವನ್ನು ಸರಕಾರ ಕೈ ಬಿಡಬೇಕು. 13-4-2020ರ ಸುತ್ತೋಲೆಯನ್ನು ಮತ್ತೆ ಜಾರಿಗೆ ತರಬೇಕು. ಇದಾಗದಿದ್ದರೆ, ಕಾರ್ಮಿಕರು ಬಹಿರಂಗವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರಕಾರಕ್ಕೆ ಈ ಮೂಲಕ ಎಚ್ಚರಿಸುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...