Homeಮುಖಪುಟ'ಇಬ್ರಾಹಿಂ ಏಕೆ ಸಿಎಂ ಆಗಬಾರದು?, ಅವರೇನು ಅಸ್ಪೃಶ್ಯರಲ್ಲ': ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮ ಹೇಳಿಕೆ

‘ಇಬ್ರಾಹಿಂ ಏಕೆ ಸಿಎಂ ಆಗಬಾರದು?, ಅವರೇನು ಅಸ್ಪೃಶ್ಯರಲ್ಲ’: ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮ ಹೇಳಿಕೆ

- Advertisement -
- Advertisement -

ಜೆಡಿಎಸ್ ಪಕ್ಷವು ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂಬ ವಿಚಾರದ ಕುರಿತು ಮಾಧ್ಯಮಗಳ ಜೊತೆ ಮಾತನಾಡುವಾಗ ಅಸ್ಪೃಶ್ಯತೆಯನ್ನು ಸಮರ್ಥಿಸುವ ರೀತಿಯಲ್ಲಿ ‘ಇಬ್ರಾಹಿಂ ಏಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರಲ್ಲ’ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಸೂಕ್ಷ್ಮವಾಗಿ ಮಾತನಾಡಿರುವುದು ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಯಲ್ಲಿ ನಿರತರಾಗಿರುವ ಕುಮಾರಸ್ವಾಮಿಯವರು ಖಾಸಗಿ ಇಂಗ್ಲಿಷ್ ವಾಹಿನಿಯೊಂದಕ್ಕೆ ನೀಡಿದ ಚುಟುಕು ಸಂದರ್ಶನದಲ್ಲಿ ಈ ಮಾತುಗಳನ್ನು ಆಡಿ ವಿವಾದಕ್ಕೆ ಗುರಿಯಾಗಿದ್ದಾರೆ.

ಕಳೆದ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳೀಕೆ ನೀಡಿದ್ದರು. ಈ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಕುಮಾರಸ್ವಾಮಿಯವರು “ನಾವು ಮುಸ್ಲಿಂ ಮತಗಳನ್ನು ಪಡೆಯುವುದಕ್ಕಾಗಿ ಮಾತನಾಡುತ್ತಿಲ್ಲ. ಇತ್ತೀಚೆಗೆ ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂರವರು ಒಂದೆರೆಡು ವರ್ಷಗಳಲ್ಲಿ ಕುಮಾರಸ್ವಾಮಿಯವರು ಕೇಂದ್ರಕ್ಕೆ ತೆರಳಿದರೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ಆದರೆ ಪ್ರಸ್ತುತ 5 ವರ್ಷ ನಾನು ನಮ್ಮ ಐದು ಅಂಶಗಳ ಕುರಿತು ಗಮನ ವಹಿಸುತ್ತೇವೆ. ಆದರೆ ಎರಡೂ ಮೂರು ವರ್ಷದಲ್ಲಿ ದೆಹಲಿಯ ನಮ್ಮ ಸ್ನೇಹಿತರು ಉನ್ನತ ಸ್ಥಾನಮಾನ ಕೊಡುವುದಾಗಿ ಕೇಂದ್ರಕ್ಕೆ ಕರೆದರೆ, ಅಂತ ಸಂದರ್ಭ ಬಂದರೆ ಹೋಗುತ್ತೇನೆ. ಅಂತ ಸಂದರ್ಭದಲ್ಲಿ ಇಬ್ರಾಹಿಂರವರು ಏಕೆ ಸಿಎಂ ಆಗಬಾರದು? ಅವರೇನು ಅಸ್ಪೃಶ್ಯರಲ್ಲ (He is not an Untouchable Man)” ಎಂದು ಹೇಳಿದ್ದಾರೆ.

ಕುಮಾರಸ್ವಾಮಿಯವರು ಒಂದು ಪಕ್ಷದ ಶಾಸಕಾಂಗ ಪಕ್ಷದ ಮುಖಂಡರಾಗಿ, ಮಾಜಿ ಮುಖ್ಯ ಮಂತ್ರಿಗಳಾಗಿ ಆ ಪಕ್ಷದ ಅಧ್ಯಕ್ಷರಿಗೆ ಸಿಎಂ ಸ್ಥಾನ ನೀಡುವ ಕುರಿತು ಮಾತನಾಡುವುದು ತಪ್ಪಲ್ಲ. ಆದರೆ ಮಾತಿನ ಮಧ್ಯೆ ಅವರೇನು ಅಸ್ಪೃಶ್ಯರಲ್ಲ ಎಂದು ಹೇಳುವ ಮೂಲಕ ಅಸ್ಪೃಶ್ಯ ಸಮುದಾಯಗಳನ್ನು ಅವಮಾನಿಸಿ, ಅಸ್ಪೃಶ್ಯರಿಗೆ ಅಧಿಕಾರ ನೀಡುವ ಅಗತ್ಯವಿಲ್ಲ ಎನ್ನುವ ಧಾಟಿಯಲ್ಲಿ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ.

ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ಸೂಕ್ಷ್ಮತೆಯನ್ನು ಹೊಂದಿರಬೇಕಾಗುತ್ತದೆ. ಅಸ್ಪೃಶ್ಯತೆ ಎಂಬುದು ಭಾರತಕ್ಕೆ ಅಂಟಿದ ಶಾಪ ಹಲವು ಮಹನೀಯರು ಅಭಿಪ್ರಾಯಪಟ್ಟಿದ್ದಾರೆ. ಹೀಗಿರುವಾಗ ಅಸ್ಪೃಶ್ಯತೆಯನ್ನು ತೊಡೆದುಹಾಕಬೇಕಾದರೆ ಅವರಿಗೆ ಅಧಿಕಾರ-ಸಮಾನತೆ ನೀಡುವ ಮೂಲಕ ಮುಖ್ಯವಾಹಿನಿ ಸಮಾಜದ ಭಾಗವಾಗುವಂತೆ ಮಾಡಬೇಕಿದೆ. ಅದನ್ನೇ ನಮ್ಮ ಸಂವಿಧಾನ ಹೇಳುತ್ತದೆ. ಒಂದು ಕಡೆ ದಲಿತರನ್ನು ಸಿಎಂ, ಡಿಸಿಎಂ ಮಾಡುತ್ತೇವೆ ಎನ್ನುವವರು ಇನ್ನೊಂದು ಕಡೆ ಅವರೇನು ಅಸ್ಪೃಶ್ಯರಲ್ಲ ಎನ್ನುವುದು ವಿರೋಧಭಾಸ ಮಾತ್ರವಲ್ಲ ಅವರ ನೈಜ ಕಾಳಜಿಯನ್ನು ಪ್ರಶ್ನಿಸುವಂತೆ ಮಾಡುತ್ತದೆ. ಈ ಹೇಳಿಕೆಯನ್ನು ಕುಮಾರಸ್ವಾಮಿ ಪರಿಶೀಲಿಸಿ ವಾಪಸ್ ಪಡೆದು ಕ್ಷಮೆ ಕೇಳಬೇಕು ಮತ್ತು ಉಳಿದವರಿಗೆ ಇದು ಪಾಠವಾಗಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....