Homeಮುಖಪುಟಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

- Advertisement -
- Advertisement -

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ.

ರೈಲ್ವೆ ವ್ಯವಸ್ಥೆ ಮತ್ತು ಪ್ರಯಾಣಿಕರಿಗೆ ಸಂಬಂಧಿಸಿದ ಸುರಕ್ಷತಾ ಸಮಸ್ಯೆಗಳ ಕುರಿತು ಭಾರತೀಯ ರೈಲ್ವೆ ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ ನಂತರ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ವಿಷಯದ ವಿವರಣೆಯನ್ನು ಕೇಳಿತು.

ರೈಲ್ವೆ ಅಪಘಾತ ಪರಿಹಾರ ಪ್ರಕರಣದಲ್ಲಿ ಕಳವಳಗಳು ವ್ಯಕ್ತವಾಗಿದ ನಂತರ ರೈಲ್ವೆ ವ್ಯವಸ್ಥೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ನಿಭಾಯಿಸುತ್ತಿರುವ ಪೀಠವು, ಆಫ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸದಿರುವ ವಿಷಯದ ಕಾರಣ ಮತ್ತು ಟಿಕೆಟ್‌ಗಳನ್ನು ಖರೀದಿಸುವ ಎರಡು ವಿಧಾನಗಳ ನಡುವೆ ಈ ವ್ಯತ್ಯಾಸ ಏಕೆ ಎಂದು ವಿವರಿಸಲು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ವಿಕ್ರಮ್‌ಜಿತ್ ಬ್ಯಾನರ್ಜಿ ಅವರನ್ನು ಕೇಳಿತು.

“ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಅಪಘಾತಗಳನ್ನು ಭರಿಸಲು ವಿಮಾ ರಕ್ಷಣೆಯನ್ನು ಒದಗಿಸಲಾಗುತ್ತದೆ ಎಂದು ಅಮಿಕಸ್ ಗಮನಸೆಳೆದಿದ್ದಾರೆ. ಆದರೆ, ಆಫ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವವರಿಗೆ ಇದು ಲಭ್ಯವಿಲ್ಲ. ಟಿಕೆಟ್‌ಗಳನ್ನು ಖರೀದಿಸುವ ಎರಡು ವಿಧಾನಗಳ ನಡುವಿನ ಈ ವ್ಯತ್ಯಾಸಕ್ಕೆ ಕಾರಣದ ಬಗ್ಗೆ ಬ್ಯಾನರ್ಜಿ ಅವರು (ಎಜಿಎಸ್‌) ಸೂಚನೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ ಪೀಠವು ತಿಳಿಸಿದೆ.

ರೈಲ್ವೆ ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ ನಂತರ, ಹಳಿಗಳು ಮತ್ತು ರೈಲ್ವೆ ಕ್ರಾಸಿಂಗ್‌ಗಳ ಸುರಕ್ಷತೆಯ ಮೇಲೆ ಗಮನಹರಿಸಲು ಉನ್ನತ ನ್ಯಾಯಾಲಯವು ಭಾರತೀಯ ರೈಲ್ವೆಗೆ ನಿರ್ದೇಶನ ನೀಡಿತು.

“ವರದಿಯನ್ನು ಪರಿಶೀಲಿಸಿದ ನಂತರ, ಆರಂಭಿಕ ಹಂತದಲ್ಲಿ, ಹಳಿ ಮತ್ತು ರೈಲ್ವೆ ಕ್ರಾಸಿಂಗ್‌ಗಳ ಸುರಕ್ಷತೆಯ ಮೇಲೆ ಗಮನ ಹರಿಸಬೇಕು, ಇದರಿಂದ ಇತರ ಅಂಶಗಳು ಹೊರಹೊಮ್ಮುತ್ತವೆ” ಎಂದು ಪೀಠವು ಆದೇಶದಲ್ಲಿ ತಿಳಿಸಿದೆ.

ವರದಿಯಲ್ಲಿ ಹೈಲೈಟ್ ಮಾಡಲಾದ ಸಮಸ್ಯೆಗಳನ್ನು ರೈಲ್ವೆಯ ಆದ್ಯತೆಗಳಾಗಿ ತೆಗೆದುಕೊಳ್ಳಲಾಗುವುದಿಲ್ಲ, ವ್ಯವಸ್ಥೆ ಮತ್ತು ಪ್ರಯಾಣಿಕರಿಗೆ ಸಂಬಂಧಿಸಿದ ಸುರಕ್ಷತಾ ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈಲ್ವೆ ಪ್ರಜ್ಞಾಪೂರ್ವಕ ನಿರ್ಧಾರವನ್ನು ತೆಗೆದುಕೊಂಡ ಅಂಶಗಳನ್ನು ಎತ್ತಿ ತೋರಿಸುವ ಉದ್ದೇಶಕ್ಕಾಗಿ ಮಾತ್ರ ಎಂದು ಎಜಿಎಸ್‌ ಹೇಳಿದ್ದಾರೆ.

ರೈಲ್ವೆ ವ್ಯವಸ್ಥೆ ಮತ್ತು ಪ್ರಯಾಣಿಕರಿಗೆ ಸಂಬಂಧಿಸಿದ ಸುರಕ್ಷತೆಯ ಕುರಿತಾದ ಉಳಿದ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ವ್ಯವಸ್ಥೆಯ ಸಂಪೂರ್ಣ ಸುಧಾರಣೆಗಾಗಿ ತನ್ನ ಒಟ್ಟಾರೆ ಯೋಜನೆಯನ್ನು ಮುಂದುವರಿಸಲು ಉನ್ನತ ನ್ಯಾಯಾಲಯವು ರೈಲ್ವೆಗೆ ಸೂಚಿಸಿದೆ.

“ಪ್ರಸ್ತುತ, ಮೇಲೆ ಸೂಚಿಸಿದಂತೆ, ಎರಡು ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈಲ್ವೆಗಳು ಪ್ರತಿಕ್ರಿಯಿಸಬೇಕು, ಮತ್ತಷ್ಟು ಅಫಿಡವಿಟ್/ವರದಿಯನ್ನು ಸಲ್ಲಿಸಬೇಕು ಮತ್ತು ವಿಮಾ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಬೇಕು” ಎಂದು ವಿಭಾಗೀಯ ಪೀಠವು ಹೇಳಿದೆ.

ಸೆಪ್ಟೆಂಬರ್ 2 ರಂದು ನ್ಯಾಯಾಲಯವು ಅಮಿಕಸ್ ಕ್ಯೂರಿ ಹಿರಿಯ ವಕೀಲ ಶಿಖಿಲ್ ಸೂರಿ ನೀಡಿದ ವರದಿಗಳು ಮತ್ತು ಸಲಹೆಗಳನ್ನು ಗಣನೆಗೆ ತೆಗೆದುಕೊಂಡು, ರೈಲ್ವೆಯನ್ನು ಪ್ರತಿನಿಧಿಸುವ ವಕೀಲರನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಳವಾಗಿ ಚರ್ಚಿಸಲು, ಆರಂಭಿಕ ಹಂತದಲ್ಲಿ ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ಕೆಲವು ಪ್ರಮುಖ ಕ್ಷೇತ್ರಗಳಿಗೆ ಆದ್ಯತೆ ನೀಡುವಂತೆ ಕೇಳಿಕೊಂಡಿತ್ತು. ಈ ವಿಷಯದ ಕುರಿತು ಜನವರಿ 13, 2026 ರಂದು ಮತ್ತಷ್ಟು ವಿಚಾರಣೆ ನಡೆಸಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...