Homeಕರ್ನಾಟಕಪ್ರಜ್ವಲ್ ಪ್ರಕರಣದಲ್ಲಿ ಬಿಜೆಪಿ ಏಕೆ ಮೌನ ವಹಿಸಿದೆ? ಪ್ರಿಯಾಂಕ್ ಖರ್ಗೆ

ಪ್ರಜ್ವಲ್ ಪ್ರಕರಣದಲ್ಲಿ ಬಿಜೆಪಿ ಏಕೆ ಮೌನ ವಹಿಸಿದೆ? ಪ್ರಿಯಾಂಕ್ ಖರ್ಗೆ

- Advertisement -
- Advertisement -

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿಗರು ಏಕೆ ಮೌನ ವಹಿಸಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗಲು ವ್ಯವಸ್ಥೆ ಮಾಡಿಕೊಟ್ಟವರು ಯಾರು? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಅವರು, “ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಕುರಿತು ಗೊತ್ತಿದ್ದರೂ, ಬಿಜೆಪಿ ಮುಖಂಡರು ಪತ್ರ ಬರೆದಿದ್ದರೂ, ಅವರಿಗೆ ಟಿಕೆಟ್ ಕೊಟ್ಟಿರುವುದು ಏಕೆ? ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಮುಂದಿಟ್ಟು ಬೀದಿ ಬೀದಿಗಳಲ್ಲಿ ಪ್ರತಿಭಟಿಸಿದ ಬಿಜೆಪಿಗರು ಪ್ರಜ್ವಲ್ ಪ್ರಕರಣದಲ್ಲಿ ಏಕೆ ಮೌನವಾಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

“ಸತ್ಯ ಗೊತ್ತಿದ್ದರೂ ಬಿಜೆಪಿಗರು ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಟ್ರು. ಅವರ ಪರ ಪ್ರಚಾರ ಮಾಡಿದರು. ಈಗ ಅವರು ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂದು ಹೇಳಲಾಗ್ತಿದೆ. ಇದು ನಿಜವಾಗಿದ್ದರೆ, ಅವರು ಹೇಗೆ ದೇಶ ಬಿಟ್ಟು ತೆರಳಿದ್ರು? ಅವರಿಗೆ ವ್ಯವಸ್ಥೆ ಮಾಡಿಕೊಟ್ಟವರು ಯಾರು. ಈ ವಿಚಾರದಲ್ಲಿ ನಾನು ನೇರವಾಗಿ ಬಿಜೆಪಿಯನ್ನು ದೂಷಿಸುತ್ತೇನೆ” ಎಂದಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹಲವಾರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು, ವಿಡಿಯೋ ರೆಕಾರ್ಡ್ ಮಾಡಿರುವ ವಿಚಾರ ಬಯಲಾಗಿದೆ. ರಾಜ್ಯಾದ್ಯಂತ ಪ್ರಜ್ವಲ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಸರ್ಕಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದೆ.

ಇದನ್ನೂ ಓದಿ : ’19 ಜನ ಶಾಸಕರ ಭವಿಷ್ಯ ಬೇಕೋ; ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ..’; ಜೆಡಿಎಸ್‌ ವರಿಷ್ಠರಿಗೆ ಸಮೃದ್ಧಿ ಮಂಜುನಾಥ್ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...