Homeಮುಖಪುಟನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ?: ಬಿ.ಕೆ ಹರಿಪ್ರಸಾದ್ ಪ್ರಶ್ನೆ

ನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ?: ಬಿ.ಕೆ ಹರಿಪ್ರಸಾದ್ ಪ್ರಶ್ನೆ

RSS ಏಕೆ ಲೆಕ್ಕಾಚಾರ ನೀಡುವುದಿಲ್ಲ? ಏಕೆ ನೋಂದಣಿ ಮಾಡಿಸುವುದಿಲ್ಲ, ಏಕೆ ಸಂವಿಧಾನಬದ್ಧವಾಗಿ ಆಂತರಿಕ ಚುನಾವಣೆ ನಡೆಸುವುದಿಲ್ಲ?

- Advertisement -
- Advertisement -

ತುಮಕೂರಿನಲ್ಲಿ RSS ಕಟ್ಟಡ ಕಟ್ಟುತ್ತಿರುವ ವಿಷಯವನ್ನು ಸಂಸದ ಪ್ರತಾಪ್ ಸಿಂಹರವರು ಹಂಚಿಕೊಂಡ ಬೆನ್ನಲ್ಲೆ, ನೋಂದಣಿಯಾಗದ, ಆಸ್ತಿಯಿಲ್ಲದ RSS ಗೆ ಕಟ್ಟಡ ಕಟ್ಟುತ್ತಿರುವುದೇಕೆ ಮತ್ತು ಹೇಗೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಮೈಸೂರು -ಕೊಡಗು ಸಂಸದರಾದ ಪ್ರತಾಪ್ ಸಿಂಹರವರು ನಿನ್ನೆ ಬೆಳಿಗ್ಗೆ ‘ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಆರ್ ಎಸ್ ಎಸ್ ಕಟ್ಟಡದ ಸ್ಥಳಕ್ಕೆ ಭೇಟಿ ನೀಡಲಾಯಿತು’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

RSS

“ವಿಧಾನ ಪರಿಷತ್ತಿನಲ್ಲಿ Question Hour ಸಮಯದಲ್ಲಿ RSS ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದ್ದೆ. ಆಗ RSS ಸಂಘ ನೊಂದಣೆಯಾಗಿಲ್ಲ ಹಾಗು ಯಾವುದೆ ಆಸ್ತಿ ಹೊಂದಿಲ್ಲ ಅನ್ನುವ ಮಾಹಿತಿಯನ್ನು ಸರ್ಕಾರ ನೀಡಿದೆ.
ಇನ್ನೊಂದು ಕಡೆ ಆರ್‌ಎಸ್‌ಎಸ್‌ ಹೊಸ ಕಟ್ಟಡದ ಬಗ್ಗೆ ಸಂಸದ ಪ್ರತಾಪ್ ಸಿಂಹರವರು ಮಾಹಿತಿ ಹಂಚಿಕೊಂಡಿದ್ದಾರೆ ಅಂದರೆ ಏನರ್ಥ” ಎಂದು ಹರಿಪ್ರಸಾದ್ ಕಿಡಿಕಾರಿದ್ದಾರೆ.

ಭಾರತದಲ್ಲಿನ NGO ಗಳ ಮೇಲೆ ಇಲ್ಲ ಸಲ್ಲದ ಕಾನೂನು ಏರಿ, ಅವುಗಳ ಲೆಕ್ಕಾಚಾರ ಕೇಳಿ ಅವುಗಳ ಮೇಲೆ income Tax ಮತ್ತು CBI / ED raid ಮಾಡುವ ಆಡಳಿತ ಸರ್ಕಾರ, ಆರ್‌ಎಸ್‌ಎಸ್‌ ಸಂಘಟನೆಯ ಲೆಕ್ಕಾಚಾರದ ಬಗ್ಗೆ ಯಾಕೆ ಪ್ರಶ್ನಿಸುವುದಿಲ್ಲ. ಯಾಕೆ ಈ ದ್ವಂದ್ವ ನಿಲುವು? ಈ ದೇಶದಲ್ಲಿನ ಕಾನೂನು ಸಾಮಾನ್ಯರಿಗೆ ಒಂದು ಮತ್ತು RSS ಸಂಘಟನೆಗೆ ಬೇರೆ ಇದೆಯೆ ಎಂದು ಪ್ರಶ್ನಿಸಿದ್ದಾರೆ.

RSS

ಸತ್ಯ, ಧರ್ಮ, ದೇಶಪ್ರೇಮದ ಬಗ್ಗೆ ಉಪದೇಶ ಕೊಟ್ಟು ಅಧಿಕಾರ ಹಿಡಿಯುವ ರೀತಿಯಲ್ಲಿ, ಆರ್‌ಎಸ್‌ಎಸ್‌ ಏಕೆ ಲೆಕ್ಕಾಚಾರ ನೀಡುವುದಿಲ್ಲ? ಏಕೆ ನೋಂದಣಿ ಮಾಡಿಸುವುದಿಲ್ಲ, ಏಕೆ ಸಂವಿಧಾನಬದ್ಧವಾಗಿ ಆಂತರಿಕ ಚುನಾವಣೆ ನಡೆಸುವುದಿಲ್ಲ? ಆದಾಯ ಖರ್ಚು ವೆಚ್ಚಗಳ ಬಗ್ಗೆ ಸರ್ಕಾರಕ್ಕೆ ಉತ್ತರದಾಯಿತ್ವ ಸಲ್ಲಿಸದ ಸಂಘಟನೆಗಳು ಸರ್ಕಾರಕ್ಕೆ ಅರ್ಥಾತ್ ಸಮಾಜಕ್ಕೆ ವಂಚಿಸಿದಂತೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಹರಿಪ್ರಸಾದ್‌ರವರು ಚುಕ್ಕೆ ಗುರುತಿಲ್ಲದ ಪ್ರಶ್ನೆ ಅಡಿಯಲ್ಲಿ ಸಹಕಾರ ಸಚಿವ ಎಸ್‌.ಟಿ ಸೋಮಶೇಖರ್‌ರವರಿಗೆ ಆರ್‌ಎಸ್‌ಎಸ್‌ ಕುರಿತು ಹಲವು ಪ್ರಶ್ನೆಗಳನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಅವರು, “ರಾಷ್ಟ್ರೀಯ ಸ್ವಯಂಸೇವಕ ಸಂಘ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ನೋಂದಣಿಯಾಗಿಲ್ಲ” ಎಂದು ಉತ್ತರಿಸಿದ್ದರು. ಇನ್ನು ಸ್ವಂತ ಆಸ್ತಿ ಅಥವಾ ಬಾಡಿಗೆ ಕಟ್ಟಡ ಇದೆಯೆ ಎಂಬ ಹಲವು ಪ್ರಶ್ನೆಗಳಿಗೆ ಅನ್ವಹಿಸುವುದಿಲ್ಲ ಎಂದು ಉತ್ತರಿಸಿದ್ದರು.

ಕೇಂದ್ರ ಸರ್ಕಾರವು ಹಲವು ಎನ್‌ಜಿಓಗಳ ಮೇಲೆ ದಾಳಿ ನಡೆಸುತ್ತಿದೆ. ಸರ್ಕಾರದ ಎನ್‌ಐಎ ಕಳೆದ ಒಂದು ವಾರದಲ್ಲಿಯೇ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಎನ್‌ಜಿಓ ಕಚೇರಿಗಳ ಮೇಲೆ ದಾಳಿ ನಡೆಸಿ ಲೆಕ್ಕಪತ್ರ ಶೋಧಿಸುತ್ತಿದೆ. ಸರ್ಕಾರಗಳ ಈ ದಾಳಿಯಿಂದ ಖ್ಯಾತ ಮಾನವ ಹಕ್ಕು ಸಂಸ್ಥೇಯಾದ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಈ ಸಂದರ್ಭದಲ್ಲಿ ಹರಿಪ್ರಸಾದ್‌ರವರ ಪ್ರಶ್ನೆಗಳು ಬಂದಿವೆ.


ಇದನ್ನೂ ಓದಿ: ಮತ್ತೊಬ್ಬ RSS ಕಾರ್ಯಕರ್ತನ ಕೊಲೆ ಪ್ರಕರಣ: ಕೇರಳದ 9 RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...