Homeಮುಖಪುಟ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ಈ ಹಿಂದೆ ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಸುವೆಂಧು ಅಧಿಕಾರಿ ಪ್ರಸ್ತುತ ಬಿಜೆಪಿಯ ನಾಯಕರಾಗಿದ್ದಾರೆ.

- Advertisement -
- Advertisement -

ಹಿರಿಯ ಪತ್ರಕರ್ತ ಮತ್ತು 2016 ರ ನಾರದ ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು ತೃಣಮೂಲದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ರಂತಹ ಕೆಲವು ರಾಜಕಾರಣಿಗಳನ್ನು ಕುಟುಕು ಕಾರ್ಯಾಚರಣೆಯ ಆಧಾರದಲ್ಲಿ ಸಿಬಿಐ ಬಂಧಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಬಿಜೆಪಿ ನಾಯಕ ಸುವೆಂದು ಅಧಿಕಾರಿಯಂತಹ ಇತರರ ವ್ಯಕ್ತಿಗಳ ವಿರುದ್ಧ ಅದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಹೊರತಾಗಿಯೂ ಸಿಬಿಐ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದು ಸಂತೋಷದ ದಿನ. ಇದೀಗ ತುಂಬಾ ವರ್ಷಗಳಾಗಿವೆ. ಕುಟುಕು ಕಾರ್ಯಾಚರಣೆಯನ್ನು 2016 ರಲ್ಲಿ ಬಿಡುಗಡೆ ಮಾಡಲಾಯಿತು. ರಾಜಕಾರಣಿಗಳನ್ನು ಸಿಬಿಐ ಮುಟ್ಟಲಾಗಲಿಲ್ಲ. ಅದರಲ್ಲೂ ಚಾರ್ಜ್‌ಶೀಟ್‌ ಮೂರು ವರ್ಷಗಳ ಹಿಂದೆಯೆ ಸಿದ್ಧವಾಗಿತ್ತು” ಎಂದು ತನಿಖಾ ಪತ್ರಕರ್ತ ಸ್ಯಾಮ್ಯುಯೆಲ್ ಮತ್ತು ನಾರದ ನ್ಯೂಸ್ ಸಂಸ್ಥಾಪಕ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.

ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ, ಮತ್ತು ಸೋವನ್ ಚಟರ್ಜಿಯನ್ನು ಸಿಬಿಐ ಇಂದು ಬಂಧಿಸಿದೆ. ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್‌ ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ ರಚನೆಯಾದ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಮದನ್‌ ಮಿತ್ರಾ ಆಡಳಿತ ಪಕ್ಷವಾದ ಟಿಎಂಸಿಯ ಶಾಸಕರಾಗಿದ್ದಾರೆ. ಸೋವನ್‌ ಚಟರ್ಜಿ ತೃಣಮೂಲ ಪಕ್ಷದ ಮಾಜಿ ಶಾಸಕರಾಗಿದ್ದು, ನಂತರ ಬಿಜೆಪಿ ಸೇರಿಕೊಂಡಿದ್ದಾರೆ. ಪ್ರಸ್ತುತ ಅವರು ಎರಡು ಪಕ್ಷದ ಸಂಪರ್ಕ ಕಡಿದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

“ನಾರದಾ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯ ಮಾಜಿ ಆಪ್ತ ಸಹಾಯಕರಾದ, ಪ್ರಸ್ತುತ ಬಿಜೆಪಿಯಲ್ಲಿರುವ ಮುಕುಲ್ ರಾಯ್ ಮತ್ತು ಸುವೆಂಧು ಅಧಿಕಾರಿ ಅವರ ಹೆಸರು ಕೂಡಾ ಇತ್ತು. ಆದರೆ ಇಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮಗಳು ನಡೆದಿಲ್ಲ” ಎಂದು ಸ್ಯಾಮ್ಯುಯೆಲ್ ತಮ್ಮ ಸಂದೇಶದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನೇ ಸುವೆಂಧು ಅಧಿಕಾರಿ ಅವರ ಕಚೇರಿಗೆ ತೆರಳಿ ಅವರಿಗೆ ಹಣ ನೀಡಿದ್ದೆ. ಅವರ ಹೆಸರು ಪಟ್ಟಿಯಲ್ಲಿಲ್ಲ. ಏನಾಯಿತು? ವಿಧಿವಿಜ್ಞಾನ ವರದಿಯಲ್ಲೂ ಅದು ಸಾಬೀತಾಗಿದೆ… ಸಿಬಿಐ ನನ್ನಿಂದಲೂ ಹೇಳಿಕೆ ತೆಗೆದುಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಸುವೆಂಧು ಅಧಿಕಾರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಅಧಿಕಾರಿಗಳಿಂದ ಅನುಮತಿಗಾಗಿ ಕಾಯುತ್ತಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅವರು ಕೆಳಮನೆಯ ಸದಸ್ಯರಾಗಿದ್ದರಿಂದ ಸಿಬಿಐ 2019 ರ ಏಪ್ರಿಲ್ 6 ರಂದು ಲೋಕಸಭಾ ಸ್ಪೀಕರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿತ್ತು.

ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗುಗಳ ಬಗ್ಗೆ ಮೂರು ಪುಸ್ತಕಗಳು ನುಡಿಯುವ ಎಚ್ಚರಿಕೆ ಮತ್ತು ಸತ್ಯ!

“ಅನುಮೋದನೆ ದೊರೆತ ನಂತರ, ಕಾನೂನು ತನ್ನ ಕರ್ತವ್ಯ ನಿರ್ವಹಿಸುತ್ತದೆ” ಎಂದು ಸಿಬಿಐ ಮೂಲಗಳು ತಿಳಿಸಿವೆ, ಈ ವಿಷಯದ ಬಗ್ಗೆ ಸಿಬಿಐ ಜ್ಞಾಪನೆಯನ್ನು ಸಹ ಕಳುಹಿಸಿದೆ ಎಂದು ತಿಳಿದು ಬಂದಿದೆ.

ನಾರದಾ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್‌ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ಕೋಲ್ಕತಾ ಕಚೇರಿಯಲ್ಲಿ ವಶಕ್ಕೆ ಸೋಮವಾರ ತೆಗೆದುಕೊಂಡಿದೆ.

‘ನಾರದಾ’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆ 5 ದಿನ ಸಂಪೂರ್ಣ ಲಾಕ್‌ಡೌನ್: ರಾಜ್ಯ ಲಾಕ್‌ಡೌನ್‌ಗೆ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...