Homeಕರ್ನಾಟಕಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

- Advertisement -
- Advertisement -

ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ, ರಾಜ್ಯ ಹೈಕೋರ್ಟ್ ಇಂತಹ ಆದೇಶ ನೀಡಿದ ಬೆನ್ನಿಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ, 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ ಆದೇಶ ಭಾರೀ ಚರ್ಚೆಗೆ ಒಳಗಾಗಿದೆ. ಈ ವಾದದ ಅರ್ಧ ಸತ್ಯ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಅಲ್ಲದೆ, ಕೇರಳ ಹೈಕೋರ್ಟ್ ಆದೇಶ ಕರ್ನಾಟಕದ ಪ್ರಸ್ತುತ ಹಿಜಾಬ್ ವಿವಾದದಲ್ಲೂ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.

ಹಿಜಾಬ್ ಬಗ್ಗೆ ಕೇರಳ ಹೈಕೋರ್ಟ್ ಏನು ಹೇಳಿತ್ತು?

ಕೇರಳದ ಕ್ರೈಸ್ತ ಮಿಷನರಿಗಳು ನಡೆಸುತ್ತಿದ್ದ ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ, ಇದು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದದ್ದು ಎಂಬ ಕಾರಣ ಆ ಕ್ರೈಸ್ತ ಮಿಷನರಿಗಳ ಕಾಲೇಜಿನಲ್ಲಿ ಹಿಜಾಬ್‍ಗೆ ನಿಷೇಧ ವಿಧಿಸಲಾಗಿತ್ತು.

ಆದರೆ, ಇದರ ವಿರುದ್ಧ ವಿದ್ಯಾರ್ಥಿನಿ ಫಾತಿಮಾ ತಸ್ನೀಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ಸಂವಿಧಾನ ಪರಿಚ್ಛೇಧ 25ನೇ ವಿಧಿಯಂತೆ ತನ್ನ ಧಾರ್ಮಿಕ ಸ್ವಾತಂತ್ಯ್ರವನ್ನು ಉಳಿಸಿಕೊಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ನ್ಯಾಯಾಲಯ ನೀಡಿದ್ದ ತೀರ್ಪು ಇಂದಿಗೂ ಮಹತ್ವ ಪಡೆದುಕೊಂಡಿದೆ.

ಹೈಕೋರ್ಟ್ ತೀರ್ಪಿನಲ್ಲಿ ಏನಿದೆ?

ಸ್ಕಾರ್ಫ್ ಹಾಗೂ ಪೂರ್ಣ ತೋಳಿನ ಅಂಗಿ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳ ಹೈಕೋರ್ಟ್, “ಅಲ್ಪ ಸಂಖ್ಯಾತ ಕ್ರೈಸ್ತ ಮಿಷನರಿಗಳು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕುಗಳನ್ನೂ ಸಹ ಕಾಯುವ ಜವಾಬ್ದಾರಿ ಈ ನ್ಯಾಯಾಲಯಕ್ಕೆ ಇದೆ. ಹೀಗಾಗಿ ಅಲ್ಪಸಂಖ್ಯಾತರು ನಡೆಸುವ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಡುಪು ಸಂಹಿತೆಯನ್ನು ನಿರ್ಧರಿಸುವ ಅಧಿಕಾರ ಸಂಪೂರ್ಣವಾಗಿ ಆಯಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿರುತ್ತದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸುವಂತೆ ಶಿಕ್ಷಣ ಸಂಸ್ಥೆಗೆ ಸೂಚನೆ ನೀಡಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಜೊತೆಗೆ ಮತ್ತೊಂದು ವಾಕ್ಯವನ್ನು ಸೇರಿಸಿದ್ದ ಕೇರಳ ಹೈಕೋರ್ಟ್, “ಈ ತೀರ್ಪು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಹೊರತು ಯಾವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗುವುದಿಲ್ಲ. ಏಕೆಂದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಸ್ವತ್ತು” ಎಂದು ಅಭಿಪ್ರಾಯಪಟ್ಟಿತ್ತು.

ಗುರುವಾರ ಕರ್ನಾಟಕ ಹೈಕೋರ್ಟ್‍ನಲ್ಲಿ ಏನಾಯ್ತು?

ಕಳೆದ ಒಂದು ವಾರದಿಂದ ಹಿಜಾಬ್ ವಿರುದ್ಧ ಕೇರಳ ಹೈಕೋರ್ಟ್ ನೀಡಿದ ಆದೇಶದ ಮೊದಲ ಸಾಲುಗಳು ಮಾತ್ರ ಕರ್ನಾಟಕದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಆದರೆ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಕುರಿತ ಕೇರಳ ಹೈಕೋರ್ಟ್ ಅಭಿಪ್ರಾಯ ಈವರೆಗೆ ಚರ್ಚೆಯ ಕೇಂದ್ರಕ್ಕೆ ಬರಲೇ ಇಲ್ಲ.

ಈ ಬಗ್ಗೆ ಗುರುವಾರ ಕರ್ನಾಟಕ ಹೈಕೋರ್ಟ್ ಗಮನ ಸೆಳೆದ ಅರ್ಜಿದಾರ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ವಕೀಲ ಸಂಜಯ್ ಹೆಗ್ಡೆ ಕೇರಳ ಹೈಕೋರ್ಟ್‍ನ ಆದೇಶವನ್ನು ವಿವರಿಸಿದ್ದಾರೆ. ಅಲ್ಲದೆ, “ಇದು ಕ್ರಿಶ್ಚಿಯನ್ ಖಾಸಗಿ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವ್ಯಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಿಜಾಬ್ ನಿಷೇಧಿಸಿ ತೀರ್ಪು ನೀಡಲಾಗಿದೆ. ಆದರೆ, ಕರ್ನಾಟಕದ ಪ್ರಕರಣವು ಸರ್ಕಾರಿ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಸರ್ಕಾರಿ ಶಾಲಾ-ಕಾಲೇಜುಗಳು ಕರ್ನಾಟಕದ ಪ್ರತಿಯೊಬ್ಬ ನಿವಾಸಿ ಮತ್ತು ಭಾರತದ ನಾಗರಿಕರಿಗೆ ಸೇರಿದ್ದಾಗಿದೆ. ಹೀಗಾಗಿ, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬುದು ಸಂವಿಧಾನದಲ್ಲಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ವಾದಿಸಿದ್ದರು.

“ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್, ಶಿಕ್ಷಣವನ್ನು ನೀಡುವ ಸಂಸ್ಥೆಯ ದೊಡ್ಡ ಹಕ್ಕಿನ ವಿರುದ್ಧ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಹಕ್ಕನ್ನು ಹೇರಲು ಸಾಧ್ಯವಿಲ್ಲ. ಸ್ಕಾರ್ಪ್ ಮತ್ತು ಪೂರ್ಣ ತೋಳಿನ ಅಂಗಿಯನ್ನು ಧರಿಸಿ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗೆ ಅನುಮತಿ ನೀಡಬಹುದೇ ಎಂಬುದನ್ನು ಆ ಸಂಸ್ಥೆಯು ನಿರ್ಧರಿಸುತ್ತದೆ” ಎಂದು ಹೇಳಿದ್ದರು.

ಅರ್ಜಿದಾರರು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದರೆ, ಶಾಲಾ ಪ್ರಾಧಿಕಾರವು ಯಾವುದೇ ಹೇಳಿಕೆಗಳನ್ನು ನೀಡದೆ ವರ್ಗಾವಣೆ ಪ್ರಮಾಣ ಪತ್ರವನ್ನು ನೀಡಬೇಕು ಎಂದೂ ನ್ಯಾಯಾಲಯ ಹೇಳಿತ್ತು.

2018ರ ಕೇರಳ ಹೈಕೋರ್ಟ್‍ನ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಾಸಿಕ್ಯೂಷನ್ ಡೈರೆಕ್ಟರ್ ಜನರಲ್ ಟಿ ಅಸಫ್ ಅಲಿ ಅವರು, “ಪ್ರತಿ ತೀರ್ಪು ಪ್ರಕರಣದ ಸತ್ಯಗಳನ್ನು ಅವಲಂಬಿಸಿರುತ್ತದೆ. ತೀರ್ಪುಗಳು ಪ್ರಕರಣದಿಂದ ಪ್ರಕರಣಕ್ಕೆ ಬದಲಾಗಬಹುದು. ಒಂದು ತೀರ್ಪನ್ನು ಎಲ್ಲಾ ಪ್ರಕರಣಗಳಿಗೂ ಅಂತಿಮವೆಂದು ಪರಿಗಣಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...