Homeಕರೋನಾ ತಲ್ಲಣವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ವಿಶ್ವದಾದ್ಯಂತ ಹೆಚ್ಚಿನ ದೇಶಗಳಲ್ಲೂ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಅದರಂತೆ ತಮ್ಮ ದೇಶಗಳ ಪ್ರಜೆಗಳಿಗೆ ಲಸಿಕೆಯ ಬಗ್ಗೆ ನಂಬಿಕೆ ಬರಲು ಅಲ್ಲಿನ ನಾಯಕರು ಮೊದಲಿಗೆ ಲಸಿಕೆಯನ್ನು ಪಡೆಯುತ್ತಿದ್ದಾರೆ.

- Advertisement -
- Advertisement -

ಕಳೆದ ವರ್ಷ ಪ್ರಾರಂಭವಾದ ಕೊರೊನಾ ಸಾಂಕ್ರಮಿಕಕ್ಕೆ ಕೊನೆಗೂ ಲಸಿಕೆ ತಯಾರಾಗಿದೆ. ಭಾರತದಲ್ಲಿ ಈಗಾಗಲೇ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡು ಲಸಿಕೆಗಳಿಗೆ ಅನುಮತಿ ಸಿಕ್ಕಿವೆ. ಭಾರತ್ ಬಯೋಟೆಕ್ ಅಭಿವೃದ್ದಿಪಡಿಸಿರುವ ಕೊವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗಗಳ ಫಲಿತಾಂಶದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹಾಗಾಗಿ ಲಸಿಕೆ ಬಗ್ಗೆ ವಿಜ್ಞಾನಿಗಳು ಸೇರಿದಂತೆ ಕೆಲವರು ಅಪಸ್ವರ ಎತ್ತಿದ್ದಾರೆ. ಈ ನಡುವೆಯೇ ಭಾರತದಾದ್ಯಂತ ಇಂದು ಮೊದಲ ಸುತ್ತಿನ ವ್ಯಾಕ್ಸಿನೇಷನ್ ಆರಂಭವಾಗಿದ್ದು ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ನೀಡಲಾಗುತ್ತಿದೆ.

ಈ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಎರಡು ದೋಸ್‌ಗಳನ್ನೂ ಮರೆಯದೆ ಪಡೆಯಿರಿ ಎಂದು ಹೇಳಿದ್ದಾರೆ. ಅದರಂತೆಯೆ ಕರ್ನಾಟಕದಲ್ಲಿ ಕೂಡಾ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವ್ಯಾಕ್ಸಿನೇಷನ್‌ಗೆ ಚಾಲನೆ ನೀಡಿ “ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ರಾಜ್ಯಾದ್ಯಂತ ಲಸಿಕೆ ವಿತರಣೆ ಅಧಿಕೃತವಾಗಿ ಚಾಲನೆ ನೀಡಲಾಯಿತು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ವಿಶ್ವದಾದ್ಯಂತ ಹೆಚ್ಚಿನ ದೇಶಗಳಲ್ಲೂ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಅದರಂತೆ ತಮ್ಮ ದೇಶಗಳ ಪ್ರಜೆಗಳಿಗೆ ಲಸಿಕೆಯ ಬಗ್ಗೆ ನಂಬಿಕೆ ಬರಲು ಅಲ್ಲಿನ ನಾಯಕರು ಮೊದಲಿಗೆ ಲಸಿಕೆಯನ್ನು ಪಡೆಯುತ್ತಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಭಾರತದಲ್ಲಿ ಕೂಡಾ ನಮ್ಮ ನಾಯಕರು ಈ ಲಸಿಕೆಯನ್ನು ಮೊದಲು ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್‌, “ಮೊದಲು ಪ್ರಧಾನಿ ನರೇಂದ್ರ ಮೋದಿ ಲಸಿಕೆ ಪಡೆಯಲಿ, ಅದರ ನಂತರ ನಾವು ಪಡೆಯುತ್ತೇವೆ ಎಂದು ನೇರವಾಗಿ ಸವಾಲೆಸೆದಿದ್ದರು.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

 

ರಾಜೀವ್ ಎಂಬುವವರು ಟ್ವಿಟ್ಟರ್‌ನಲ್ಲಿ “56 ಇಂಚಿನ ಪ್ರಧಾನ ಸೇವಕ, ಭಾರತೀಯ ಇತಿಹಾಸದಲ್ಲೇ ಎಲ್ಲರಿಗಿಂತಲೂ ದೊಡ್ಡ ದೇಶಭಕ್ತ ಅಥವಾ ವಿಶ್ವಗುರು” ಎಂದು ಕೊಲಾಜ್ ಚಿತ್ರವೊಂದನ್ನು ಹಾಕಿ, ಆದರೂ ಲಸಿಕೆ ಪಡೆದಿಲ್ಲ ಎಂದು ಪ್ರಧಾನಿಯನ್ನು ಟ್ರೋಲ್ ಮಾಡಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ಅನುಷ್ಕಾ ಇನ್ಸಾನಿಯತ್‌ ಎಂಬುವವರು ಟ್ವಿಟ್ಟರ್‌ನಲ್ಲಿ, “ವ್ಯಾಕ್ಸಿನ್ ಪಡೆಯಲು 56 ಇಂಚು ಯಾಕೆ ತುಂಬಾ ಹೆದರುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮುಕ್ತ ಕರ್ನಾಟಕ ಫೇಸ್‌ಬುಕ್ ಪೇಜ್, “ಬೇರೆ ದೇಶಗಳ ನಾಯಕರು ಕೊರೊನಾ ಲಸಿಕೆ ಮೊದಲು ಹಾಕಿಕೊಂಡರೆ , ನಮ್ಮ ಪ್ರಧಾನಿ ಮೋದಿಯನ್ನು ನೋಡಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...