HomeಅಂಕಣಗಳುKarnataka SIR'ಎಸ್‌ಐಆರ್‌'ನಿಂದ ಹೆಸರು ಡಿಲೀಟ್‌ ಆದವರಿಗೆ 'ಹೊಸ ಮತದಾರರ ನೋಂದಣಿ' ಯಾಕೆ?

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಹಳೆ ಮತದಾರರಿಗೆ ನಮೂನೆ ಸಂಖ್ಯೆ 6 ಕೊಡಿ ಎನ್ನುತ್ತಿರುವುದರ ಹಿಂದಿನ ಉದ್ದೇಶವೇನು?

- Advertisement -
- Advertisement -

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ವಿ. ಅನ್ಬುಕುಮಾರ್ ಹೇಳಿದ್ದರು. ಈ ಸುದ್ದಿಗೋಷ್ಠಿಯಲ್ಲಿ ಮಾತ್ರವಲ್ಲ, ಹಲವು ಕಡೆಗಳಲ್ಲಿ ಅವರು “ಅಂತಿಮ ಮತದಾರರ ಪಟ್ಟಿಯಲ್ಲಿ ಯಾವುದೇ ಮತದಾರರ ಹೆಸರು ಕಾಣೆಯಾಗಿದ್ದರೆ, ಅವರು ಭಾರತ ಚುನಾವಣಾ ಆಯೋಗಕ್ಕೆ ನಮೂನೆ ಸಂಖ್ಯೆ 6 ಸಲ್ಲಿಸುವ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು” ಎಂದು ಹೇಳಿರುವುದನ್ನು ನಾವು ಕೇಳಿದ್ದೇವೆ.

ಎಸ್‌ಐಆರ್ ನಿಂದ ಮತದಾರರ ಹೆಸರು ಡಿಲೀಟ್ ಆದರೂ, ನಮೂನೆ ಸಂಖ್ಯೆ 6 ಅನ್ನು ಸಲ್ಲಿಸುವ ಮೂಲಕ ನಮ್ಮ ಹೆಸರನ್ನು ಮರು ಸೇರ್ಪಡೆ ಮಾಡಬಹುದಲ್ವಾ ಎಂದು ಸಮಾಧಾನಪಟ್ಟುಕೊಳ್ಳಬಹುದು. ಆದರೆ, ಫಾರ್ಮ್ ನಂ. 6 ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇರುವ ಪ್ರಕ್ರಿಯೆ. ಈಗಾಗಲೇ ಮತ ಪಟ್ಟಿಯಲ್ಲಿ ತಮ್ಮ ಹೆಸರು ಇದ್ದವರು, ವಿಳಾಸ ಬದಲಾವಣೆಗೆ ಫಾರ್ಮ್ ನಂ. 8 ಅನ್ನು ಸಲ್ಲಿಸಬೇಕಾಗಿದೆ. ಈ ಬಗ್ಗೆ ಗಂಭೀರ ಚರ್ಚೆಗಳೇ ನಡೆಯುತ್ತಿಲ್ಲ. ಹಳೆ ಮತದಾರರೂ ಹೊಸ ದಾಖಲಾತಿಗಳನ್ನು ಕೊಟ್ಟು ಪಟ್ಟಿಗೆ ಹೊಸ ಮತದಾರರರಾಗಿ ಹೆಸರು ಸಲ್ಲಿಸಬೇಕಾಗಿದೆ.

ಹೊಸ ಮತದಾರರ ನೋಂದಣಿಗೆ ಫಾರ್ಮ್ ನಂ. 6

ಹೊಸದಾಗಿ ಮತದಾನದ ಹಕ್ಕು ಪಡೆಯಲು ಬಯಸುವವರು ಅಥವಾ ಮೊದಲ ಬಾರಿಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಈ ಫಾರ್ಮ್ ಅನ್ನು ಬಳಸಲಾಗುತ್ತದೆ.

18 ವರ್ಷ ತುಂಬಿದ ಭಾರತೀಯ ನಾಗರಿಕರು, ಈ ಹಿಂದೆ ಯಾವುದೇ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವವರು. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡುವವವರು ಬಿಎಲ್‌ಒಗಳಿಂದ ಫಾರ್ಮ್ ನಂ.6 ಪಡೆದು ಅರ್ಜಿ ಸಲ್ಲಿಸಬೇಕು.

ವಯಸ್ಸಿನ ಪುರಾವೆಯಾಗಿ ಆಧಾರ್ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜನನ ಪ್ರಮಾಣ ಪತ್ರ ಸಲ್ಲಿಸಬೇಕು. ವಾಸಸ್ಥಳದ ಪುರಾವೆಯಾಗಿ ಪಡಿತರ ಚೀಟಿ, ಕರೆಂಟ್ ಬಿಲ್, ಬ್ಯಾಂಕ್ ಪಾಸ್‌ಬುಕ್ ನೀಡಬೇಕು.

ಫಾರ್ಮ್ ನಂ. 8ರ ಬಗ್ಗೆ ಮಾತನಾಡದ ಚುನಾವಣಾ ಆಯೋಗ!

ಇಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದವರು ತಿದ್ದುಪಡಿ ಮತ್ತು ವಿಳಾಸ ಬದಲಾವಣೆ ಮಾಡಬೇಕಾದರೆ,
ಈ ಫಾರ್ಮ್ ಅನ್ನು ಬಳಸಬೇಕಾಗುತ್ತದೆ. ಈಗಾಗಲೇ ಮತದಾರರ ಗುರುತಿನ ಚೀಟಿ ಹೊಂದಿರುವವರು ತಮ್ಮ ವರಗಳ ತಿದ್ದುಪಡಿ, ಹೆಸರು, ಜನ್ಮ ದಿನಾಂಕ, ತಂದೆ/ಗಂಡನ ಹೆಸರು, ಲಿಂಗ ಅಥವಾ ಫೋಟೋ ತಪ್ಪಾಗಿದ್ದರೆ ಸರಿಪಡಿಸಲು ಅರ್ಜಿ ಸಲ್ಲಿಸಬೇಕು.

ಅದೇ ಕ್ಷೇತ್ರದ ಒಳಗಡೆ ಅಥವಾ ಬೇರೆ ಮತಕ್ಷೇತ್ರಕ್ಕೆ ವಾಸಸ್ಥಳ ಬದಲಾಯಿಸಿದಾಗ ಹೊಸ ವಿಳಾಸ ನಮೂದಿಸಲು. ವೋಟರ್ ಐಡಿ ಕಳೆದುಹೋಗಿದ್ದರೆ, ಹಾಳಾಗಿದ್ದರೆ ಅಥವಾ ಹರಿದುಹೋಗಿದ್ದರೆ ಹೊಸ ಕಾರ್ಡ್‌ಗೆ ವಿನಂತಿಸಲು, ಮತದಾರರ ಪಟ್ಟಿಯಲ್ಲಿ ವಿಕಲಚೇತನ ವರ್ಗವನ್ನು ನಮೂದಿಸಲು ಫಾರ್ಮ್‌ ನಂ.8 ಅನ್ನು ಬಳಸಲಾಗುತ್ತದೆ.

ಕರ್ನಾಟಕದಲ್ಲಿ ಈಗ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ, ಮತದಾರರ ಹಕ್ಕುಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ಈಗಾಗಲೇ ಪಟ್ಟಿಯಲ್ಲಿದ್ದವರ ಹೆಸರಿನಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದಲ್ಲಿ ಅವರಿಗೆ ಫಾರ್ಮ್‌ 8 ನೀಡಬೇಕಿತ್ತು. ಆದರೆ, ಚುನಾವಣಾ ಆಯೋಗ ಆ ಬಗ್ಗೆ ಮಾತನಾಡುತ್ತಿಲ್ಲ.. ಹಳೆ ಮತದಾರರಿಗೆ ಫಾರ್ಮ್‌ ನಂ. 8 ಕೊಡುವ ಬದಲು, ಹೊಸದಾಗಿ ಅರ್ಜಿ ಸಲ್ಲಿಸಿ ಎಂದು ಹೇಳುತ್ತಿರುವ ಹಿಂದಿನ ಉದ್ದೇಶವಾದರೂ ಏನು ಎಂಬುದನ್ನು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...

Breaking News: ಎಸ್‌ಐಆರ್‌ನಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್: ಕರ್ನಾಟಕದ ಅಂಕಿಅಂಶಗಳು ಎತ್ತಿದ ಗಂಭೀರ ಪ್ರಶ್ನೆಗಳು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದಲ್ಲಿ ಮುಂದುವರಿಯುತ್ತಿರುವ ಬೆನ್ನಲ್ಲೇ, ಅದರ ಲಿಂಗಾನುಪಾತದ ಅಂಕಿಅಂಶಗಳು ಗಂಭೀರವಾದ ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿವೆ. ಲಭ್ಯವಿರುವ 34 ಜಿಲ್ಲೆ/ನಗರ ಆಡಳಿತ ಘಟಕಗಳ...

ಎಸ್ಐಆರ್‌ನಲ್ಲಿ ಬದುಕಿದ್ದರೂ ‘ಮೃತ’, ಮನೆಯಲ್ಲಿದ್ದರೂ ‘ಸ್ಥಳಾಂತರ’: ಚಿಕ್ಕಬಳ್ಳಾಪುರದ ಸಂತ್ರಸ್ತರನ್ನು ಭೇಟಿಯಾದ ಪ್ರಕಾಶ್ ರಾಜ್ 

ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯಲ್ಲಿ ಬದುಕಿರುವ ಮತದಾರರನ್ನೇ ಮೃತಪಟ್ಟವರು ಎಂದು ಗುರುತಿಸಿರುವ ಆರೋಪಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕೇಳಿಬಂದಿವೆ. ಎಸ್ಐಆರ್ ಪರಿಶೋಧನೆ-ಪ್ರತಿರೋಧ ಜಾಥಾದ ಭಾಗವಾಗಿ ಗುಡಿಬಂಡೆ ತಾಲೂಕು ಕಚೇರಿ ಆವರಣಕ್ಕೆ ಆಗಮಿಸಿದ್ದ...