Homeಮುಖಪುಟನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

ನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

- Advertisement -
- Advertisement -

ಪಾಂಡಿಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾರವರು ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರೂ ಅವರ ಮೇಲೆ ಕ್ರಮವೇಕಿಲ್ಲ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಸೇರಿದಂತೆ ನೂರಾರು ನೆಟ್ಟಿಗರು ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ.

ಫೆಬ್ರವರಿ 28 ರಂದು ಅಮಿತ್‌ ಶಾರವರು ಪಾಂಡಿಚೇರಿಯಲ್ಲಿ ಮಾತನಾಡುತ್ತಾ “ಕೇಂದ್ರ ಸರ್ಕಾರದಿಂದ ಪಾಂಡಿಚೇರಿಗಾಗಿ 15,000 ಕೋಟಿ ರೂಗಳನ್ನು ನೀಡಿದ್ದೇವೆ. ಆದರೆ ಮುಖ್ಯಮಂತ್ರಿ ನಾರಾಯಣಸಾಮಿ ಆ ಹಣದಲ್ಲಿ ಒಂದಷ್ಟು ಕಡಿತ ಮಾಡಿ ಗಾಂಧಿ ಕುಟುಂಬಕ್ಕೆ ನೀಡಿದ್ದಾರೆ” ಎಂದು ಆರೋಪಿಸಿದ್ದರು.

ಈ ಕುರಿತು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, “ಮಾದರಿ ನೀತಿ ಸಂಹಿತೆ ಇರುವ ವೇಳೆ ನಾವು ಇಷ್ಟು ಹಣ ನೀಡಿದ್ದೇವೆ, ದುರುಪಯೋಗವಾಗಿದೆ ಎಂದು ಮಾತನಾಡುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಇದು ಮಾಜಿ ಸಿಎಂ ವಿರುದ್ಧ ಕೇಂದ್ರ ಗೃಹ ಸಚಿವರು ಮಾಡಿದ ಸುಳ್ಳು, ಲಜ್ಜೆಗೆಟ್ಟ ಮತ್ತು ಮಾನಹಾನಿಕರ ದಾಳಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ನಾನು ಚುನಾವಣಾ ಆಯೋಗಕ್ಕೆ ಮತ್ತು ಪಾಂಡಿಚೇರಿ ಚುನಾವಣಾ ದೂರು ನೀಡಿ ಮೂರು ದಿನಗಳಾಗಿದೆ. ದೂರು ನೀಡಿದ ಎರಡು ದಿನಗಳಲ್ಲಿ ಅದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂಬ ನಿಯಮವಿದೆ. ಆದರೆ ನನ್ನ ದೂರನ್ನೇ ಅವರು ದಾಖಲಿಸಿಲ್ಲ. ಏಕೆ ಅಮಿತ್ ಶಾ ವಿ‍ಶೇಷ ವ್ಯಕ್ತಿಯೇ? ಅವರ ಮೇಲೆ ತನಿಖೆ ನಡೆಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಮುಂದುವರಿದು ಇದು ಮಾಜಿ ಸಿಎಂ ವಿರುದ್ಧ ಕೇಂದ್ರ ಗೃಹ ಸಚಿವರು ಮಾಡಿದ ಸುಳ್ಳು, ಲಜ್ಜೆಗೆಟ್ಟ ಮತ್ತು ಮಾನಹಾನಿಕರ ದಾಳಿಯಾಗಿದೆ. ಆದರೂ ಕಾಂಗ್ರೆಸ್ ಆಗಲಿ, ಮಾಜಿ ಸಿಎಂ ನಾರಾಯಣಸಾಮಿಯಾಗಲಿ ಈ ಹೇಳಿಕೆಯ ವಿರುದ್ಧ ದೂರು ನೀಡದಿರುವುದು, ಮಾನಹಾನಿ ದೂರು ದಾಖಲಿಸದಿರುವುದು ನೋವಿನ ವಿಷಯ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷವು ಇಂತಹ ಅಸಹ್ಯಕರ ಹೇಳಿಕೆ‌ಗಳನ್ನು ಯಾವುದೇ ಕ್ರಮವಿಲ್ಲದೆ ಬದಿಗೆ ಸರಿಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿರುವ ಅವರು, ಎಲ್ಲರೂ ಇದನ್ನು ಚುನಾವಣಾ ಆಯೋಗಕ್ಕೆ ಟ್ಯಾಗ್ ಮಾಡುವ ಮೂಲಕ ಶೀಘ್ರ ವಿಚಾರಣೆಗೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ನಂತರ ನೂರಾರು ಜನರು ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದು, ಗೃಹ ಸಚಿವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಾ.8 ರಂದು ಬ್ರಿಟನ್ ಸಂಸತ್ತಿನಲ್ಲಿ ಕೃಷಿ ಕಾಯ್ದೆ & ರೈತ ಹೋರಾಟದ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೇಳಿಕೆ ನೀಡಿರುವುದು ತಪ್ಪಾಗುವುದು ಏಕೆ?!!!
    ಜನರ ಹಣದ ಬಗ್ಗೆ ಜನರಿಗೆ ಮಾಹಿತಿ ನೀಡುವುದು ಹೇಗೆ ತಪ್ಪಾಗುವುದು???!!!
    ಆ ಹೇಳಿಕೆ ಪ್ರಕಾರ ಹಣದ ದುರುಪಯೋಗ ಆಗಿಲ್ಲ ಎಂದಾದರೆ ಮಾನನಷ್ಟ ಮೊಕದ್ದಮೆ ಹಾಕಿ ಅದು ಸೂಕ್ತ.. ಅದು ಸರಿಯಾದ ಹೇಳಿಕೆ ಆದ ಪಕ್ಷದಲ್ಲಿ ಅವರು ಮಾಡಿರುವುದು ತಪ್ಪು ಎಂದು ಹೇಳಲಾಗದು..

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...