Homeಕರ್ನಾಟಕಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆ ಯಾಕೆ ಆಗುತ್ತಿಲ್ಲ? ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

- Advertisement -
- Advertisement -

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ನ ಪರಿಣಾಮಕಾರಿ ಬಳಕೆ, ಆರೋಪಿಗಳಿಗೆ ಶಿಕ್ಷೆ ವಿಧಿಸುವ ಕುರಿತು  ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಶಿಕ್ಷೆ ಕೂಡ ವಿಧಿಸಲು ಏಕೆ ವಿಫಲವಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದಲ್ಲಿ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ 1989ರಡಿ ಪ್ರಕರಣವನ್ನು ದಾಖಲಿಸುವುದಿಲ್ಲ ಅಥವಾ ನಿಬಂಧನಗಳಡಿಯಲ್ಲಿ ಪ್ರಕರಣ ದಾಖಲಿಸಿದರೂ ಅದರಡಿಯಲ್ಲಿ ಶಿಕ್ಷೆಯಾಗುತ್ತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಗಮನಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯನ್ನು ಸಾಮಾನ್ಯವಾಗಿ ಮ್ಯಾನುಯಲ್ ಸ್ಕ್ಯಾವೆಂಜರ್‌ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ  ದಾಖಲು ಮಾಡಲಾಗುತ್ತಿಲ್ಲ ಎಂದು ಹೈಕೋರ್ಟ್‌ ಕಂಡುಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠವು ಕರ್ನಾಟಕದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅರ್ಜಿಗೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿ  ಹೈಕೋರ್ಟ್ ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿದೆ.

ವಿಚಾರಣೆಯ ಸಂದರ್ಭದಲ್ಲಿ ವಕೀಲರಾದ ಶ್ರೀಧರ್ ಪ್ರಭು, ಅಂತಹ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಸ್ಸಿ-ಎಸ್ಟಿ ಕಾಯ್ದೆಯನ್ನು ಕಡ್ಡಾಯವಾಗಿ ಅನ್ವಯಿಸಬೇಕು ಎಂದು ಹೇಳಿದ್ದಾರೆ. ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಾಗಿ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ-2013ರಡಿ ಪ್ರಕರಣ ದಾಖಲಿಸಿದರೂ, ಆರೋಪಿಗಳು ಸುಲಭವಾಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನ್ಯಾಯಾಲಯವು ಗಮನಿಸಿದೆ. ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವಕೀಲರು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದ ಕಾರಣ ಇದು ಸಾಧ್ಯವಾಗುತ್ತದೆ ಎಂದು ಕೋರ್ಟ್‌ ಗಮನಿಸಿದೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದಲ್ಲಿ ಒಬ್ಬರಿಗೆ ಕೂಡ ಶಿಕ್ಷೆಯಾಗಿಲ್ಲ. ಸರಕಾರದ ಪರ ವಕೀಲರು, ನಿಮ್ಮ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಅತ್ಯಲ್ಪ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಆದರೆ ಈ ವಿಷಯಕ್ಕೆ ಬಂದಾಗ ಕ್ರಮ ಎಲ್ಲಿದೆ? ಸಂಬಂಧಪಟ್ಟ ಕೆಳದರ್ಜೆಯ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ವಿರುದ್ಧ ನೀವು ಏನು ಕ್ರಮ ಕೈಗೊಂಡಿದ್ದೀರಿ? ಶೂನ್ಯ ಶಿಕ್ಷೆ? ಎಂತಹ ನ್ಯಾಯದ ಅಪಹಾಸ್ಯ, ಒಂದೇ ಒಂದು ಶಿಕ್ಷೆಯೂ ಏಕೆ ಆಗಿಲ್ಲ? ನಿಮ್ಮ ಚೌಕಟ್ಟು ಏನು? ಎಂದು ಕೋರ್ಟ್‌ ಸರ್ಕಾರವನ್ನು ಕೇಳಿದೆ.

ನಾವು ಮಾಡುತ್ತಿರುವ ಕೆಲಸಗಳಿಂದ ಸಂವಿಧಾನದ ನಿಮಾತೃಗಳು ತಮ್ಮ ಸಮಾಧಿಯಲ್ಲಿ ನಡುಗುತ್ತಾರೆ. ಇಂತಹ ಪ್ರಕರಣಗಳಲ್ಲಿ ಸರ್ಕಾರದ ನಿಷ್ಕ್ರಿಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಕೆಲವು ಕಾರ್ಯದರ್ಶಿಗಳನ್ನು ಜೈಲಿಗೆ ಹಾಕದ ಹೊರತು ನಮ್ಮ ರಾಜ್ಯದಲ್ಲಿ ಏನೂ ಸುಧಾರಿಸುವುದಿಲ್ಲ ಎಂದು ಹೇಳಿದೆ.

ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ನಲ್ಲಿ ತೊಡಗಿರುವವರಿಗೆ ಪುನರ್ವಸತಿ ಜೊತೆಗೆ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ನ್ನು ಬದಲಾಯಿಸುವ ತಂತ್ರಜ್ಞಾನವನ್ನು ಪರಿಚಯಿಸಬೇಕು ಎಂದು ವಕೀಲ ಶ್ರೀಧರ್ ಪ್ರಭು ಈ ವೇಳೆ ಕೋರ್ಟ್‌ನಲ್ಲಿ ಹೇಳಿದ್ದಾರೆ. ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಆಕ್ಟ್‌ನ ಉಲ್ಲಂಘನೆ ಪ್ರಕರಣದ ಜೊತೆಗೆ ಶಾಲಾ ಮಕ್ಕಳನ್ನು ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಬಳಸುವುದನ್ನು ಪ್ರಶ್ನಿಸಿ ಮತ್ತೊಂದು ಸಾರ್ವಜನಿಕ ಹಿತಾಸಕ್ತಿಯು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಎರಡೂ ಪ್ರಕರಣವನ್ನು ಕೋರ್ಟ್‌ ಜೊತೆಯಾಗಿ ವಿಚಾರಣೆ ನಡೆಸುತ್ತಿದೆ.

ಮ್ಯಾನುವಲ್ ಸ್ಕ್ಯಾವೆಂಜಿಂಗ್‌ನ್ನು ಕಾನೂನುಗಳ ಮೂಲಕ ನಿಷೇಧಿಸಲಾಗಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ.  ಇದರಿಂದಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಪೌರಕಾರ್ಮಿಕರಿಂದ, ಕೂಲಿ ಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ  ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013ರ ಮ್ಯಾನುವಲ್ ಸ್ಕ್ಯಾವೆಂಜಿಂಗ್‌ ಆಕ್ಟ್‌ ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ. ಆದರೆ ಇದೀಗ ಈ ಕುರಿತ ಪ್ರಕರಣ ದಾಖಲಾದರೂ ಆರೋಪಿಗಳಿಗೆ ಶಿಕ್ಷೆಯಾಗದಿರುವುದು ಕಾನೂನಿನ ನಿಷ್ಕ್ರಿಯತೆಯನ್ನು ಸೂಚಿಸುತ್ತದೆ.

ಇದನ್ನು ಓದಿ: ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...