Homeಕರ್ನಾಟಕಅದಾನಿಯ ಬಂಧನ ಏಕಿಲ್ಲ, ರಕ್ಷಿಸುತ್ತಿರುವವರು ಯಾರು? ಸಿಎಂ ಸಿದ್ದರಾಮಯ್ಯ

ಅದಾನಿಯ ಬಂಧನ ಏಕಿಲ್ಲ, ರಕ್ಷಿಸುತ್ತಿರುವವರು ಯಾರು? ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದರು.

ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆ. ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ಆದರೆ ಮಾಧ್ಯಮಗಳು ಈ ಬಗ್ಗೆ ಮಾತನಾಡುತ್ತಿಲ್ಲ. ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ತೋರಿಸಬೇಕು ಎಂದು ಹೇಳಿದರು.

ಕೇಂದ್ರದಿಂದ ರಾಜ್ಯದ ರೈತರಿಗೆ ಅನ್ಯಾಯ

ರೈತರಿಗೆ ರಿಯಾಯಿತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ರಾಜ್ಯಕ್ಕೆ ಶೇ.58 ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ಆದರೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಈ ಅನ್ಯಾಯದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡು. ಪ್ರಹ್ಲಾದ್ ಜೋಶಿಯವರ ಹೇಳಿಕೆಗೆ ಸೋ ಕಾಲ್ಡ್ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಕುಮಾರಸ್ವಾಮಿಯವರು ಉಸಿರೇ ಬಿಡ್ತಿಲ್ಲವಲ್ಲ ಏಕೆ? ಎಂದು ಪ್ರಶ್ನಿಸಿದರು.

ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ. ಶೇ 4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ರೈತರ ಪರವಾಗಿ ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದರು.

ಸರ್ಕಾರಿ ನೌಕಕರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ?

ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಈಗ ಬಿಜೆಪಿಯವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ, ಇದೆಂಥಾ ದ್ವಂದ್ವ..!! ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಬಿಜೆಪಿಯವರು ಅನ್ಯಾಯ – ಅನ್ಯಾಯ ಎಂದು ನಾಟಕವಾಡುತ್ತಾ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆ.ಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆ.ಜಿ ಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ? ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ. ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನು ಆರ್‌.ಅಶೋಕ್‌ ಅವರು ಫೋಟೋ ತೆಗೆಸಿಕೊಂಡಿದ್ದೇ ತೆಗೆಸಿಕೊಂಡಿದ್ದು. ಒಟ್ಟಿನಲ್ಲಿ ಅವರ ಪ್ರತಿಭಟನೆ ಫೋಟೊ ಶೂಟ್‌ನಂತೆ ಕಾಣುತ್ತಿತ್ತು ಎಂದರು.

ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭಟನೆ ಎಂದು ಫೋಟೋ ತೆಗೆಸಿಕೊಳ್ಳುತ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : ರಾಜ್ಯದ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು – ಗೃಹ ಸಚಿವ ಡಾ ಜಿ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...