Homeಮುಖಪುಟ‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

ಕುಗ್ಗುತ್ತಿರುವ ಜಿಎಸ್‌ಟಿ ಆದಾಯ, ಕಡಿಮೆ ತೆರಿಗೆ ಹಂಚಿಕೆ, ಅನುದಾನದಲ್ಲಿ ಕಡಿತ ಮತ್ತು ಹೆಚ್ಚಿದ ಸಾಲವನ್ನು ರಾಜ್ಯಗಳು ಎದುರಿಸುತ್ತಿವೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಲಸಿಕೆಗಳ ಬೆಲೆ ಕೇಂದ್ರ ಮತ್ತು ರಾಜ್ಯಗಳಿಗೆ ಒಂದೇ ಆಗಿರಬೇಕು ಮತ್ತು ಹೆಚ್ಚಿನ ಬೆಲೆಯನ್ನು ಈಗಾಗಲೇ ಭಾರಿ ಹಣದ ಕೊರತೆಯಿರುವ ರಾಜ್ಯಗಳ ಮೇಲೆ ವರ್ಗಾಯಿಸಬಾರದು ಎಂದು ಕಾಂಗ್ರೆಸ್ ಇಂದು ಹೇಳಿದೆ. ನಿನ್ನೆ ಸೋಮವಾರ 18 ರಿಂದ 45 ರವರೆಗಿನ ವಯಸ್ಸಿನವರಿಗೆ ಘೋಷಿಸಿದ ಲಸಿಕೆ ನೀತಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ದಾಳಿ ನಡೆಸಿದೆ.

“ಲಸಿಕೆ ತಯಾರಕರು ಲಾಭ ಬಯಸುವುದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ, ಆದರೆ ಕೇಂದ್ರವು ತನ್ನ ಜವಾಬ್ದಾರಿಯನ್ನು ತ್ಯಜಿಸಲು ಸಾಧ್ಯವಿಲ್ಲ” ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ್ದಾರೆ. “ನಿಮಗೆ ಒಂದು ದೇಶ ಒಂದು ಮಾರುಕಟ್ಟೆ ಇತ್ಯಾದಿಯೆಲ್ಲ ಬೇಕು. ಹಾಗಾದರೆ ನಾವು ಒಂದೇ ದೇಶಕ್ಕೆ ಒಂದು ಬೆಲೆಯನ್ನು ಏಕೆ ಹೊಂದಲು ಸಾಧ್ಯವಿಲ್ಲ?’ ಎಂದು ಅವರು ಪ್ರಶ್ನಿಸಿದ್ದಾರೆ.

ಸೋಮವಾರ ಸಂಜೆ ಪ್ರಕಟಗೊಂಡ ಹೊಸ ನೀತಿಯಡಿಯಲ್ಲಿ, ಲಸಿಕೆ ತಯಾರಕರು ತಮ್ಮ ಮಾಸಿಕ ಉತ್ಪನ್ನದ ಶೇಕಡಾ 50 ರಷ್ಟು ಪ್ರಮಾಣವನ್ನು ಭಾರತ ಸರ್ಕಾರಕ್ಕೆ ಪೂರೈಸುತ್ತಾರೆ ಮತ್ತು ಉಳಿದ ಉತ್ಪನ್ನವನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಗೆ ಪೂರೈಸಲು ಮುಕ್ತರಾಗಿದ್ದಾರೆ.

ಆದರೆ ಅವರು ಮೇ 1 ರ ಮೊದಲು ರಾಜ್ಯಗಳು ಮತ್ತು ಮುಕ್ತ ಮಾರುಕಟ್ಟೆಯ ಬೆಲೆಯನ್ನು ಘೋಷಿಸಬೇಕು ಎಂದು ಸರ್ಕಾರ ಹೇಳಿದೆ. ಇದು ಬೆಲೆ ವಿಷಯದ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದೆ.

18 ರಿಂದ 45 ವರ್ಷದ ಪ್ರಜೆಗಳಿಗೆ ಏಕೆ ಉಚಿತ ಲಸಿಕೆ ಸಿಗುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. “18-45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆಗಳು ಇಲ್ಲ. ಬೆಲೆ ನಿಯಂತ್ರಣವಿಲ್ಲದೆ ಮಧ್ಯವರ್ತಿಗಳನ್ನು ನಡುವೆ ತರಲಾಗಿದೆ. ದುರ್ಬಲ ವರ್ಗದವರಿಗೆ ಲಸಿಕೆ ಗ್ಯಾರಂಟಿ ಇಲ್ಲ. ಇದು ಭಾರತ ಸರ್ಕಾರದ ಲಸಿಕೆ ತಾರತಮ್ಯ – ವಿತರಣಾ ತಂತ್ರವಲ್ಲ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಜಿಎಸ್‌ಟಿ ಆದಾಯದಲ್ಲಿ ಕುಗ್ಗುವಿಕೆ, ಕಡಿಮೆ ತೆರಿಗೆ ಹಂಚಿಕೆ, ಅನುದಾನ ಕಡಿತ ಮತ್ತು ಹೆಚ್ಚಿದ ಸಾಲಗಳು- ಈ ಹೆಚ್ಚುವರಿ ಹೊರೆಗಳನ್ನು ರಾಜ್ಯಗಳು ಭರಿಸಬೇಕಾಗುತ್ತದೆ. ಈ ನಡುವೆ ಪಿಎಂ ಕೇರ್ಸ್ ಅಡಿಯಲ್ಲಿ ಸಂಗ್ರಹಿಸಲಾದ ಸಾವಿರಾರು ಕೋಟಿ ರೂಪಾಯಿಗಳನ್ನು ಎಲ್ಲಿ ನಿಯೋಜಿಸಲಾಗಿದೆ ಎಂದು ಯಾರಿಗೂ ತಿಳಿದಿಲ್ಲ, ” ಎಂದು ಚಿದಂಬರಂ ಮತ್ತು ರಣದೀಪ್ ಸುರ್ಜೇವಲಾ ಟ್ವೀಟ್ ಮಾಡಿದ್ದಾರೆ.

ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಶೇಕಡಾ 100 ರಷ್ಟು ಪರಿಣಾಮಕಾರಿಯಲ್ಲದಿದ್ದರೂ, ಅವು ಅಪಾಯಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತವೆ. ಹೆಚ್ಚಿನ ಸಂದರ್ಭಗಳಲ್ಲಿ ಆಮ್ಲಜನಕ, ಔಷಧಗಳು ಅಥವಾ ಆಸ್ಪತ್ರೆಗೆ ದಾಖಲು ಮಾಡುವ ಅಗತ್ಯವನ್ನು ನಿವಾರಿಸುತ್ತದೆ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: 18-45 ವರ್ಷ ವಯಸ್ಸಿನವರಿಗೆ ಲಸಿಕೆ ಉಚಿತವಲ್ಲ: ಕೇಂದ್ರದ ತಾರತಮ್ಯಕ್ಕೆ ರಾಹುಲ್ ಗಾಂಧಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...