Homeಕರ್ನಾಟಕಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಸಾರಿಗೆ ನೌಕರರ ಪ್ರತಿಭಟನೆಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ನಾಯಕರು, ಕಾಂಗ್ರೆಸ್ ಸರ್ಕಾರ ಹಾಗು ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ? - ಸುಧಾಕರ್

- Advertisement -
- Advertisement -

ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಮೂರು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದು, ಇದಕ್ಕೆ ಪ್ರತಿಪಕ್ಷ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ಇದರ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್, “ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳ ಕುರಿತು ಇಂದು ಸರ್ಕಾರ ಪ್ರತಿಭಟನಾಕಾರರೊಟ್ಟಿಗೆ ಮಾತುಕತೆ ನಡೆಸಿದ್ದು, ವೇತನ ಪರಿಷ್ಕರಣೆ, ಕಿರುಕುಳ ತಡೆ, ಭತ್ಯೆ ಪುನರಾರಂಭ, ಆರೋಗ್ಯ ವಿಮೆ ಸೇರಿದಂತೆ ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.

ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ಸಂಧಾನ ಸಭೆ ಅಂತ್ಯಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, ‘ನಮ್ಮ ಬಹುತೇಕ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಸೌಹಾರ್ದಯುತ ತೀರ್ಮಾನ ಆಗಿದೆ. ಮುಂದಿನ ನಿರ್ಧಾರವನ್ನು ಸ್ವಾತಂತ್ರ್ಯ ಉದ್ಯಾನದ ಪ್ರತಿಭಟನಾ ಸ್ಥಳದಲ್ಲಿ ಪ್ರಕಟಿಸಲಾಗುವುದು’ ಎಂದರು.

ಇದರ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಸುಧಾಕರ್, “ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಪದೇ ಪದೇ ಮುಷ್ಕರ, ಬಂದ್‌ಗಳಿಗೆ ಕರೆನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ‘ಪ್ರಧಾನ ಮಂತ್ರಿ ಆಗಬೇಕು ಎನ್ನುವ ಆಸೆ ನನಗಿಲ್ಲ…’ – ಸಿದ್ದರಾಮಯ್ಯ

“ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಸಾರಿಗೆ ವ್ಯವಸ್ಥೆ ಹಾಗೂ ನೌಕರರ ಸಮಸ್ಯೆಗಳ ಬಗ್ಗೆ ಅರಿವಿದೆಯೇ? ತಮಗೆ ಅರಿವಿಲ್ಲದ ವಿಷಯಗಳ ಬಗ್ಗೆ ಮೂಗು ತೂರಿಸುವುದು ಎಷ್ಟು ಸಮಂಜಸ ಎಂದು ಜನ ಕೇಳುತ್ತಿರುವ ಪ್ರಶ್ನೆಗೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಮೊದಲು ಉತ್ತರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶೂದ್ರರಿಗೆ ಜ್ಞಾನವಿಲ್ಲ, ಹಾಗಾಗಿಯೇ ತಾವು ಶೂದ್ರರು ಎಂದು ಒಪ್ಪಿಕೊಳ್ಳುವುದಿಲ್ಲ: ಪ್ರಗ್ಯಾ ಠಾಕೂರ್

“ಸಾರಿಗೆ ವ್ಯವಸ್ಥೆ ಅತ್ಯಂತ ಪ್ರಮುಖ ಮತ್ತು ಅಗತ್ಯ ಸೇವೆಯಾಗಿದ್ದು, ಶ್ರೀ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದಾಗಿನಿಂದ ಪದೇ ಪದೇ ಮುಷ್ಕರ, ಬಂದ್ ಗಳಿಗೆ ಕುಮ್ಮಕ್ಕು ನೀಡುವ ಮೂಲಕ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆ ಉಂಟುಮಾಡಿ ಬಡವರು, ದಿನಗೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

“ನೌಕರರ ಪ್ರತಿಭಟನೆಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ನಾಯಕರು ಕಾಂಗ್ರೆಸ್ ಸರ್ಕಾರ ಹಾಗು ಸಮ್ಮಿಶ್ರ ಸರ್ಕಾರಗಳು ಇದ್ದ ಸಂದರ್ಭದಲ್ಲಿ ಈ ಬೇಡಿಕೆಗಳನ್ನು ಏಕೆ ಪೂರೈಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

“ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರು
ಅವರು ಈಗಾಗಲೇ ಭರವಸೆ ನೀಡಿದ್ದಾರೆ. ತಮ್ಮನ್ನು ದಾರಿ ತಪ್ಪಿಸುತ್ತಿರುವವರ ಪ್ರಚೋದನೆಗೆ ಒಳಗಾಗದೆ ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...