Homeಕರ್ನಾಟಕಜಾತಿ ಜನಗಣತಿ ವರದಿ ಕೊಡುವ ಮುನ್ನವೇ ವಿರೋಧಿಸುವುದೇಕೆ: ಸಿಎಂ ಸಿದ್ದರಾಮಯ್ಯ

ಜಾತಿ ಜನಗಣತಿ ವರದಿ ಕೊಡುವ ಮುನ್ನವೇ ವಿರೋಧಿಸುವುದೇಕೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

”ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಕೇಳಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರ ಅವರು, ”ಜಾತಿ ಜನಗಣತಿ ವರದಿ ಇನ್ನೂ ನಮ್ಮಕೈ ಸೇರಿಲ್ಲ. ವರದಿ ನೀಡಿದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮೂಲಪ್ರತಿ ಕಾಣೆಯಾಗಿದೆ ಎಂದು ಹೇಳಿಕೆ ನೀಡಿದ್ದರ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ”ಈ ಬಗ್ಗೆ ನನಗೆ ತಿಳಿದಿಲ್ಲ ಅವರು ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದಾರೆ” ಎಂದು ತಿಳಿಸಿದರು.

”ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ . ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ” ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿದ್ದಾರೆಯೇ ಎಂದು ಮಾಧ್ಯಮದವರು ಪ್ರಶ್ನೆಗೆ, ”ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ” ಎಂದು  ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಉಡುಪಿಯ ತಾಯಿ-ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...