Homeಮುಖಪುಟಪೋಲಿಸರು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯದೆ, ವೃತ್ತಿಪರತೆಯಿಂದ‌ ಕೆಲಸ ಮಾಡಬೇಕು: ಸಿದ್ದರಾಮಯ್ಯ

ಪೋಲಿಸರು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯದೆ, ವೃತ್ತಿಪರತೆಯಿಂದ‌ ಕೆಲಸ ಮಾಡಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಂಗಳೂರು ವಿಮಾನ‌ನಿಲ್ದಾಣಕ್ಕೆ ಬಾಂಬು ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬವನ ಬಗ್ಗೆ ನಿಷ್ಪಕ್ಷಪಾತವಾಗಿ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು ಆತನನ್ನು ಮಾನಸಿಕ‌ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಿರ್ದಿಷ್ಟ ಸಮುದಾಯದ ಬಗ್ಗೆ ಪೂರ್ವಗ್ರಹ ಹೊಂದಿರುವ ಸಂಘ ಪರಿವಾರದ ನಾಯಕರು ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಸಾಮಾನ್ಯ ಅಪರಾಧ ಪ್ರಕರಣಗಳಿಗೂ ಕೋಮುಬಣ್ಣ ಬಳಿಯುತ್ತಿರುವುದೇ ಅಲ್ಲಿನ ಶಾಂತಿ ವ್ಯವಸ್ಥೆ ಕದಡಲು ಕಾರಣ. ತಮ್ಮ ಅಜೆಂಡಾಕ್ಕೆ ಬಳಸಲಾಗದ ಪ್ರಕರಣಗಳ ಬಗ್ಗೆ ಅವರ ಮೌನವೇ ಅವರ ದುರುದ್ದೇಶಕ್ಕೆ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ಪೋಲಿಸರು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಲು ಹೋಗದೆ ವೃತ್ತಿಪರತೆಯಿಂದ‌ ಕೆಲಸ ಮಾಡಬೇಕು. ಮಂಗಳೂರು ಪೋಲಿಸರು ತಮ್ಮ ತಪ್ಪುಗಳನ್ನು‌ ಮುಚ್ಚಿಕೊಳ್ಳಲು ಅನಗತ್ಯವಾಗಿ ಸಾರ್ವಜನಿಕರಲ್ಲಿ‌ ಗೊಂದಲ‌ ಸೃಷ್ಟಿಸಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲು ಕಾರಣವಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ : ಕರ್ನಾಟಕದ 14 ಸೇರಿ ದೇಶದ 93 ಕ್ಷೇತ್ರಗಳಲ್ಲಿ ಇಂದು ಮತದಾನ

0
ದೇಶದಲ್ಲಿ ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದ 14 ಸೇರಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕರ್ನಾಟಕದ ಚಿಕ್ಕೋಡಿ, ಬೆಳಗಾವಿ,...