Homeರಾಷ್ಟ್ರೀಯಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

ಪ್ರವಾದಿ ಮುಹಮ್ಮದ್‌ ಅವರನ್ನು ಅವಹೇಳನ ಮಾಡಿರುವ ಬಗ್ಗೆ ಭಾರತ ಸರ್ಕಾರ ಸಾರ್ವಜನಿಕ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿತ್ತು

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್‌ ಶರ್ಮಾ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಗಲ್ಫ್‌ ದೇಶಗಳು ತೀವ್ರ ಪ್ರತಿಭಟನೆ ದಾಖಲಿಸಿದ್ದು, ಭಾರತದ ರಾಯಭಾರಿಗಳಿಗೆ ಸಮನ್ಸ್‌ ನೀಡಿದೆ. ಈ ಬಗ್ಗೆ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಅವರು ಮೋದಿ ನೇತೃತ್ವದ ಒಕ್ಕೂಟ ಸರ್ಕಾರವನ್ನು ಗುರಿಯಾಗಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೆಟಿಆರ್ ಅವರು, “ಪ್ರಧಾನಿ ಮೋದಿ ಅವರೇ, ಬಿಜೆಪಿಯ ಮತಾಂಧರ ದ್ವೇಷದ ಭಾಷಣಗಳಿಗೆ ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಭಾರತ ಯಾಕೆ ಕ್ಷಮೆಯಾಚಿಸಬೇಕು. ಬಿಜೆಪಿ ದಿನವಿಡೀ ದ್ವೇಷವನ್ನು ಉಗುಳುವುದು ಮತ್ತು ಹರಡುವುದಕ್ಕಾಗಿ ಪ್ರತಿ ಭಾರತೀಯರಲ್ಲಿ ಕ್ಷಮೆಯಾಚಿಸಬೇಕು. ಕ್ಷಮೆ ಕೇಳಬೇಕಾದ್ದು ಬಿಜೆಪಿಯೇ ಹೊರತು ಇಡೀ ಭಾರತವಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಅವರು ಮಹಾತ್ಮ ಗಾಂಧಿಯವರ ಹತ್ಯೆಯನ್ನು ಸಮರ್ಥಿಸಿದಾಗ ಪ್ರಧಾನಿಯ ಮೌನವು ಆಘಾತಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.

“ನಾನು ನಿಮಗೆ ನೆನಪಿಸುತ್ತೇನೆ ಸರ್; ನೀವು ಏನು ಅನುಮತಿಸುತ್ತೀರೋ ಅದನ್ನೇ ನೀವು ಪ್ರಚಾರ ಮಾಡುತ್ತೀರಿ. ಮೇಲಿನವರ ಮೌನ ಸಮ್ಮತಿ ಧರ್ಮಾಂಧತೆ ಮತ್ತು ದ್ವೇಷವನ್ನು ಉತ್ತೇಜಿಸುತ್ತದೆ” ಎಂದು ಕೆಟಿಆರ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

ಬಿಜೆಪಿಯ ವಕ್ತಾರೆಯಾದ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ವಿರುದ್ಧದ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ, ಇಂತಹ ಹೇಳಿಕೆಗಳನ್ನು ನೀಡುವವರನ್ನು ಬಿಜೆಪಿ ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾವುದೇ ಧರ್ಮದ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸುವುದು ಸೂಕ್ತವಲ್ಲ. ಈ ವಿಷಯದಲ್ಲಿ ಬಿಜೆಪಿಯು ತನ್ನ ಜನರಿಗೆ ಕಟ್ಟುನಿಟ್ಟಿನ ಕುಣಿಕೆ ಬಿಗಿಗೊಳಿಸಬೇಕು. ಅವರನ್ನು ಅಮಾನತುಗೊಳಿಸುವುದು ಮತ್ತು ಹೊರಹಾಕುವುದು ಮಾತ್ರವಲ್ಲ, ಅದರ ಜೊತೆಗೆ ಕಠಿಣ ಕಾನೂನುಗಳ ಅಡಿಯಲ್ಲಿ ಜೈಲಿಗೆ ಕಳುಹಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಭಾರತವು ಕ್ಷಮೆ ಕೇಳಬೇಕಾದ ಯಾವುದೇ ತಪ್ಪನ್ನು ಮಾಡಿಲ್ಲ. ತಮ್ಮು ಆಗಿದ್ದು ಬಿಜೆಪಿಯಾಗಿದೆ. ದೇಶವೇಕೆ ಅದನ್ನು ಸರಿದೂಗಿಸಬೇಕು? ಕತಾರ್ ಮತ್ತು ಕುವೈತ್‌‌ ಪ್ರಧಾನಿಗೆ ಅವರ ರಾಜಧರ್ಮವನ್ನು ನೆನಪಿಸುತ್ತಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ?” ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

“ಪ್ರಧಾನಿ ಮತ್ತು ಅವರ ಪಕ್ಷವು ದೇಶವನ್ನು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿ ಯಾವುದೇ ಭಾರತೀಯನ ತಪ್ಪನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಭಾರತವು ಯಾವಾಗಲೂ ಸಂವಿಧಾನದಲ್ಲಿ ಪ್ರತಿಪಾದಿಸಿದ ಮೌಲ್ಯಗಳನ್ನು ಗೌರವಿಸುತ್ತದೆ. ಆದರೆ ಬಿಜೆಪಿ ಅದನ್ನು ಮಾಡುವುದಿಲ್ಲ. ಅವರು ಮಾಡಿರುವ ತಪ್ಪಿಗೆ ಅವರೇ ಕ್ಷಮೆಯಾಚಿಸಬೇಕು” ಎಂದು ಅವರು ಹೇಳಿದ್ದಾರೆ.

ಸಮಯಕ್ಕೆ ಸರಿಯಾಗಿ ಮಾತನಾಡಿದರೆ ದೇಶ ಮುಜುಗರಕ್ಕೀಡಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಪವನ್‌ ಖೇರಾ ಹೇಳಿದ್ದು, “ನಿಮ್ಮಿಂದಾಗಿ ನಮಗೆ ಮುಜುಗರ ಉಂಟಾಗಿದೆ. ಪ್ರಧಾನಿ ದೇಶದ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಬಿಜೆಪಿ ವಕ್ತಾರೆಯ ವಿವಾದಾತ್ಮಕ ಹೇಳಿಕೆಗಳಿಂದ ಭಾರತವು ಗಲ್ಫ್‌ ರಾಷ್ಟ್ರಗಳಿಂದ ಭಾರಿ ಪ್ರತಿಭಟನೆ ಎದುರಿಸುತ್ತಿದೆ. ಇದುವರೆಗೆ ಸೌದಿ ಅರೇಬಿಯಾ, ಕತಾರ್, ಬಹ್ರೇನ್ ಮತ್ತು ಇರಾನ್ ಈ  ಟೀಕೆಗಳನ್ನು ತೀವ್ರವಾಗಿ ಖಂಡಿಸಿದ್ದು, ಹೇಳಿಕೆಯನ್ನು “ಇಸ್ಲಾಮೋಫೋಬಿಕ್” ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಕತಾರ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿದ್ದು, ತಮ್ಮ ವಿರೋಧವನ್ನು ತಿಳಿಸಿವೆ. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿದೆ. ಜೊತಗೆ ಪಕ್ಷದ ವಕ್ತಾರೆಯ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....