Homeಮುಖಪುಟಅಂಬೇಡ್ಕರ್ ಜಯಂತಿ, ಧಾರ್ಮಿಕ ಉತ್ಸವ ಒಂದೇ ದಿನ ಏಕೆ ಆಚರಿಸಬಾರದು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ

ಅಂಬೇಡ್ಕರ್ ಜಯಂತಿ, ಧಾರ್ಮಿಕ ಉತ್ಸವ ಒಂದೇ ದಿನ ಏಕೆ ಆಚರಿಸಬಾರದು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಅಂಬೇಡ್ಕರ್ ಜಯಂತಿ ಮತ್ತು ಧಾರ್ಮಿಕ ಹಬ್ಬವನ್ನು ಒಟ್ಟಿಗೆ ಆಚರಿಸಿದರೆ ಇನ್ನೂ ಜಾತಿ ಉದ್ವಿಗ್ನತೆಯ ಆತಂಕವಿದೆ ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

”ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಒಂದು ಹಳ್ಳಿಯಲ್ಲಿ ದೇವಸ್ಥಾನದ ಉತ್ಸವದೊಂದಿಗೆ ಏಕಕಾಲದಲ್ಲಿ ಆಚರಿಸಲು ಸಾಧ್ಯವಾಗದಿದ್ದರೆ, ನಮ್ಮ ದೇಶದ ಬಗ್ಗೆ ಜನರು ಏನು ಯೋಚಿಸುತ್ತಾರೆ?” ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ ರಾಜಾ ಮತ್ತು ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರ ಪೀಠವು ಏಪ್ರಿಲ್ 14ರಂದು ನಾಗಪಟ್ಟಣಂ ಜಿಲ್ಲೆಯ ಪಟ್ಟವರ್ತಿ ಗ್ರಾಮದಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿತ್ತು. ಇದೀಗ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದರು ಮತ್ತು ಅಧಿಕಾರಿಗಳು ಎರಡೂ ವ್ಯವಸ್ಥೆಗಳನ್ನು ಮಾಡುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮಗಳನ್ನು ನಡೆಸಬಹುದು ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

ಶುಕ್ರವಾರ ನಡೆದ ಅಂಬೇಡ್ಕರ್ ಜಯಂತಿ ಅಥವಾ ಸ್ಥಳೀಯ ದೇವಸ್ಥಾನದ ಉತ್ಸವದ ಆಚರಣೆಗಾಗಿ ಸಭೆಗಳನ್ನು ನಡೆಸಂತೆ ನ್ಯಾಯಾಲಯವು ಆದೇಶವನ್ನು ನೀಡಬೇಕೆಂದು ಅರ್ಜಿದಾರರು ಬಯಸಿದ್ದರು.

2021ರ ಡಿಸೆಂಬರ್‌ನಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಸ್ಥಳೀಯ ಬಸ್ ನಿಲ್ದಾಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದರು ಮತ್ತು ಅದೇ ದಿನ ಗ್ರಾಮದ ದೇವಸ್ಥಾನದಲ್ಲಿ ಮೇಲ್ಜಾತಿ ಹಿಂದೂಗಳು ಹಬ್ಬವನ್ನು ಆಚರಿಸುತ್ತಿದ್ದರು. ಈ ವೇಳೆ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ನ್ಯಾಯಾಲಯವು ಕಾರ್ಯಕ್ರಮಗಳು ಒಂದೇ ದಿನ ನಡೆದರೂ ಯಾವುದೇ ಘರ್ಷನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಸಾಕಷ್ಟು ಭದ್ರತಾ ವ್ಯವಸ್ಥೆ ಮಾಡಬೇಕು. ಎರಡೂ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...