Homeಮುಖಪುಟಕಾಂಗ್ರೆಸ್ ಟಿಕೆಟ್ ಬಯಸುವುದರಲ್ಲಿ ತಪ್ಪೇನಿದೆ?: 2024ರ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟ ಕಮಲ್ ಹಾಸನ್

ಕಾಂಗ್ರೆಸ್ ಟಿಕೆಟ್ ಬಯಸುವುದರಲ್ಲಿ ತಪ್ಪೇನಿದೆ?: 2024ರ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟ ಕಮಲ್ ಹಾಸನ್

- Advertisement -
- Advertisement -

ಮಕ್ಕಳ್ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್‌ ಹಾಸನ್‌ರವರು ಕಾಂಗ್ರೆಸ್ ಟಿಕೆಟ್ ಬಯಸುವುದರಲ್ಲಿ ತಪ್ಪೇನಿದೆ ಎಂಬ ಅಚ್ಚರಿಯ ಹೇಳಿಕೆ ನೀಡುವ ಮೂಲಕ 2024ರ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ.

ತಮ್ಮ ಮಕ್ಕಳ್ ನೀದಿ ಮಯ್ಯಂ ಪಕ್ಷವು ಈರೋಡ್ ಪೂರ್ವ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ ಅವರನ್ನು ಬೆಂಬಲಿಸಿದೆ ಎಂದು ಕಮಲ್ ಹಾಸನ್ ಘೋಷಿಸಿದರು.

ಈ ಸಂದರ್ಭದಲ್ಲಿ ಇದಕ್ಕೆ ಪ್ರತಿಯಾಗಿ ನೀವು ಕಾಂಗ್ರೆಸ್‌ನಿಂದ ಲೋಕಸಭಾ ಸ್ಥಾನ ಕೇಳುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ಏಕೆ ಕೇಳಬಾರದು? ರಾಷ್ಟ್ರೀಯ ಹಿತಾಸಕ್ತಿಗಾಗಿ, ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ” ಎಂದಿದ್ದಾರೆ.

ಇತ್ತೀಚಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಮಲ್ ಹಾಸನ್ ಭಾಗವಹಿಸಿದ್ದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಅಲ್ಲದೆ ಕಾಂಗ್ರೆಸ್ ಟಿಕೆಟ್ ಬಯಸುವುದರಲ್ಲಿ ತಪ್ಪಿಲ್ಲ ಎಂದು ಹೇಳುವ ಮೂಲಕ ಅವರು 2024ರ ಚುನಾವಣಾ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಇಳಂಗೋವನ್ ಅವರು ಜನವರಿ 23 ರಂದು ಅಲ್ವಾರ್‌ಪೇಟ್ ಕಚೇರಿಯಲ್ಲಿ ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಉಪಚುನಾವಣೆಗೆ ಬೆಂಬಲ ಕೋರಿದ್ದರು. ಆಗ ಕಮಲ್ ಹಾಸನ್‌ರವರು “ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷದ ಕಾರ್ಯಕಾರಿ ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

2024ರ ಲೋಕಸಭೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವಿರ ಎಂಬ ಪ್ರಶ್ನೆಗೆ ಈಗಲೇ ಉತ್ತರಿಸಲು ಸಾಧ್ಯವಿಲ್ಲ, ಇನ್ನೂ ಒಂದು ವರ್ಷ ಬಾಕಿ ಇದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

“ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಕೆಲವೊಮ್ಮೆ ಪಕ್ಷದ ಸಿದ್ಧಾಂತಕ್ಕಿಂತ ಜನರ ನಿರ್ಧಾರಕ್ಕೆ ಬೆಲೆ ಕೊಡಬೇಕಾಗುತ್ತದೆ. ದೇಶದಲ್ಲಿ ಏರುತ್ತಿರುವ ಏಕ ಸಂಸ್ಕೃತಿಗೆ ವಿರುದ್ಧವಾಗಿ ನಾನು ಭಾರತದ ಬಹುತ್ವದಲ್ಲಿ ನಂಬಿಕೆಯಿಡುತ್ತೇನೆ. ಹಾಗಾಗಿ ಡಿಎಂಕೆ-ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದೇವೆ. ಆದರೆ ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2021ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕಮಲ್  ಹಾಸನ್ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದರು. ಮಕ್ಕಳ್ ನೀದಿ ಮಯ್ಯಂ ಪಕ್ಷ ರಚಿಸಿ ಚುನಾವಣೆಗೆ ಧುಮುಕಿದ್ದರು. ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಮಲ್ ಹಾಸನ್ ಕೇವಲ 1500 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವನತಿ ಶ್ರೀನಿವಾಸನ್ ಎದುರು ಸೋಲು ಕಂಡಿದ್ದರು.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...