Homeಮುಖಪುಟಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಸಿ.ಟಿ ರವಿ ಬಂಧನ ಯಾಕಿಲ್ಲ? ಸಿದ್ದರಾಮಯ್ಯ ಪ್ರಶ್ನೆ

ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಸಿ.ಟಿ ರವಿ ಬಂಧನ ಯಾಕಿಲ್ಲ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

’ಗೋಧ್ರಾದ ನಂತರ ಗುಜರಾತ್‌ನಲ್ಲಿ ಏನಾಯಿತು ಎಂಬುದನ್ನು ನೆನಪಿಸಿಕೊಳ್ಳಿ’ ಎಂದು ಹೇಳಿದ ಸಿ.ಟಿ ರವಿರವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವುದು ವಿರೋಧ ಪಕ್ಷದವರಿಂದ ಅಲ್ಲ, ಅದನ್ನು ನಿರಂತರವಾಗಿ ಮಾಡ್ತಾ ಇರುವವರು ನಿಮ್ಮದೇ ಸಹೋದ್ಯೋಗಿ ಸಿ.ಟಿ ರವಿ ಆಗಿದ್ದಾರೆ. ಯಡಿಯೂರಪ್ಪನವರೆ, ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಒಬ್ಬ ವ್ಯಕ್ತಿ ಹೇಳಿಕೆ ನೀಡಿದ ನಂತರವೂ ಪೊಲೀಸರು ಕಣ್ಣು ಮುಚ್ಚಿಕೊಂಡಿದ್ದಾರೆಂದರೆ ರಾಜ್ಯದಲ್ಲಿ ಸರ್ಕಾರ ಸತ್ತಿದೆ ಎಂದರ್ಥ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಯು.ಟಿ ಖಾದರ್‌ರಂತಹ ಮನಸ್ಥಿತಿಯವರೆ ಗೋಧ್ರಾದಲ್ಲಿ ಕರಸೇವಕರಿಗೆ ಬೆಂಕಿ ಹಚ್ಚಿದ್ದು. ಆದರೆ ಆಮೇಲೆ ಏನಾಯಿತು ಎಂದು ಎಲ್ಲರಿಗೂ ಗೊತ್ತಿದೆ. ಬಹುಸಂಖ್ಯಾತರರು ರೊಚ್ಚಿಗೆದ್ದರು ನೀವು ಉಳಿಯುವುದಿಲ್ಲ ಎಂಬು ಕೋಮುದ್ವೇಷದ ಹೇಳಿಕೆ ನೀಡಿದ್ದರು.

ಈ ಕುರಿತು ರಾಜ್ಯದ ಹಲವಾರು ವಲಯಗಳಿಂದ ವಿರೋಧ ವ್ಯಕ್ತವಾಗಿತ್ತು. ಈಗ ಸಿದ್ದರಾಮಯ್ಯನವರು ಸಹ ರಾಜ್ಯದಲ್ಲಿ ಶಾಂತಿ ಕದಡುತ್ತಿರುವವರು ವಿರೋಧ ಪಕ್ಷಗಳಲ್ಲ ಬದಲಿಗೆ ಆಡಳಿತ ಪಕ್ಷದ ಸಚಿವರೆ ಹಿಂಸೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...