ಅರ್ನಾಬ್ ವಾಟ್ಸಾಪ್ ಚಾಟ್ಸ್‌ ಕುರಿತು ಸರ್ಕಾರ ಮೌನವಾಗಿರುವುದೇಕೆ: ಸೋನಿಯಾ ಗಾಂಧಿ
Photo Courtesy: NDTV

ಅರ್ನಾಬ್ ಗೋಸ್ವಾಮಿಯ ವಾಟ್ಸಾಪ್ ಚಾಟ್‌ಗಳ (ಬಾಲಾಕೋಟ್ ದಾಳಿ) ಕುರಿತು ಸರ್ಕಾರ ಏಕೆ ಮೌನವಹಿಸಿದೆ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.

ಶುಕ್ರವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಮಾತನಾಡಿದ ಅವರು, “ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಸರ್ಕಾರ ರಾಜಿಯಾಗಿರುವುದು ವರದಿಯಾಗಿದೆ. ಆದರೆ, ಸರ್ಕಾರ ಈ ವಿಷಯದಲ್ಲಿ ಮೌನವಾಗಿದೆ. ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಪ್ರಮಾಣಪತ್ರ ನೀಡುತ್ತಿದ್ದ ವ್ಯಕ್ತಿಗಳ ನಿಜವಾದ ನಿಲುವು ಈಗ ಬಹಿರಂಗಗೊಂಡಿದೆ” ಎಂದು ಹೇಳಿದರು.

ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸೋನಿಯಾ ಗಾಂಧಿ, “ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಖಾತೆ ಬದಲಾವಣೆ ಮಾಡಿದ ಯಡಿಯೂರಪ್ಪ: ಯಾರ್ಯಾರಿಗೆ ಯಾವುದು? ಇಲ್ಲಿದೆ ವಿವರ

“ಮೂರು ಕೃಷಿ ಕಾಯ್ದೆಗಳನ್ನು ಆತುರದಲ್ಲಿ ಸಿದ್ಧಪಡಿಸಲಾಗಿದೆ. ಉದ್ದೇಶಪೂರ್ವಕವಾಗಿಯೇ ಸಂಸತ್‌ನಲ್ಲಿ ಚರ್ಚೆಗೆ ಹಾಗೂ ಪರಿಶೀಲನೆಗೆ ಅವಕಾಶ ನೀಡಲಿಲ್ಲ. ರೈತರ ಪ‍್ರತಿಭಟನೆ ಮುಂದುವರಿದಿದೆ. ಆದರೆ, ಸರ್ಕಾರ ಸೂಕ್ಷ್ಮತೆಯನ್ನೇ ಪ್ರದರ್ಶಿಸಲಿಲ್ಲ. ಕೇವಲ ನಾಟಕೀಯ ಮಾತುಕತೆಗಳನ್ನು ನಡೆಸಿತು. ಈ ಕಾಯ್ದೆಗಳನ್ನು ಕಾಂಗ್ರೆಸ್‌ ಒಪ್ಪಿಕೊಂಡಿರಲಿಲ್ಲ. ಈ ಕೃಷಿ ಕಾಯ್ದೆಗಳು ಆಹಾರ ಭದ್ರತೆ ಸೇರಿದಂತೆ ದೇಶದ ಮೂರು ಅಡಿಪಾಯಗಳಾದ ಕನಿಷ್ಠ ಬೆಂಬಲ ಬೆಲೆ, ಸಾರ್ವಜನಿಕವಾಗಿ ಸಂಗ್ರಹಿಸುವ ವ್ಯವಸ್ಥೆ ಮತ್ತು ಸಾರ್ವಜನಿಕವಾಗಿ ವಿತರಣೆ ವ್ಯವಸ್ಥೆಯನ್ನೇ ನಾಶಪಡಿಸಲಿವೆ” ಎಂದು ದೂರಿದರು.

“ಬಜೆಟ್‌ ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಚರ್ಚಿಸಲು ಹಲವು ವಿಷಯಗಳಿವೆ. ಆದರೆ, ಸರ್ಕಾರ ಚರ್ಚೆ ನಡೆಸಲು ಒಪ್ಪುತ್ತದೆಯೇ ಅಥವಾ ಇಲ್ಲವೋ ನೋಡಬೇಕಾಗಿದೆ. ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದರಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟಗಳಿಂದ ಪಾರಾಗಿ ಹೊರಗೆ ಬರಲು ಇನ್ನೂ ಹಲವು ವರ್ಷಗಳು ಬೇಕಾಗುತ್ತದೆ. ಅರ್ಥಿಕ ಪರಿಸ್ಥಿತಿಯೂ ದುಸ್ಥಿತಿಯಲ್ಲಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸೇರಿದಂತೆ ಹಲವು ಕ್ಷೇತ್ರಗಳು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ, ಸರ್ಕಾರ ಸಮರ್ಪಕವಾಗಿ ನೆರವು ನೀಡಲು ಮುಂದಾಗಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಾಯ್ದೆಗಳನ್ನು ತಡೆಹಿಡಿಯುವ ಅಧಿಕಾರ ಸರ್ಕಾರಕ್ಕಿದೆಯೇ?: ತಜ್ಞರ ಪ್ರಶ್ನೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here