Homeಕರ್ನಾಟಕನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ

ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ

ಸರ್ಕಾರ ಕೇವಲ ಸರ್ವಪಕ್ಷಗಳ ಸಭೆ ಕರೆದರೆ ಸಾಲದು. ಆ ಸಭೆಯಲ್ಲಿ ನೀಡುವ ಸಲಹೆಗಳನ್ನು, ತೆಗೆದುಕೊಂಡ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಬೇಕು. ಕಳೆದ 3 ತಿಂಗಳಿನಿಂದ ನಾವು ನೀಡಿರುವ ಒಂದು ಸಲಹೆಯನ್ನೂ ಕಾರ್ಯರೂಪಕ್ಕೆ ತಂದಿಲ್ಲ.

- Advertisement -
- Advertisement -

ನೆರೆಯ ಕೇರಳ ಸರ್ಕಾರ ಕೊರೋನ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ಆದರೆ, ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು ಎಂದು ಅವರು ಆರೋಪಿಸಿದ್ದಾರೆ.

ಕೊರೋನಾ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ. ಕೊರೋನಾ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ಸರ್ಕಾರ ಕೇವಲ ಸರ್ವಪಕ್ಷಗಳ ಸಭೆ ಕರೆದರೆ ಸಾಲದು. ಆ ಸಭೆಯಲ್ಲಿ ನೀಡುವ ಸಲಹೆಗಳನ್ನು, ತೆಗೆದುಕೊಂಡ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಬೇಕು. ಕಳೆದ 3 ತಿಂಗಳಿನಿಂದ ನಾವು ನೀಡಿರುವ ಒಂದು ಸಲಹೆಯನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಸರ್ಕಾರದ ಅವ್ಯವಸ್ಥೆಗೆ ಬಡ, ಮಧ್ಯಮ ವರ್ಗದ ಜನರು ಈಗ ಜೀವ ತೆರಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Corona vaccine ಬರ್ತಾಇದೇ, ಅದು ಯಾಕೆ ಬರ್ತಾಯಿಲ್ಲ ನನಗೆ ಗೊತ್ತಾಗುತ್ತ ಇಲ್ಲ. ನೂರಾರು ದೇಶಗಳು, ಸಾವಿರಾರು scientists, ಆದರೂ corona virus ಗೆ ಇಲ್ಲಾ vaccine.
    ಇದರಲ್ಲಿ ಏನೋ ಗುಟ್ಟು ಅಡಗಿದೆ, ಜನರ ಪ್ರಾಣ ಜೊತೆ ಆಟ ಆಡುವವರನ್ನ ಬೆತ್ತಲೆ ಮಾಡುವ ಯಾವ TV, ಪತ್ರಿಕೆ ಇಲ್ಲವಾ??

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...