Homeಕರೋನಾ ತಲ್ಲಣರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ...

ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

- Advertisement -
- Advertisement -

ನಮ್ಮ ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದೇ ಕೋವಿಡ್ ವಿರುದ್ಧ ಹೋರಾಟದಲ್ಲಿ ಬಹುದೊಡ್ಡ ಅಡ್ಡಿ ಎಂಬುದು ಈ ಒಂದು ವರ್ಷದಲ್ಲಿ ನಮಗೆ ಗೊತ್ತಾಗಿದೆ. ದೇಶದಂತೆಯೇ ಕರ್ನಾಟಕವು ಸಹ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ನಿರ್ಲಕ್ಷ್ಯ ಮಾಡಿದುದರ ಪರಿಣಾಮವಾಗಿ ಇಂದು ಬಹುದೊಡ್ಡ ಹೊಡೆತ ಅನುಭವಿಸಬೇಕಾದ ಪರಿಸ್ಥಿತಿ ಬಂದಿದೆ.

‘ಈ ರಾಜ್ಯದ ಅರ್ಧಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದೂ ಸರ್ಕಾರಿ ಮೆಡಿಕಲ್ ಕಾಲೇಜೇ ಇಲ್ಲ. ಇಂತಹ ಮೆಡಿಕಲ್ ಕಾಲೇಜು ಮತ್ತು ಅವಕ್ಕೆ ಹೊಂದಿಕೊಂಡ ಆಸ್ಪತ್ರೆಗಳೇ ಬಡವರ ಪಾಲಿಗೆ ಜೀವ ಸಂಜೀವಿನಿ. ಇವತ್ತು ಈ ಕೊರತೆಯೇ ರಾಜ್ಯದಲ್ಲಿ ಹೆಚ್ಚಿನ ಕೋವಿಡ್ ಸಾವುಗಳಿಗೆ ಕಾರಣ’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಸಂಸ್ಥಾಪಕ ರವಿ ಕೃಷ್ಣಾರೆಡ್ಡಿ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, ‘ಇಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಪ್ರಮುಖ ಜಿಲ್ಲಾಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ (ಇದರ ಅಡಿಯೇ ಬರುವ ದೊಡ್ಡಬಳ್ಳಾಪುರದಲ್ಲಿ ಡಿಸಿ ಕಚೇರಿಯಿದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ), ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಉಡುಪಿ, ಮಂಗಳೂರು, ಚಿಕ್ಕಮಗಳೂರು ಇಲ್ಲೆಲ್ಲ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲವೇ ಇಲ್ಲ. ಕೊರೊನಾ ರೋಗಿಗಳಿಗೆ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವೇ? ಜಿಲ್ಲಾ ಸರ್ಕಾರಿ ಆಸ್ಪತ್ರೆ, ತಾಲೂಕಾ ಆಸ್ಪತ್ರೆಗಳಲ್ಲಿ ಅರೆಬರೆ ಸೌಲಭ್ಯ ಇವೆಯಷ್ಟೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಭಧ್ರ ಶಕ್ತಿಗಳು ಅಂದರೆ ಯಾರು ಎಂದು ಅವರನ್ನು ಕೇಳಿದಾಗ, ‘ಮೇಲಿನ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಬರದಂತೆ ತಡೆದವರು ಎಲ್ಲ ಪಕ್ಷಗಳ ಪ್ರಮುಖ ಭ್ರಷ್ಟ ರಾಜಕಾರಣಿಗಳು ಮತ್ತು ಮಠಗಳ ಹೆಸರಲ್ಲಿ, ಜಾತಿ ಹೆಸರಲ್ಲಿ ಆರೋಗ್ಯ ದಂಧೆ (ಹೆಲ್ತ್ ಬ್ಯುಸಿನೆಸ್) ಮಾಡುವ ಜನರು. ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ್,  ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ, ಕರಾವಳಿಯಲ್ಲಿ ಮಣಿಪಾಲ್ ಪೈಗಳು, ವಿಜಯಪುರದಲ್ಲಿ ಎಂ.ಬಿ ಪಾಟೀಲ್ ಕುಟುಂಬ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ನೇತೃತ್ವದ ಬಸವೇಶ್ವರ ವಿದ್ಯಾವರ್ಧಕ ಸಂಘ, ಚಿತ್ರದುರ್ಗದಲ್ಲಿ ಮಠವೊಂದರ ಹಿತಾಸಕ್ತಿ…. ಹೀಗೆ ಈ ಲಾಬಿ ಅಥವಾ ಮಾಫಿಯಾ ಗ್ಯಾಂಗ್ ತಮ್ಮ ಕಾಲೇಜು-ಆಸ್ಪತ್ರೆಗಳ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗಳು ತಮ್ಮ ಜಿಲ್ಲೆಗಳಿಗೆ ಬರದಂತೆ ತಡೆದಿವೆ’ ಎಂದು ವಿವರಿಸಿದರು.

ಈಗ ದಾವಣಗೆರೆ, ತುಮಕೂರು, ಉಡುಪಿ, ಮಣಿಪಾಲ್, ಮಂಗಳೂರು ಇತ್ಯಾದಿ ಕಡೆ ಇರುವ ಖಾಸಗಿ ಆಸ್ಪತ್ರೆಗಳು ಕೊರೊನಾ ಬಿಕ್ಕಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲವೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ರವಿ ರೆಡ್ಡಿ, ‘ಮಾಡ್ತಾ ಇವೆ. ಬಡವರಿಗೆ ಇರಲಿ, ಮಧ್ಯಮವರ್ಗದವರಿಗೂ ಆ ಆಸ್ಪತ್ರೆಗಳ ವೆಚ್ಚ ಭರಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.

‘ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನವೇ ಕಡಿಮೆಯಿದೆಯಲ್ಲ?’ ಎಂದು ಕೇಳಿದಾಗ, ‘ಈ ದೇಶದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಎಂದೂ ಸಮರ್ಪಕ ಬಜೆಟ್ ಸಿಕ್ಕಿಲ್ಲ. ನನಗೆ ತಿಳಿದ ಮಟ್ಟಿಗೆ ಹಿಂದೆ ಪಶ್ಚಿಮ ಬಂಗಾಳದ ಎಡಪಂಥೀಯ ಸರ್ಕಾರ ಮತ್ತು ಕೇರಳದಲ್ಲಿರುವ ಎಡಪಂಥೀಯ ಸರ್ಕಾರಗಳು ಮಾತ್ರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡುತ್ತ ಬಂದಿವೆ. ಇತ್ತೀಚಿನ ವರ್ಷಗಳಲ್ಲಿ ದೆಹಲಿ ಆಪ್ ಸರ್ಕಾರ ಕೂಡ ಗಮನಾರ್ಹ ಸಾಧನೆ ಮಾಡಿದೆ’ ಎಂದ ರವಿಕೃಷ್ಣಾ ರೆಡ್ಡಿ, ‘ಕೇಂದ್ರ ಸರ್ಕಾರ ಆಗಾಗ ತಾನು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ನೀಡುತ್ತಿದೆ ಎಂದು ತುತ್ತೂರಿ ಊದುತ್ತಿದೆ. ಆದರೆ ಪರಿಸ್ಥಿತಿ ಗಂಭೀರವಾದಾಗ, ಆರೋಗ್ಯ ರಾಜ್ಯಗಳ ವಿಷಯ (ಸ್ಟೇಟ್ ಸಬ್ಜೆಕ್ಟ್) ಎಂದು ಕೈ ತೊಳೆದುಕೊಳ್ಳುತ್ತಿದೆ’ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರಿದರು.

‘ನಾನು ಕರ್ನಾಟಕದಾದ್ಯಂತ ಪ್ರವಾಸ ಮಾಡಿದ್ದೇನೆ. ಕೇರಳದಲ್ಲಿ ಓಡಾಡಿದ್ದರೂ ಅಲ್ಲಿನ ಆಸ್ಪತ್ರೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಆದರೆ ಅಧಿಕೃತ ಅಂಕಿಸಂಖ್ಯೆಗಳ ಪ್ರಕಾರ, ಕೇರಳ ಈ ಬಿಕ್ಕಟ್ಟಿನ ಸಮಯದಲ್ಲಿ ನಮಗಿಂತಲೂ ಅದ್ಭುತ ಸಾಧನೆ ಮಾಡಿದೆ. ಆಡಳಿತ ನಡೆಸುವವರು ಜೀವಪರ ವ್ಯಕ್ತಿಯೇ ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ಕೇರಳದ ಆರೋಗ್ಯ ಸಚಿವೆ ಶೈಲಜಾ ಟೀಚರ್ ನಮಗೆ ಮಾದರಿ ಆಗುತ್ತಾರೆ. ಇಲ್ಲಿಯ ಸಚಿವರಿಂದ ಜನ ಏನನ್ನು ನಿರೀಕ್ಷಿಸಲು ಸಾಧ್ಯ? ಎಂದರು.

‘ನಿರ್ಮಾಣ ಅಂದರೆ ಬೃಹತ್ ರಸ್ತೆ, ರಿಂಗ್‌ರೋಡ್, ಸರ್ಕಾರಿ ಭವನಗಳಿಗೆ ನೀಡುವ ಬಜೆಟ್ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕು. ಈ ದೇಶದ ಜೀವಾಳವಾದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ನಮ್ಮ ಪಕ್ಷದ ನಿಲುವು’ ಎಂದು ರವಿ ಕೃಷ್ಣಾರೆಡ್ಡಿ ಹೇಳಿದರು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶಿಕ್ಷಣ ಮತ್ತು ಆರೋಗ್ಯ, ಈ ಎರಡೂ ಕ್ಷೇತ್ರಗಳು ಸಂಪೂರ್ಣ ರಾಷ್ಟ್ರೀಕರಣ ಆಗಬೇಕು. ಆಗ ಮಾತ್ರ ಈ ದೇಶದ ಬಡವರ ಬದುಕು ಹಸನಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...