Homeಮುಖಪುಟಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

- Advertisement -
- Advertisement -

ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿಯನ್ನು ಉತ್ತೇಜಿಸಲು ‘ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ’ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿದ್ದರೂ, ಉತ್ತರ ಭಾರತದಲ್ಲಿ ‘ಉತ್ತರ ಭಾರತ ತಮಿಳು ಪ್ರಚಾರ ಸಭಾ’ ಏಕೆ ಸ್ಥಾಪಿಸಲಿಲ್ಲ? ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಸ್ಟಾಲಿನ್ “ದಕ್ಷಿಣ ಭಾರತೀಯರು ಹಿಂದಿ ಕಲಿಯುವಂತೆ ಮಾಡಲು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯನ್ನು ಸ್ಥಾಪಿಸಿ ಒಂದು ಶತಮಾನ ಕಳೆದಿದೆ. ಈ ಅವಧಿಯಲ್ಲಿ ಉತ್ತರ ಭಾರತದಲ್ಲಿ ಎಷ್ಟು ಉತ್ತರ ಭಾರತ ತಮಿಳು ಪ್ರಚಾರ ಸಭೆಗಳನ್ನು ಸ್ಥಾಪಿಸಲಾಗಿದೆ? ಸತ್ಯವೆಂದರೆ, ಉತ್ತರ ಭಾರತೀಯರು ತಮಿಳು ಅಥವಾ ಯಾವುದೇ ದಕ್ಷಿಣ ಭಾರತೀಯ ಭಾಷೆಯನ್ನು ‘ಸಂರಕ್ಷಿಸುವ ಸಲುವಾಗಿ ಕಲಿಯಬೇಕೆಂದು ನಾವು ಎಂದಿಗೂ ಒತ್ತಾಯಿಸಿಲ್ಲ. ನಮ್ಮ ಮೇಲೆ ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಂದು ಮಾತ್ರ ನಾವು ಕೇಳಿಕೊಳ್ಳುತ್ತಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳು ಮೂರು ಅಥವಾ 30 ಭಾಷೆಗಳನ್ನು ಕಲಿಸಲಿ, ಅದು ಅವರಿಗೆ ಬಿಟ್ಟಿದ್ದು, ಆದರೆ, ತಮಿಳುನಾಡನ್ನು ಬಿಟ್ಟುಬಿಡಿ!” ಎಂದು ಬರೆದುಕೊಂಡಿದ್ದಾರೆ.

ತಮಿಳುನಾಡು ಮತ್ತು ದಕ್ಷಿಣದ ಇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ತಮ್ಮ ವಿರೋಧವನ್ನು ಪುನರುಚ್ಚರಿಸಿದ ಸಿಎಂ ಸ್ಟಾಲಿನ್, “ಉತ್ತರದ ರಾಜ್ಯಗಳು ತಮಿಳು ಕಲಿಯಬೇಕೆಂದು ತಮಿಳುನಾಡು ಎಂದಿಗೂ ಒತ್ತಾಯಿಸಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಉತ್ತರ ಭಾರತದ ವಿದ್ಯಾರ್ಥಿಗಳು ಕೇವಲ ಎರಡು ಭಾಷೆಗಳನ್ನು ಕಲಿಯಬೇಕಾದರೆ, ದಕ್ಷಿಣ ಭಾರತದ ವಿದ್ಯಾರ್ಥಿಗಳು ಮಾತ್ರ ಮೂರನೇ ಭಾಷೆಯನ್ನು ಕಲಿಯುವಂತೆ ಒತ್ತಾಯಿಸುತ್ತಿರುವುದು ಏಕೆ? ಎಂದು ಕೇಂದ್ರದ ತ್ರಿಭಾಷಾ ನೀತಿಯನ್ನು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಮತ್ತೊಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ತಮಿಳುನಾಡಿನಲ್ಲಿ ಮೂರನೇ ಭಾಷೆಗಾಗಿ ಆಗ್ರಹಿಸುತ್ತಿರುವವರನ್ನು ಟೀಕಿಸಿಸಿದ್ದು, “ಕೆಲವು ಓರೆ ನೀತಿಗಳ ರಕ್ಷಕರು, ತೀವ್ರ ಕಳವಳದಿಂದ ಅಳುತ್ತಾ, ‘ತಮಿಳುನಾಡಿನ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಅವಕಾಶವನ್ನು ಏಕೆ ನಿರಾಕರಿಸುತ್ತಿದ್ದೀರಿ?’ ಎಂದು ಕೇಳುತ್ತಿದ್ದಾರೆ. ಹಾಗಾದರೆ, ಸರಿ, ಉತ್ತರದಲ್ಲಿ ಯಾವ ಮೂರನೇ ಭಾಷೆಯನ್ನು ಕಲಿಸಲಾಗುತ್ತಿದೆ ಎಂದು ಅವರು ಏಕೆ ಹೇಳುತ್ತಿಲ್ಲ? ಉತ್ತರ ಭಾರತದವರು ಎರಡು ಭಾಷೆಗಳನ್ನು ಕಲಿಯುವಾಗ, ನಾವು ಮೂರನೇ ಭಾಷೆಯನ್ನು ಕಲಿಯುವ ಅಗತ್ಯ ಏನಿದೆ?” ಎಂದು ಕೇಳಿದ್ದಾರೆ.

“ಎನ್‌ಇಪಿ ಜಾರಿಗೆ ತಂದರೆ ತಮಿಳುನಾಡು 2 ಸಾವಿರ ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ. ಕೇಂದ್ರ ಸರ್ಕಾರ 10 ಸಾವಿರ ಕೋಟಿ ಕೊಟ್ಟರೂ, ನಾವು ಹೊಸ ಶಿಕ್ಷಣ ನೀತಿಯನ್ನು ತಮಿಳುನಾಡಿನಲ್ಲಿ ಜಾರಿಗೊಳಿಸುವುದಿಲ್ಲ” ಎಂದು ಇತ್ತೀಚೆಗೆ ಸಿಎಂ ಸ್ಟಾಲಿನ್ ಹೇಳಿದ್ದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನೂ ಟೀಕಿಸಿದ್ದ ಸ್ಟಾಲಿನ್, “ಅವರು ಎನ್‌ಇಪಿ ಮೂಲಕ ಹಿಂದಿ ಹೇರಿಕೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದರು.

ಭಾಷಾ ಅಭಿವೃದ್ಧಿಗೆ ನಿಧಿ ಹಂಚಿಕೆ ಮಾಡುವಲ್ಲಿನ ತಾರತಮ್ಯವನ್ನು ಸಿಎಂ ಸ್ಟಾಲಿನ್ ಎತ್ತಿ ತೋರಿಸಿದ್ದು, “8 ಕೋಟಿ ಜನರು ತಮಿಳು ಮಾತನಾಡುತ್ತಾರೆ. ಆದರೆ, ಕೇಂದ್ರ ಸರ್ಕಾರ ಅದರ ಅಭಿವೃದ್ಧಿಗೆ ಕೇವಲ 74 ಕೋಟಿ ರೂ.ಗಳನ್ನು ಮಾತ್ರ ಮೀಸಲಿಟ್ಟಿದೆ. ಆದರೆ, ಕೆಲವೇ ಸಾವಿರ ಜನರು ಮಾತನಾಡುವ ಸಂಸ್ಕೃತಕ್ಕೆ 1,488 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ” ಎಂದಿದ್ದಾರೆ.

“ತಮಿಳುನಾಡು ಸರ್ಕಾರ ಎನ್‌ಇಪಿ ಮತ್ತು ತ್ರಿಭಾಷಾ ನೀತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ದ್ವಿಭಾಷಾ ವ್ಯವಸ್ಥೆಯಾದ ತಮಿಳು ಮತ್ತು ಇಂಗ್ಲಿಷ್‌ಗೆ ಆದ್ಯತೆ ನೀಡಿದೆ. ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಕೂಡ ಈ ನಿಲುವನ್ನು ಬೆಂಬಲಿಸಿದೆ” ಎಂದು ಸಿಎಂ ಸ್ಟಾಲಿನ್ ತಿಳಿಸಿದ್ದಾರೆ.

ಈ ನಡುವೆ, ಸಿಎಂ ಸ್ಟಾಲಿನ್ ಅವರು ರಾಜಕೀಯಕ್ಕಾಗಿ ಎನ್‌ಇಪಿ ಕುರಿತು ತಪ್ಪು ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿದ್ಯಾರ್ಥಿಗಳ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿ ಶ್ರೀ ಶಾಲೆಗಳ ಯೋಜನೆಯೊಂದಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ನಿಧಿಯನ್ನು ಜೋಡಿಸುವುದನ್ನು ಆಕ್ಷೇಪಿಸಿ ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ನಂತರ ಪ್ರಧಾನ್ ಅವರ ಪ್ರತಿಕ್ರಿಯೆ ಬಂದಿದೆ.

ಪ್ರಧಾನ ಮಂತ್ರಿ ಶ್ರೀ ಶಾಲೆ ಮತ್ತು ಎಸ್‌ಎಸ್‌ಎ ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳಾಗಿದ್ದು, ಇವುಗಳನ್ನು ಲಿಂಕ್ ಮಾಡುವುದು ಅನ್ಯಾಯ ಎಂದು ಸ್ಟಾಲಿನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದರು. ಎನ್‌ಇಪಿ ಜೊತೆ ಸೇರಿಸದೆ ಎಸ್‌ಎಸ್‌ಎ ಯೋಜನೆಯ ಹಣವಾದ 2,152 ಕೋಟಿ ರೂ.ಗಳನ್ನು ತಮಿಳುನಾಡಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದ್ದರು.

ರಾಜ್ಯಗಳು ತಾವು ಹೇಳಿದಂತೆ ಕೇಳಲು ಕೇಂದ್ರ ಸರ್ಕಾರ ಅನುದಾನ ಹಂಚಿಕೆಯನ್ನು ಒಂದು ಅಸ್ತ್ರವಾಗಿ ಬಳಸುತ್ತಿದೆ. ಇದು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ವಿರುದ್ದ ಎಂದು ಸ್ಟಾಲಿನ್ ಪತ್ರದಲ್ಲಿ ಹೇಳಿದ್ದರು.

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಕೂಡ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಮತ್ತು ಇತರ ರೀತಿಯಲ್ಲಿ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿದ್ದಾರೆ. ತಮಿಳು ಗುರುತನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...