Homeಮುಖಪುಟಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

ಅರವಿಂದ್ ಕೇಜ್ರಿವಾಲ್‌ನ್ನು ಚುನಾವಣೆಗೆ ಮುನ್ನ ಬಂಧಿಸಿದ್ದು ಏಕೆ? EDಗೆ ಉತ್ತರಿಸುವಂತೆ ಸೂಚಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸಾರ್ವತ್ರಿಕ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವಂತೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದು, ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೂ ಮುನ್ನ ಬಂಧಿಸಿದ್ದು ಏಕೆ? ಎಂದು ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಕೇಳಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ, ನೀವು ಅದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಕೊನೆಯ ಪ್ರಶ್ನೆಯೆಂದರೆ ಸಾರ್ವತ್ರಿಕ ಚುನಾವಣೆಗೆ ಮುನ್ನ ಅವರು ಸೂಚಿಸಿರುವ ಬಂಧನದ ಸಮಯದ ಬಗ್ಗೆ ಉತ್ತರಿಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್‌ ಹೇಳಿದೆ.

ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಪರಾಧದ ಬಗ್ಗೆ ಕುರುಹು ಇಲ್ಲ ಮತ್ತು ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ನೇರವಾಗಿ ಭಾಗಿಯಾಗಿದ್ದಾರೆ ಎಂಬುವುದಕ್ಕೆ ಪುರಾವೆಗಳಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮುಂದಿನ ವಿಚಾರಣೆ ನಡೆಯುವ ಮೇ 3ರ ಶುಕ್ರವಾರದಂದು ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ಈಗ ರದ್ದಾದ ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿದ್ದು, ಮೇ 7ರವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಬಂಧನವಾಗುತ್ತಿದ್ದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಅವರನ್ನು ಸಿಎಂ ಹದ್ದೆಯಿಂದ ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಕೇಜ್ರಿವಾಲ್‌ ಅವರನ್ನು ಸಿಎಂ ಹುದ್ದೆಯಿಂದ ವಜಾಕ್ಕೆ ನಿರಾಕರಿಸಿತ್ತು. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್‌ ಹೇಳಿತ್ತು.

ಇದನ್ನು ಓದಿ: ಮೋದಿಯನ್ನು ಟೀಕಿಸಿದ್ದಕ್ಕೆ ಸ್ವಪಕ್ಷದ ನಾಯಕನ ಬಂಧನ: ಮೌನಕ್ಕೆ ಶರಣಾದ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜ್ಯದ 5,8,9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಇಲಾಖೆ ಆದೇಶ

0
ರಾಜ್ಯದ ಎಲ್ಲಾ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ ಕಾವೇರಿ ಆದೇಶ ಹೊರಡಿಸಿದ್ದು,...