Homeಮುಖಪುಟಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಕುರಿತು ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರಲು ಪ್ರತಿಪಕ್ಷಗಳು ನಿರಂತರವಾಗಿ ಪ್ರಯತ್ನಿಸಿದ್ದರಿಂದ ಮಂಗಳವಾರ ಬೆಳಗ್ಗೆ ಸದನವನ್ನು ಮುಂದೂಡಬೇಕಾಯಿತು. ನಂತರ ಮಧ್ಯಾಹ್ನ 2 ಗಂಟೆಗೆ ಲೋಕಸಭೆಯಲ್ಲಿ ಕಲಾಪವನ್ನು ಪುನರಾರಂಭಿಸಿತು.

2024 ರ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) (ತಿದ್ದುಪಡಿ) ಮಸೂದೆ, 2026 ರ ಕುರಿತು ಲೋಕಸಭೆಯಲ್ಲಿ ಚರ್ಚೆ ಪ್ರಾರಂಭವಾಗಿದೆ. ಇದು ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ಕಾಯ್ದೆ, 2024 ಅನ್ನು ತಿದ್ದುಪಡಿಗೆ ಪ್ರಯತ್ನಿಸುತ್ತದೆ.

ಲೋಕಸಭೆ ಕಾರ್ಯವಿಧಾನಗಳು ಪ್ರಾರಂಭವಾಗುತ್ತಿದ್ದಂತೆ, ಪ್ರಮುಖವಾದ ಮಸೂದೆಯ ಮೇಲಿನ ಚರ್ಚೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸದನದಲ್ಲಿ ಇಲ್ಲದಿರುವುದನ್ನು ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಆಕ್ಷೇಪಿಸಿದರು.

ಸದನದಲ್ಲಿ ಮಾತನಾಡಿದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, “ಈ ಪೀಳಿಗೆಯ ಯುವಕರು ಸ್ಪರ್ಧೆಗೆ ಹೆದರುವುದಿಲ್ಲ, ಭ್ರಷ್ಟಾಚಾರಕ್ಕೆ ಹೆದರುತ್ತಾರೆ. ಯುವಜನರು ವ್ಯವಸ್ಥೆಯನ್ನು ನಂಬುವುದನ್ನು ನಿಲ್ಲಿಸಿದಾಗ, ಪ್ರಜಾಪ್ರಭುತ್ವವು ದುರ್ಬಲಗೊಳ್ಳುತ್ತದೆ. ಈ ಮಸೂದೆಯು 12 ವರ್ಷಗಳ ಕೇಂದ್ರ ಸರ್ಕಾರದ ಅಸಮರ್ಥತೆಯನ್ನು ತೊಳೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಮಸೂದೆಯಲ್ಲಿನ ಲೋಪದೋಷಗಳ ಕುರಿತು ಮಾತನಾಡಿದ ಅಭಿಷೇಕ್ ಬ್ಯಾನರ್ಜಿ, ದೇಶದ ವಿದ್ಯಾರ್ಥಿಗಳನ್ನು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗಿ ಏಕೆ ಪರಿಗಣಿಸಲಾಗುತ್ತಿದೆ? ಯುವಜನರ ವಿರುದ್ಧ ಬಲಪ್ರಯೋಗ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನಿಸಿದರು.

“ಪ್ರತಿ ಪೀಳಿಗೆಯೂ ತನ್ನದೇ ಆದ ರಿಪೋರ್ಟ್ ಕಾರ್ಡ್ ಬರೆಯುತ್ತದೆ. ಪ್ರಸ್ತುತ ಪೀಳಿಗೆ ಬರೆಯುತ್ತಿರುವ ರಿಪೋರ್ಟ್ ಕಾರ್ಡ್‌ನಲ್ಲಿ ಕೇವಲ ಒಂದು ಪದ ಬರೆಯಲಾಗುತ್ತದೆ” ಎಂದು ಬ್ಯಾನರ್ಜಿ ಹೇಳಿದರು.

ಬಿಜೆಪಿ ಮೇಲೆ ಎಸ್‌ಪಿ ಪ್ರತಿದಾಳಿ

ವಿದ್ಯಾರ್ಥಿಗಳ ಮೇಲಿನ ದಾಳಿ ಕುರಿತು ಅಖಿಲೇಶ್ ಯಾದವ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಹೇಳಿಕೆಗಳನ್ನು ಮುಗಿಸುವ ಮೊದಲು, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತುರ್ತು ಪರಿಸ್ಥಿತಿಯನ್ನು ಪ್ರಸ್ತಾಪಿಸುವ ಮೂಲಕ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಕಾನೂನನ್ನು ಪರಿಚಯಿಸುವುದು ಅಥವಾ ತುರ್ತು ಪರಿಸ್ಥಿತಿ ಹೇರುವುದು ಉತ್ತಮವೇ ಎಂದು ರಿಜಿಜು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಅಖಿಲೇಶ್‌, “ವಿದ್ಯಾರ್ಥಿಗಳ ಮೇಲೆ ಬಳಸಲಾದ ಬಲವು ತುರ್ತು ಪರಿಸ್ಥಿತಿಯಲ್ಲಿ ನಡೆದದ್ದಕ್ಕಿಂತ ಕಡಿಮೆಯಿಲ್ಲ” ಎಂದು ಹೇಳಿದರು.

“ದಲಿತರು ಮತ್ತು ಬಡ ವಿದ್ಯಾರ್ಥಿಗಳು ಮುಂದುವರಿಯುವುದನ್ನು ಬಯಸದ ಕಾರಣ ಸರ್ಕಾರವು ಪ್ರಾಥಮಿಕ ಶಾಲೆಗಳನ್ನು ನಿರಂತರವಾಗಿ ಮುಚ್ಚುತ್ತಿದೆ” ಎಂದು ಅಖಿಲೇಶ್ ಯಾದವ್ ಆರೋಪಿಸಿದರು.

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಗೌರವ್ ಗೊಗೊಯ್

ಪೇಪರ್ ಸೋರಿಕೆ ವಿರೋಧಿ ಮಸೂದೆಯ ಬಗ್ಗೆ ಅಸ್ಸಾಂ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ನಿಜವಾದ ಸಮಸ್ಯೆಯನ್ನು ಒಪ್ಪಿಕೊಳ್ಳದ ಬಿಜೆಪಿಯದ್ದು ಕಣ್ಣೊರೆಸುವ ತಂತ್ರ ಎಂದು ಕರೆದರು.

“ಕೇಂದ್ರದ ಪೇಪರ್ ಸೋರಿಕೆ ವಿರೋಧಿ ಕಾನೂನು ಪರೀಕ್ಷಾ ಅಕ್ರಮಗಳನ್ನು ನಿಭಾಯಿಸುವಲ್ಲಿ ಸರ್ಕಾರದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ” ಎಂದು ಗೊಗೊಯ್ ಹೇಳಿಕೊಂಡರು.

“ವಿದ್ಯಾರ್ಥಿಗಳನ್ನು ಬೀದಿಗಿಳಿಯುವಂತೆ ಒತ್ತಾಯಿಸಲಾಗುತ್ತಿದೆ, ಅವರ ನೋವನ್ನು ಅರ್ಥಮಾಡಿಕೊಳ್ಳಬೇಕು” ಎಂದು ಗೊಗೊಯ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

“ಶಿಕ್ಷಣ ಸುಧಾರಣೆಗಳ ಬಗ್ಗೆ ಕೇಂದ್ರ ಸರ್ಕಾರವು ಗಂಭೀರವಾಗಿಲ್ಲ, ಮೋದಿ ತನ್ನ ಸಂಪುಟದ ಮಂತ್ರಿಗಳಿಗೆ ಇನ್‌ಸ್ಟಾಗ್ರಾಮ್‌ ಕಡೆಗೆ ಗಮನಹರಿಸುವಂತೆ ಕೇಳುತ್ತಿದ್ದಾರೆ” ಎಂದು ಅವರು ಆರೋಪಿಸಿದರು.

ಬಳಿಕ, ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಮಸೂದೆಯ ಮೇಲಿನ ಚರ್ಚೆಯನ್ನು ಲೋಕಸಭೆಯಲ್ಲಿ ಆರಂಭಿಸಲಾಯಿತು. ವಿದ್ಯಾರ್ಥಿಗಳು ಮತ್ತು ಯುವಕರ ಕಲ್ಯಾಣವನ್ನು ಕಾಪಾಡುವ ಸರ್ಕಾರದ ಬದ್ಧತೆಯ ಪುನರ್ ದೃಢೀಕರಣ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಮರ್ಥಿಸಿಕೊಂಡರು.

ಭಾರತದ ಇತಿಹಾಸದಲ್ಲಿ ಇದು ಮೊದಲನೆಯದು ಎಂದು ಸಂಸತ್ತನ್ನುದ್ದೇಶಿಸಿ ಮಾತನಾಡಿದ ಸಿಂಗ್, “ಭಾರತೀಯ ಸಂಸತ್ತಿನ ಇತಿಹಾಸದಲ್ಲಿ ಇದು ಒಂದು ಮೈಲಿಗಲ್ಲು ಶಾಸನ” ಎಂದು ಹೇಳಿದರು.

“ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ವ್ಯತ್ಯಾಸಗಳಿಂದಾಗಿ ಕಾಲಾನಂತರದಲ್ಲಿ ರಾಷ್ಟ್ರೀಯ ಗಮನಕ್ಕೆ ಬಂದ ಹಲವಾರು ಪರೀಕ್ಷೆಗಳನ್ನು ಜಿತೇಂದ್ರ ಸಿಂಗ್ ಪಟ್ಟಿ ಮಾಡಿದರು. 2026 ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಇದೇ ಮೊದಲಲ್ಲ” ಎಂದು ಹೇಳಿದರು.

“ಬೇರೆಬೇರೆ ಪಕ್ಷಗಳು ಆಡಳಿತ ನಡೆಸುತ್ತಿರುವ ವಿವಿಧ ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಘಟನೆಗಳು ನಡೆದಿವೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಮಸೂದೆಯು ವಿದ್ಯಾರ್ಥಿಗಳು ಮತ್ತು ಯುವಜನರ ಕಲ್ಯಾಣ ಕಾಪಾಡುವ ಸರ್ಕಾರದ ಬದ್ಧತೆಯ ಪುನರ್ ದೃಢೀಕರಣವಾಗಿದೆ. ಕಾನೂನನ್ನು ಹೆಚ್ಚು ಕಠಿಣಗೊಳಿಸಲು ತಿದ್ದುಪಡಿಯನ್ನು ತರಲಾಗುತ್ತಿದೆ” ಎಂದು ಸಿಂಗ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...