Homeರಾಷ್ಟ್ರೀಯಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

- Advertisement -
- Advertisement -

ನಿವೃತ್ತ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ (ಅನೂಪ್ ಬರನ್ವಾಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಮತ್ತು ಓರ್ಸ್) ನೇಮಕ ಮಾಡುವಲ್ಲಿ ಒಕ್ಕೂಟ ಸರ್ಕಾರವು “ಭಾರಿ ಆತುರ” ಪಡಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಂವಿಧಾನ ಪೀಠವು, ಒಕ್ಕೂಟ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಗೋಯೆಲ್‌ ಅವರ ಮೌಲ್ಯಮಾಪನ ಮತ್ತು ಆಯ್ಕೆ ಮಾಡಲಾಗಿದೆ ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರುಣ್ ಗೋಯೆಲ್ ನೇಮಕಾತಿ ಕಡತವನ್ನು ನವೆಂಬರ್ 18 ರಂದು ಮುಂದೆ ತರಲಾಗಿದೆ. ಇದರ ನಂತರ ಹೆಸರುಗಳನ್ನು ಪರಿಶೀಲಿಸಲಾಗುತ್ತದೆ. ನಂತರ ಪ್ರಧಾನಿ ಬರುತ್ತಾರೆ… ಸಾಮಾನ್ಯವಾಗಿ ಇಷ್ಟು ತರಾತುರಿಯಲ್ಲಿ ನೇಮಕ ಮಾಡಲಾಗುತ್ತದೆಯೇ” ಎಂದು ನ್ಯಾಯಮೂರ್ತಿ ಜೋಸೆಫ್ ಅವರು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರನ್ನು ಕೇಳಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

“ಗೋಯೆಲ್ ಅವರ ನೇಮಕವನ್ನು ನವೆಂಬರ್ 18 ರಂದು ಒಂದೇ ದಿನದಲ್ಲಿ ಮಾಡಿದ್ದೀರಿ. ಈ ಬಗ್ಗೆಗಿನ ಕಡತವು ಅದನ್ನು ಸೂಚುಸುತ್ತಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಕಾರ್ಯಾಂಗವು ಅಧಿಕಾರ ಅನುಭವಿಸುತ್ತದೆ ಎಂಬ ಕಾರಣಕ್ಕೆ ಭಾರತದ ಸಂವಿಧಾನದ 324(2)ನೇ ವಿಧಿಯನ್ನು ಉಲ್ಲಂಘಿಸಿ ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಗೋಯೆಲ್ ಅವರು ನವೆಂಬರ್ 18ರ ಶುಕ್ರವಾರದಂದು ತಮ್ಮ ಹಿಂದಿನ ಪೋಸ್ಟಿಂಗ್‌ನಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ನವೆಂಬರ್ 19 ರಂದು ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು ಮತ್ತು ನವೆಂಬರ್ 21 ರಂದು ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ: ನವ್ಲಾಖಾ ಗೃಹಬಂಧನದ ವಿರುದ್ಧ ಎನ್‌ಐಎ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಹಿಂದಿನ ಆದೇಶ ಜಾರಿಗೆ ಸೂಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ)ದ ನೇಮಕಾತಿಗಳಿಗೆ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಬಾಕಿ ಇರುವಾಗ ಈ ನೇಮಕಾತಿಯನ್ನು ಮಾಡಲಾಗಿತ್ತು. ಹೀಗಾಗಿ ಗೋಯೆಲ್ ಅವರನ್ನು ಚುನಾವಣಾ ಆಯುಕ್ತವಾರಿ ನೇಮಿಸಿದ್ದಕ್ಕೆ ಸಂಬಂಧಿಸಿದ ಕಡತವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಬುಧವಾರ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಒಕ್ಕೂಟ ಸರ್ಕಾರವು ಕಡತಗಳನ್ನು ಹಾಜರುಪಡಿಸಿದ್ದು, ಪೀಠವು ಇಂದು ಪರಿಶೀಲಿಸಲು ಮುಂದಾಯಿತು.

“ನಿಮ್ಮ ಮೊದಲ ಪುಟದ ಪ್ರಕಾರ, ಈ ಹುದ್ದೆಯು ಮೇ 15 ರಿಂದ ಖಾಲಿಯಾಗಿದೆ. ಮೇ ನಿಂದ ನವೆಂಬರ್‌ ತಿಂಗಳ ವರೆಗೆ ಕಾದು, ನವೆಂಬರ್‌ನಲ್ಲಿ ಎಲ್ಲವನ್ನೂ ಸೂಪರ್‌ಫಾಸ್ಟ್ ಆಗಿ ಮಾಡಬೇಕು ಎಂದು ಸರ್ಕಾರಕ್ಕೆ ಯಾಕೆ ಅನಿಸಿತು ಎಂದು ನಮಗೆ ಹೇಳಬಹುದೇ. ಎಲ್ಲಿ ಇಚ್ಛೆ ಇರುತ್ತದೋ ಅಲ್ಲಿ ದಾರಿ ಇರುತ್ತದೆ ಎಂದು ನಮಗೆ ತಿಳಿದಿದೆ” ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

“ಅದೇ ದಿನ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಕೇವಲ 24 ಗಂಟೆಗಳಲ್ಲಿ ಯಾವ ರೀತಿಯ ಮೌಲ್ಯಮಾಪನ ನಡೆದಿದೆ” ಎಂದು ನ್ಯಾಯಾಲಯ ಪ್ರಶ್ನಿಸಿದೆ.

“ಸರಿಯಾದ ಪ್ರಕ್ರಿಯೆಗಳೊಂದಿಗೆ ಹೆಸರನ್ನು ಪರಿಗಣಿಸಲಾಗಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. 12 ಅಥವಾ 24 ಗಂಟೆಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ ಎಷ್ಟು ನೇಮಕಾತಿಗಳು ನಡೆಯುತ್ತವೆ? ಇಂತಹ ಪ್ರಶ್ನೆಗಳು ಬೆಳೆಯುತ್ತಲೆ ಹೋಗುತ್ತದೆ. ಅಂತಹ ಎಲ್ಲಾ ನಿದರ್ಶನಗಳನ್ನು ಪಡೆಯಬಹುದೆ” ಎಂದು ಒಕ್ಕೂಟ ಸರ್ಕಾರದ ಪರ ಹಾಜರಾದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದಕ್ಕೆ ಪ್ರಶ್ನಿಸಿದ ನ್ಯಾಯಾಲಯ, ಸೂಚಿಸಿದ ಕಾರ್ಯವಿಧಾನವನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ತಿಳಿಯಲು ಪೀಠ ಬಯಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

“ನೀವು ನೇಮಕಾತಿಯಲ್ಲಿ ಕೈಗೊಂಡ ಪ್ರಕ್ರಿಯೆಯನ್ನು ಮಾತ್ರ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನೀವು ಟಾಸ್ ಹಾಕಿ ಎರಡೂ ಕಡೆ ಬಿದ್ದರೂ ಗೆಲ್ಲುತ್ತೀರಿ. ನಮಗೆ ತಿಳಿದಂತೆ ಅಧಿಕಾರ ಹೊಂದಿರುವ ವ್ಯಕ್ತಿ ನಿಮಗೆ ವಿಧೇಯನಾಗಿದ್ದರೆ ಏನು ಮಾಡುವುದು” ಎಂದು ಜಸ್ಟೀಸ್ ಜೋಸೆಫ್ ಪ್ರಶ್ನಿಸಿದ್ದಾರೆ.‘

“ಅವರು ನಮಗೆ ವಿಧೇಯನೆಂದು ಯಾರಾದರೊಬ್ಬರು ಹೇಳುತ್ತಾರೆ. ಅದು ಅಲ್ಲ ಎಂದು ಇನ್ನೊಬ್ಬ ಹೇಳುತ್ತಾರೆ. ಇವುಗಳಲ್ಲಿ ಕೋರ್ಟ್‌ ಯಾರನ್ನು ಪರಿಗಣಿಸುತ್ತದೆ” ಅಟಾರ್ನಿ ಜನರಲ್‌ ಕೇಳುತ್ತಾರೆ.

“ನಾಲ್ವರಿಗಿಂತ ಮುಂಚಿತವಾಗಿ ಅವರನ್ನು ಹೇಗೆ ಆಯ್ಕೆ ಮಾಡಲಾಗಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಜೋಸೆಫ್ ಪಟ್ಟು ಹಿಡಿದರು.

ಇದನ್ನೂ ಓದಿ: ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

“ಅವರು ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದು, ಸೇರಿದಂತೆ ಇತ್ಯಾದಿ ವಿಚರಗಳನ್ನು ನಾವು ಕಂಡುಕೊಂಡಿದ್ದೇವೆ…ಇದು ಸಾಮಾನ್ಯವೇ? ಸಾಮಾನ್ಯವಾಗಿ ಈ ರೀತಿ ನಡೆಯುತ್ತದೆಯೇ’’ ಎಂದು ನ್ಯಾಯಮೂರ್ತಿ ಬೋಸ್ ಕೇಳಿದ್ದಾರೆ.

ಈ ವೇಳೆ ಉತ್ತರಿಸಿದ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್‌, “ಅವರು ಹೇಗಿದ್ದರೂ ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ” ಎಂದು ಉತ್ತರಿಸಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...