Homeಕರ್ನಾಟಕಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಯಾಕೆ?: ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ...

ಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಯಾಕೆ?: ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ತರಾಟೆ

- Advertisement -
- Advertisement -

”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರಚೋದನೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ಲವೇ?” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು  ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ನಡೆದಕೊಂಡ ರೀತಿಯನ್ನು ನೆನಪಿಸುತ್ತ ಪೊಲೀಸ್ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಅವರು ಕ್ಲಾಸ್ ತಗೆದುಕೊಂಡಿದ್ದಾರೆ. ”ನೀವು ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರಿ ಎನ್ನುವುದು ನಮಗೆ ಗೊತ್ತಿದೆ.  ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕಿಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಾವು ಬಿಡೊಲ್ಲ” ಎಂದು ಹೇಳಿದರು.

”PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ omr ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎನ್ನುವುದು ಅರ್ಥವಾಗುತ್ತದೆ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದ ಪ್ರಿಯಾಂಕ್ ಖರ್ಗೆ ಅವರಿಗೆ ನೀವು ತೊಂದರೆ ಕೊಟ್ಟಿದ್ದೀರಿ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ಹಾಳು‌ ಮಾಡಿದ್ದೀರಿ. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡುವುದೂ ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದರೆ ಅಷ್ಟೇ ಸಾಕು” ಎಂದು ಅಧಿಕಾರಿಕಾರಿಗಳಿಗೆ ತಿಳಿಸಿದ್ದಾರೆ.

”ಈ ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಎನ್ನುವುದು ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ದೀರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿ ತೊಂದರೆ ಕೊಟ್ಟಿದ್ದೀರಿ. ನಮ್ಮನ್ನ, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡುತ್ತೀರಾ? ಆದರೆ ಬಿಜೆಪಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿ ಅವರು ಹೇಳಿದಂತೆ ನಡೆದುಕೊಂಡಿದ್ದೀರಿ” ಎಂದು ಆರೋಪ ಮಾಡಿದರು.

”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ವಾ? ನೀವು ಏನೇನೂ ಮಾಡಿದ್ದೀರಾ ಎನ್ನುವ ಬಗ್ಗೆ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ನೋಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್. ನೀವು ಬದಲಾಗಬೇಕು, ನಿಮ್ಮ ವರ್ತನೆ ಬದಲಾಗಬೇಕು. ಇಲ್ಲದಿದ್ದರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ” ಎಂದು ಅಧಿಕಾರಿಗಳಿಗಳಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಜೀರೊ ಟ್ರಾಪಿಕ್‌ ಸೌಲಭ್ಯ ಬೇಡ ಎಂದ ಸಿಎಂ ಸಿದ್ದರಾಮಯ್ಯ

”ನಾವು ದ್ವೇಷ ಸಾಧಿಸೋದಿಲ್ಲ, ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ, ಜನರ ನೆಮ್ಮದಿ ಕಾಪಾಡಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ಭರವಸೆ ಮೂಡಿಸಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಡಿಕೆಶಿ ಹೇಳಿದ್ದಾರೆ.

ಡಿಸಿ, ಜಿಪಂ ಸಿಇಒಗಳಿಗೂ ಡಿಕೆಶಿ ವಾರ್ನಿಂಗ್

ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ (ಸಿಇಒ) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಡಿಯೋ ಸಂವಾದ ನಡೆಸಿದರು. ನೀವು ಸರಿಯಾಗಿ ಕೆಲಸ ಮಾಡಬೇಕು ಇಲ್ಲದಿದ್ದರೆ ನಾವು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

”ಹಿಂದಿನ ಸರಕಾರದ ಅವಧಿಯಲ್ಲಿ ನಿಮ್ಮ ಕೆಲಸ ವೈಖರಿ ಸರಿ ಇರಲಿಲ್ಲ. ರಾಜ್ಯದ ಜನ ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮಳೆ, ಪ್ರವಾಹದಿಂದ ಸಾಕಷ್ಟು ಬೆಳೆ ನಷ್ಟವಾಗಿದೆ. ಹಲವರು ಪ್ರಾಣವನ್ನೇ ಕಳೆದುಕೊಂಡರು. ಮನೆ ಮಠ ಇಲ್ಲದೇ ನಿರ್ಗತಿಕರಾದರು. ಆದರೆ ನಿಮ್ಮಲ್ಲಿ ಸಾಕಷ್ಟು ಾಧಿಕಾರಿಗಳು ಈ ಅನಾಹುತ ಸಂದರ್ಭದಲ್ಲಿ ಸರಿಯಾಗಿ ಸ್ಪಂದಿಸಲಿಲ್ಲ” ಎಂದು ಗರಂ ಆದರು.

”ಸರಕಾರಕ್ಕೆ ಉತ್ತಮ ಹೆಸರು ತರುವುದು, ಬಿಡುವುದು ನಿಮ್ಮ ಕೈಯಲ್ಲಿಯೇ ಇದೆ. ನೀವು ಸರಿಯಾಗಿ ಕೆಲಸ ಮಾಡಿದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಸರಕಾರ ನಿಮ್ಮಿಂದ ಉತ್ತಮ ಕೆಲಸ ಬಯಸುತ್ತದೆ. ಸರಿಯಾಗಿ ಕೆಲಸ ಮಾಡದಿದ್ದರೆ ನಾವು ಸಹಿಸುವುದಿಲ್ಲ. ನಾವು ಕಠಿಣ ಕ್ರಮ ತೆಗೆದುಕೊಳ್ಳಲು ಅವಕಾಶ ಕೊಡಬೇಡಿ. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ” ಎಂದು ಹೇಳಿದರು.

”ರೈತರಿಗೆ ಅಗತ್ಯ ವಸ್ತುಗಳು ಪೂರೈಕೆ ಆಗುವಂತೆ ನೋಡಿಕೊಳ್ಳಿ. ಸಂಬಂಧ ಪಟ್ಟ ಇಲಾಖೆಗಳಲ್ಲಿ ಶೋಷಣೆ ನಡೆಯದಂತೆ ನೋಡಿಕೊಳ್ಳಿ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮಾರೋಪಾದಿಯಲ್ಲಿ ಕೆಲಸ ಮಾಡಿ. ಸರಕಾರಕ್ಕೆ ಉತ್ತಮ ಹೆಸರು ಬರುವಂತೆ ಕೆಲಸ ಮಾಡಬೇಕು” ಎಂದು ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...