Homeಮುಖಪುಟವಿಕಿಪೀಡಿಯಾ vs ಎಎನ್‌ಐ ಪ್ರಕರಣ | ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ವಿಕಿಪೀಡಿಯಾ vs ಎಎನ್‌ಐ ಪ್ರಕರಣ | ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಏಷ್ಯನ್ ನ್ಯೂಸ್ ಏಜೆನ್ಸಿ (ANI) ಸಂಸ್ಥೆಯ ವಿರುದ್ಧ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಕುರಿತು ವಿಕಿಪೀಡಿಯಾ ಪುಟ ಮತ್ತು ಇತರ ಚರ್ಚೆಗಳನ್ನು ತೆಗೆದುಹಾಕುವಂತೆ ನಿರ್ದೇಶಿಸುವ ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ. “ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆ ಮತ್ತು ಸಿಂಧುತ್ವದ ಬಗ್ಗೆ ನಮಗೆ ಕಳವಳ ಇದೆ” ಎಂದು ಪೀಠವು ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ವಿಕಿಪೀಡಿಯಾ vs ಎಎನ್‌ಐ ಪ್ರಕರಣ

ವಿಕಿಮೀಡಿಯಾ ಫೌಂಡೇಶನ್ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ವಿಕಿಪೀಡಿಯಾ ಪುಟದಲ್ಲಿನ ವಿಷಯವು ನಡೆಯುತ್ತಿರುವ ನ್ಯಾಯಾಲಯದ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂಬ ದೆಹಲಿ ಹೈಕೋರ್ಟ್‌ನ ಅಭಿಪ್ರಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇದೇ ವೇಳೆ ನ್ಯಾಯಾಲಯವು ANI ಗೆ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 4 ರಂದು ಉತ್ತರಿಸಲು ಹೇಳಿದೆ.

ANI ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ವಿಚಾರಣೆ ನಡೆಸುವಾಗ, ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ವಿಭಾಗೀಯ ಪೀಠವು “ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs. ವಿಕಿಮೀಡಿಯ ಫೌಂಡೇಶನ್” ಎಂಬ ಶೀರ್ಷಿಕೆಯ ವಿಕಿಪೀಡಿಯಾ ಪುಟವನ್ನು ತೆಗೆದುಹಾಕುವಂತೆ ನಿರ್ದೇಶಿಸಿತ್ತು. ವಿಕಿಪೀಡಿಯಾ vs ಎಎನ್‌ಐ ಪ್ರಕರಣ

ಪುಟದಲ್ಲಿನ ಕೆಲವು ಹೇಳಿಕೆಗಳು, ವಿಶೇಷವಾಗಿ ಭಾರತದಲ್ಲಿ ವಿಕಿಪೀಡಿಯಾವನ್ನು ಸ್ಥಗಿತಗೊಳಿಸುವಂತೆ ನ್ಯಾಯಾಧೀಶರು ಬೆದರಿಕೆ ಹಾಕಿದ್ದಾರೆ ಎಂಬ ಹೇಳಿಕೆಯು ಪ್ರಾಥಮಿಕವಾಗಿ ನ್ಯಾಯಾಲಯದ ನಿಂದನೆಗೆ ಸಮಾನವಾಗಿದೆ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು. ಪುಟದಲ್ಲಿನ ವಿಷಯ ಮತ್ತು ನಂತರದ ಚರ್ಚೆಗಳು ನ್ಯಾಯಾಲಯದ ವಿಚಾರಣೆಗೆ ಅಡ್ಡಿಪಡಿಸುತ್ತವೆ ಎಂದು ನ್ಯಾಯಾಲಯ ಹೇಳಿತ್ತು.

ನ್ಯಾಯಾಲಯದ ವಿಚಾರಣೆಗಳ ಹೇಳಿಕೆಗಳು ಮತ್ತು ಟೀಕೆಗಳನ್ನು ಅಸಾಮಾನ್ಯವೆಂದು ನೋಡಲಾಗುವುದಿಲ್ಲ ಎಂದು ಸೂಚಿಸಿದ ನ್ಯಾಯಮೂರ್ತಿ ಓಕಾ, “ಈ ನ್ಯಾಯಾಲಯದಲ್ಲಿ, ನಾವು ವಿಷಯಗಳನ್ನು ಹೇಳುತ್ತೇವೆ ಮತ್ತು ಯಾರಾದರೂ ಅದರ ಬಗ್ಗೆ ಹೇಳಿಕೆ ನೀಡಲು ಬಯಸುತ್ತಾರೆ … ಅಂತದ್ದು ನಡೆಯುತ್ತದೆ. ಕೆಲವೊಮ್ಮೆ ಜನರು ನ್ಯಾಯಾಲಯವು ಪೂರ್ವಭಾವಿ ಮನಸ್ಸಿನಿಂದ ಇಲ್ಲಿ ಕುಳಿತಿದೆ ಎಂದು ಹೇಳುತ್ತಾರೆ ಅಥವಾ ನೀವು ವಿಚಾರಣೆಯನ್ನು ಮಾಡುತ್ತಿಲ್ಲ ಎಂದು ಹೇಳುತ್ತಾರೆ. ಜನರು ಇಂತಹ ಮಾತುಗಳನ್ನು ಹೇಳುತ್ತಲೆ ಇರುತ್ತಾರೆ, ಆದರೆ ಅದನ್ನು ನಾವು ಸಹಿಸಿಕೊಳ್ಳಬೇಕಾಗುತ್ತದೆ.” ಎಂದು ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಆದೇಶವನ್ನು ಟೀಕಿಸಿದ ಅವರು, “ವಕೀಲರು ಉತ್ತಮವಾದ ವಾದಗಳನ್ನು ಮಾಡಲು ಕೆಲವೊಮ್ಮೆ ನಾವು ಮುಕ್ತ ನ್ಯಾಯಾಲಯದಲ್ಲಿ ಅನೇಕ ವಿಷಯಗಳನ್ನು ಹೇಳುತ್ತೇವೆ. ಈಗ, ನ್ಯಾಯಾಲಯ ಮೌಖಿಕವಾಗಿ ಏನಾದರೂ ಹೇಳಿದರೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ, ಎಲ್ಲೋ ಒಂದು ಹೇಳಿಕೆ ನೀಡಲ್ಪಟ್ಟರೆ, ಅಂತಹ ಹೇಳಿಕೆಗಳ ಬಗ್ಗೆ ನ್ಯಾಯಾಲಯ ಏಕೆ ಕಟುವಾಗಿ ವರ್ತಿಸಬೇಕು… ನ್ಯಾಯಾಲಯದಲ್ಲಿ ನಡೆಯುವ ವಿಚಾರದ ಬಗ್ಗೆ ಜನರು ಏನನ್ನಾದರೂ ಚರ್ಚಿಸುತ್ತಾರೆ, ಅದಕ್ಕೆ ಹಸ್ತಕ್ಷೇಪಕ್ಕೆ ಮಾಡುವುದು ಸರಿಯೆ?” ಎಂದು ಹೇಳಿದ್ದಾರೆ.

ವಿಕಿಮೀಡಿಯಾ ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ದೆಹಲಿ ಹೈಕೋರ್ಟ್ ಮಾನನಷ್ಟದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಿದೆ ಎಂದು ವಾದಿಸಿದ್ದಾರೆ. ಸಂಬಂಧಪಟ್ಟ ವಿಷಯವು ವಿಕಿಮೀಡಿಯಾದ್ದಲ್ಲ, ಬದಲಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಲೇಖನದಿಂದ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ನ್ಯಾಯಮೂರ್ತಿ ಓಕಾ ANI ವಿರುದ್ಧ ಕೂಡಾ ತೀವ್ರವಾಗಿ ವಾಗ್ದಾಳಿ ನಡೆಸಿದರು. ಈ ವಿಷಯವು ಮಾಧ್ಯಮ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ. ವಿಕಿಮೀಡಿಯಾ ಪುಟದಲ್ಲಿನ ಹೇಳಿಕೆಗಳಿಗೆ ಕಾರಣರಾದ ವ್ಯಕ್ತಿಗಳು ನ್ಯಾಯಾಲಯದಲ್ಲಿ ಇಲ್ಲ ಎಂದು ANI ವಕೀಲರು ವಾದಿಸಿದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಓಕಾ, “ನೀವು ಒಂದು ಪ್ರಮುಖ ಅಂಶವನ್ನು ಕಳೆದುಕೊಂಡಿದ್ದೀರಿ. ಅಂತಿಮವಾಗಿ, ಇದು ಮಾಧ್ಯಮವಾಗಿದ್ದು. ಪ್ರಶ್ನೆಯಿರುವುದು ಮಾಧ್ಯಮದ ಸ್ವಾತಂತ್ರ್ಯದ ಬಗ್ಗೆ ಆಗಿದೆ.” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...