Homeಕರ್ನಾಟಕಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ?: ಎಎಪಿ

ಬಸವರಾಜ್‌ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ?: ಎಎಪಿ

- Advertisement -
- Advertisement -

ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಘಟಕ ಪ್ರಶ್ನಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ಸದಂ, “ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿವೆ. ಮಕ್ಕಳು ಮಹಿಳೆಯರು ಮಾತ್ರವಲ್ಲದೇ ಸಣ್ಣಪುಟ್ಟ ಜನಪ್ರತಿನಿಧಿಗಳು ಕೂಡ ಹೆದರಿಕೆಯಿಂದ ತಿರುಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.

“ಲಾಕ್‌ಡೌನ್‌ ಬಳಿಕ ಅಪರಾಧ ಪ್ರಕರಣಗಳು ಶೇ. 20ರಷ್ಟು ಹೆಚ್ಚಾಗಿದೆ ಎಂದು ಬಸವರಾಜ್‌ ಬೊಮ್ಮಾಯಿಯವರೇ 15 ದಿನಗಳ ಹಿಂದೆ ಒಪ್ಪಿಕೊಂಡಿದ್ದರು. ಆದರೂ ಅಪರಾಧಗಳಿಗೆ ಕಡಿವಾಣ ಹಾಕಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ತನಿಖೆ ನಡೆಸಬೇಕಾಗುತ್ತದೆ ಎಂಬ ಕಾರಣಕ್ಕೆ ಅನೇಕ ಠಾಣೆಗಳಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತೆರಿಗೆ ಹೆಚ್ಚಳದ ವಿರುದ್ದ ದೆಹಲಿಯಲ್ಲಿ ಸಹಿ ಸಂಗ್ರಹ ಮಾಡುತ್ತಿರುವ ಎಎಪಿ; ಬಿಜೆಪಿ ಪ್ರತಿಕ್ರಿಯಿಸಿದ್ದೇನು?

’ಜೂನ್‌ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 703 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಕಳೆದ 35 ದಿನಗಳಲ್ಲಿ ಮಾಜಿ ಜನಪ್ರತಿನಿಧಿ, ಕೂಲಿ ಕಾರ್ಮಿಕ, ಗೃಹಿಣಿ, ಆಟೋ ಚಾಲಕರು ಸೇರಿದಂತೆ ಬೆಂಗಳೂರಿನ 8 ಮಂದಿಯ ಕೊಲೆಯಾಗಿದೆ. ಕಳೆದ ಏಳು ತಿಂಗಳಿನಲ್ಲಿ ರಾಜಧಾನಿಯಲ್ಲಿ 82 ಕೊಲೆ, 22 ಡಕಾಯಿತಿ, 87 ಸರಗಳ್ಳತನ, 219 ದರೋಡೆ, 304 ಲೈಂಗಿಕ ಕಿರುಕುಳ, 521 ಕಳವು ಪ್ರಕರಣ ದಾಖಲಾಗಿವೆ. ಪುಡಿ ರೌಡಿಗಳೂ ಕೂಡ ಕೊಲೆಯಂತಹ ಭೀಕರ ಅಪರಾಧ ಮಾಡುತ್ತಿದ್ದಾರೆ. ಪೊಲೀಸರೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅಪರಾಧಿಗಳು ರಾಜಾರೋಷವಾಗಿ ಹಾಗೂ ಜನಸಾಮಾನ್ಯರು ಹೆದರಿಕೆಯಿಂದ ಬದುಕುವಂತೆ ಮಾಡಿರುವುದೇ ಬೊಮ್ಮಾಯಿಯವರ ಸಾಧನೆ’ ಎಂದು ಜಗದೀಶ್‌ ಸದಂ ಆಕ್ರೋಶ ವ್ಯಕ್ತಪಡಿಸಿದರು.

ಎಎಪಿ ನಾಯಕ ವಿಜಯ್‌ ಶಾಸ್ತ್ರಿಮಠ್‌ ಮಾತನಾಡಿ, “ರಾಜ್ಯದಲ್ಲಿ ಸೈಬರ್‌ ಅಪರಾಧಗಳು ಕೂಡ ಹೆಚ್ಚಾಗುತ್ತಿದೆ. ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು, ಅವರ ಸ್ನೇಹಿತರಿಗೆಲ್ಲ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿ ಹಣ ಕೇಳುವ ದೊಡ್ಡ ಜಾಲವಿದೆ. ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೇರಿದಂತೆ ರಾಜ್ಯದ ಲಕ್ಷಕ್ಕೂ ಅಧಿಕ ಸಾಮಾಜಿಕ ತಾಣ ಬಳಕೆದಾರರು ಇದರಿಂದ ತೊಂದರೆ ಅನುಭವಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಇಂತಹ ಯಾವುದೇ ಪ್ರಕರಣವನ್ನು ಬೇಧಿಸಿಲ್ಲ. ಇದರಿಂದಾಗಿ ಜನರು ಸಾಮಾಜಿಕ ತಾಣಗಳಿಂದ ದೂರವಾಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ” ಎಂದಿದ್ದಾರೆ.

“ಈ ಬಗ್ಗೆ ಮುಖ್ಯಮಂತ್ರಿಗಳು ಕೂಡಲೇ ಉನ್ನತ ಅಧಿಕಾರಿಗಳ ಸಭೆ ಕರೆದು, ಅಪರಾಧಗಳಿಗೆ ಕಡಿವಾಣ ಹಾಕುವ ಬಗ್ಗೆ ಗಂಭಿರವಾಗಿ ಚರ್ಚಿಸಬೇಕು. ಒಂದು ತಿಂಗಳೊಳಗೆ ʻಶೂನ್ಯ ಅಪರಾಧಗಳ ರಾಜ್ಯʼ ಎಂಬ ಖ್ಯಾತಿಗೆ ಕರ್ನಾಟಕ ಪಾತ್ರವಾಗುವಂತೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...