Homeಮುಖಪುಟಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ...

ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

- Advertisement -
- Advertisement -

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ನೆಲೆಯಲ್ಲಿ ಭಾರತಕ್ಕೆ ಮರಳಿ ಕರೆತರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಡಿ.3) ಸುಪ್ರೀಂ ಕೋರ್ಟ್ ಮುಂದೆ ವಾಗ್ದಾನ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠದ ಮುಂದೆ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಹೇಳಿಕೆ ನೀಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಅವರ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆ ತರಲಾಗುವುದು. ಆದರೆ, ಇದು ಕೇವಲ ಮಾನವೀಯ ಆಧಾರದ ಮೇಲೆ ಮಾತ್ರ. ಇದರಿಂದ ನಮ್ಮ ಮೂಲ ವಾದ (merits of the case)ಅಥವಾ ಹಕ್ಕುಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಪ್ರಕರಣದಲ್ಲಿ ನಮ್ಮ ಅಧಿಕೃತ ನಿಲುವು ಬದಲಾಗುವುದಿಲ್ಲ, ಅವರನ್ನು ಭಾರತಕ್ಕೆ ಕರೆತಂದ ನಂತರ ನಾವು ಅವರ ಮೇಲೆ ನಿಗಾ (surveillance)ಇರಿಸುವ ಹಕ್ಕನ್ನೂ ಬಿಟ್ಟುಕೊಡುತ್ತಿಲ್ಲ" ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಮಾನವೀಯ ಆಧಾರದ ಮೇಲೆ ಭಾರತಕ್ಕೆ ಮರಳಿ ಕರೆತರಬಹುದೇ? ಎಂದು ಸೋಮವಾರ ನ್ಯಾಯಾಲಯವು ಸರ್ಕಾರವನ್ನು ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಸ್‌ಜಿ ತುಷಾರ್ ಮೆಹ್ತಾ, ಸರ್ಕಾರದಿಂದ ಸೂಚನೆಗಳನ್ನು ಪಡೆಯುವುದಾಗಿ ಹೇಳಿದ್ದರು. ಅದರಂತೆ ಕೇಂದ್ರ ಸರ್ಕಾರದಿಂದ ಸೂಚನೆಗಳನ್ನು ಪಡೆದು ಇಬ್ಬರನ್ನು ವಾಪಸ್ ಕರೆತರುಲು ಒಪ್ಪಿಕೊಂಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಆಕೆಯ 8 ವರ್ಷದ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆತರುವುದಾಗಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ. ಇಬ್ಬರನ್ನೂ ದೆಹಲಿಯಲ್ಲಿ ವಶಕ್ಕೆ ಪಡೆದ ಕಾರಣ ಅವರನ್ನು ದೆಹಲಿಗೇ ವಾಪಸ್ ಕರೆತರುವುದಾಗಿ ತಿಳಿಸಿದ್ದಾರೆ. ಆದರೆ, ಅರ್ಜಿದಾರರ ಪರ ವಕೀಲರು ಮಹಿಳೆ ಮತ್ತು ಮಗನನ್ನು ಆಕೆಯ ತಂದೆ ವಾಸಿಸುವ ಪಶ್ವಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಪಟ್ಟಣಕ್ಕೆ ಸ್ಥಳಾಂತರಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ" ಎಂದು ಸುಪ್ರೀಂ ಕೋರ್ಟ್ ವಿವರಿಸಿದೆ.

ಮಹಿಳೆ ಗರ್ಭಿಣಿಯಾಗಿರುವ ಹಿನ್ನೆಲೆ ಪಶ್ಚಿಮ ಬಂಗಾಳ ಸರ್ಕಾರ ಆಕೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಬೇಕು. ಅಲ್ಲದೆ, ಆಕೆಯ ಮಗನನ್ನು ಸಹ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುನಾಲಿ ಖಾತೂನ್, ಆಕೆಯ ಮಗ ಸಬೀರ್ ಸೇರಿದಂತೆ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿರುವ 6 ಮಂದಿಯನ್ನು ವಾಪಸ್ ಕರೆತರುವಂತೆ ಸೆಪ್ಟೆಂಬರ್ 27ರಂದು ಕಲ್ಕತ್ತಾ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಇದರ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಆ ಆರ್ಜಿಯ ವಿಚಾರಣೆ ನಡೆಯುತ್ತಿದೆ.

ಸುನಾಲಿ ಅವರ ತಂದೆ ಭೋದು ಶೇಖ್ ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು. ನನ್ನ ಮಗಳು, ಅಳಿಯ ಮತ್ತು ಮೊಮ್ಮಗನನ್ನು ಸುಳ್ಳು ಆರೋಪದ ಮೇಲೆ ಬಂಧಿಸಿ ಗಡಿಪಾರು ಮಾಡಿದ್ದಾರೆ. ದಯಮಾಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಕೇಳಿಕೊಂಡಿದ್ದರು. ನಾನು ಪಶ್ಚಿಮ ಬಂಗಾಳದ ಖಾಯಂ ನಿವಾಸಿ. ನನ್ನ ಮಗಳು, ಅಳಿಯನೂ ಭಾರತದಲ್ಲಿ ಹುಟ್ಟಿ ಬೆಳೆದವರು. ನಮ್ಮ ಕುಟುಂಬ ತಲೆತಲಾಂತರದಿಂದ ಪಶ್ಚಿಮ ಬಂಗಾಳದಲ್ಲೇ ಇದೆ. ಕೆಲಸಕ್ಕಾಗಿ ಮಾತ್ರ ಮಗಳು, ಅಳಿಯ ದೆಹಲಿಗೆ ಹೋಗಿದ್ದರು ಎಂದು ಭೋದು ಶೇಖ್ ಹೇಳಿದ್ದರು.

ಇಂದು, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಗಡಿಪಾರು ಮಾಡಲಾದ ಇತರ ನಾಲ್ವರು ವ್ಯಕ್ತಿಗಳನ್ನು ವಾಪಸ್ ಕರೆ ತರುವ ಬಗ್ಗೆ ಕೇಂದ್ರದಿಂದ ಸೂಚನೆಗಳನ್ನು ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಜಿ ತುಷಾರ್ ಮೆಹ್ತಾ, ಗಡಿಪಾರಾದವರು ಬಾಂಗ್ಲಾದೇಶಿಗರು, ಅವರನ್ನು ವಾಪಸ್ ಕರೆತರುವುದಕ್ಕೆ ಕೇಂದ್ರ ಸರ್ಕಾರದ ತೀವ್ರ ಆಕ್ಷೇಪವಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಕೆವಿಯಟ್ (ಮುಂಚಿತ ಎಚ್ಚರಿಕೆ ಅರ್ಜಿ) ಹಾಕಿ, ಆ ವ್ಯಕ್ತಿಗಳಿಗೆ ರಕ್ಷಣೆಯನ್ನು ಕೋರುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದ್ದಾರೆ.

ಅರ್ಜಿದಾರ ಬೋಧು ಶೇಕ್ ಪರ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದಾರೆ. ವಿಚಾರಣೆ ವೇಳೆ ನ್ಯಾಯಮೂರ್ತಿ ಬಾಗ್ಚಿ ಅವರು, ಸುನಾಲಿ ಖಾತೂನ್ ಭೋದು ಶೇಖ್ (ಭಾರತೀಯ ಪ್ರಜೆ) ಅವರೊಂದಿಗೆ ಜೈವಿಕ ಸಂಬಂಧವನ್ನು ಸಾಬೀತು ಮಾಡಬಹುದು ಎಂದಾದರೆ, ಅವರು ಭಾರತೀಯ ನಾಗರಿಕತ್ವವನ್ನೂ ಸಾಬೀತು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮೇಲ್ವಿಚಾರಕರ ಕಿರುಕುಳದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಎಲ್‌ಒ; ಸಹೋದ್ಯೋಗಿಗಳಿಂದ ಪ್ರತಿಭಟನೆ

ತೀವ್ರ ಕಳವಳಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಮೀರತ್‌ನಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯದಲ್ಲಿ ತೊಡಗಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುರಳಿಪುರ ನಿವಾಸಿ 25...

ಮುಟ್ಟಿನ ರಜೆ : ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಹೋಟೆಲ್ ಸಂಘ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...