Homeಮುಖಪುಟಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟು ಪರಿಹರಿಸಲು ಮುಂದಾದ ಕಾಂಗ್ರೆಸ್

ಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟು ಪರಿಹರಿಸಲು ಮುಂದಾದ ಕಾಂಗ್ರೆಸ್

- Advertisement -
- Advertisement -

ಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟಿಗೆ ಪರಿಹಾರವನ್ನು ಕಂಡುಕೊಳ್ಳುವ ಭರವಸೆಯನ್ನು ಕಾಂಗ್ರೆಸ್ ಹೊಂದಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದು, ಮಮತಾ ಮನವೊಲಿಕೆಗೆ ಕಾಂಗ್ರೆಸ್‌ ಮುಂದಾಗಿದೆ.

ಬಾಗ್ದೋಗ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೈರಾಮ್‌ ರಮೇಶ್, ದೇಶದಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಅನಿವಾರ್ಯವಾಗಿರುವುದರಿಂದ ಬ್ಯಾನರ್ಜಿ ಇಲ್ಲದೆ INDIA ಬಣವನ್ನು ಯೋಚಿಸಲು ಸಾಧ್ಯವಿಲ್ಲ. ಭಾರತದಲ್ಲಿ ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ಅನಿವಾರ್ಯವಾಗಿದ್ದಾರೆ. ನಮಗೆ ಬಂಗಾಳ ಮತ್ತು ಭಾರತದಲ್ಲಿ  ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ಅವರ ಅಗತ್ಯವಿದೆ, ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಮಮತಾ ಜಿ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದಾರೆ ಎಂದು ಅವರು ಹೇಳಿದರು.

INDIA ಮೈತ್ರಿಕೂಟದ ಪ್ರಮುಖ ಸ್ತಂಭಗಳಲ್ಲಿ ಟಿಎಂಸಿ ಒಂದಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಮಹತ್ವವನ್ನು ಉಲ್ಲೇಖಿಸಿದ ಜೈರಾಮ್‌ ರಮೇಶ್‌, ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಇಲ್ಲದ ಮೈತ್ರಿಕೂಟವನ್ನು ಯಾರೂ ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಟಿಎಂಸಿ ಮುಖ್ಯಸ್ಥರ ನಿರ್ಧಾರದ ಬಗ್ಗೆ ಮಾತನಾಡಿದ ರಮೇಶ್, ಸೀಟು ಹಂಚಿಕೆಯ ಬಿಕ್ಕಟ್ಟಿನ ಬಗ್ಗೆ ಮಾತುಕತೆಗೆ ಕಾಂಗ್ರೆಸ್ ಉತ್ಸುಕವಾಗಿದೆ, ನಾನು ಸೀಟು ಹಂಚಿಕೆಯ ಬಗ್ಗೆ ಯಾವುದೇ ಹೇಳಿಕೆ ನೀಡಲು ಬಯಸುವುದಿಲ್ಲ, ಆದರೆ ಈ ಬಿಕ್ಕಟ್ಟು ಕೊನೆಗೊಳ್ಳಬೇಕೆಂದು ನಾವು ಬಯಸುತ್ತೇವೆ ಮತ್ತು ನಾವು ಪರಿಹಾರವನ್ನು ಕಂಡುಕೊಳ್ಳುತ್ತೇವೆ. ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮಮತಾ ಅವರಿಗೆ ಎರಡು ಬಾರಿ ಆಹ್ವಾನ ಕಳುಹಿಸಿದ್ದೆವು. ನಮ್ಮ ಗುರಿ ಒಂದೇ ಆಗಿರುವುದರಿಂದ ಅವರು ಯಾತ್ರೆಯ ಭಾಗವಾಗಬೇಕೆಂದು ನಾವೆಲ್ಲರೂ ಬಯಸುತ್ತೇವೆ, ದೇಶದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಬೇಕು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಂಸತ್ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಅವರು ಘೋಷಿಸಿದ ಒಂದು ದಿನದ ನಂತರ ಜೈರಾಮ್‌ ರಮೇಶ್‌ ಈ ಹೇಳಿಕೆಯನ್ನು ನೀಡಿದ್ದಾರೆ.

ಗುರುವಾರ ಬೆಳಗ್ಗೆ ಬಂಗಾಳವನ್ನು ಪ್ರವೇಶಿಸಿದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಲು ಪಕ್ಷವು ಬ್ಯಾನರ್ಜಿ ಅವರನ್ನು ಆಹ್ವಾನಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಮಮತಾ ಹೇಳಿಕೆಯಲ್ಲೇನಿತ್ತು?

ಲೋಕಸಭೆ ಚುನಾವಣೆಯಲ್ಲಿ ಪ.ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲಿದೆ ಎಂದು ನಿನ್ನೆ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದರು.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಮ್ಮದು ಜಾತ್ಯತೀತ ಪಕ್ಷ ಮತ್ತು ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಅನೇಕ ಪ್ರಸ್ತಾಪಗಳನ್ನು ನೀಡಿದ್ದೇನೆ ಆದರೆ ಅವರು ಅವುಗಳನ್ನು ಮೊದಲಿನಿಂದಲೂ ತಿರಸ್ಕರಿಸಿದರು. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ಬಂಗಾಳದ ಮೂಲಕ ಹಾದುಹೋಗುವ ಬಗ್ಗೆ ತನಗೆ ತಿಳಿಸಲಾಗಿಲ್ಲ. ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ಸೌಜನ್ಯಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬರುವುದಾಗಿ ಅವರು ನನಗೆ ತಿಳಿಸಿಲ್ಲ, ಹಾಗಾಗಿ ಬಂಗಾಳದ ಮಟ್ಟಿಗೆ ನನಗೆ ಯಾವುದೇ ಸಂಬಂಧವಿಲ್ಲ. ಅಖಿಲ ಭಾರತ ಮಟ್ಟದಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ. ನಮ್ಮದು ಜಾತ್ಯತೀತ ಪಕ್ಷ ಎಂದು ಹೇಳಿದ್ದರು.

ಇದನ್ನು ಓದಿ: ಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಮುಸ್ಲಿಂ ಯುವಕನಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಗುಂಪು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...